- ಕನಕ ಜಯಂತಿ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಸಿ.ಸಿದ್ದಪ್ಪ - - - ಕನ್ನಡಪ್ರಭ ವಾರ್ತೆ ಚನ್ನಗಿರಿ
ಕನಕದಾಸರು ಕೀರ್ತನೆಗಳ ಮೂಲಕ ಸಮಾಜದಲ್ಲಿದ್ದ ಜಾತಿ ತಾರತಮ್ಯ, ಮೇಲು ಕೀಳುಗಳನ್ನು ಕಿತ್ತೊಗೆದು ಸಮಸಮಾಜ ನಿರ್ಮಿಸಲು ಮುಂದಾದ ಮಹಾನ್ ದಾಸಶ್ರೇಷ್ಠರು ಎಂದು ನಿವೃತ್ತ ಶಿಕ್ಷಕ ಸಿ.ಸಿದ್ದಪ್ಪ ಹೇಳಿದರು.ಸೋಮವಾರ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ ಮತ್ತು ತಾಲೂಕು ಕುರುಬ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ದಾಸಶ್ರೇಷ್ಠ ಕನಕದಾಸರ 537ನೇ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.
ಹಾಲುಮತ ಸಮಾಜ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯವಾಗಿದೆ. ಈ ಸಮಾಜವನ್ನು ಪರಿಶಿಷ್ಟ ಪಂಗಡ ಮೀಸಲಾತಿ ಪಟ್ಟಿಗೆ ಸೇರಿಸಬೇಕು. ಪಟ್ಟಣದ ಬಸ್ ನಿಲ್ದಾಣದ ಮುಂಭಾಗದ ವೃತ್ತಕ್ಕೆ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತ ಎಂದು ನಾಮಕರಣ ಮಾಡಿ, ಅವರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಅನುಮತಿ ನೀಡಬೇಕು ಎಂದರು.ತಾಲೂಕು ಕುರುಬ ಸಮಾಜ ಅಧ್ಯಕ್ಷ ಬೆಳಲಗೆರೆ ಡಿ.ಶಿವಪ್ಪ ಮಾತನಾಡಿ, ಪಟ್ಟಣದ ಎಲ್‌ಐಸಿ ಕಚೇರಿಯ ಬಳಿ ಕನಕ ಭವನವನ್ನು ನಿರ್ಮಾಣ ಮಾಡಲಾಗುತ್ತಿದೆ. ಈ ಕಾಮಗಾರಿ ಕೆಲಸ ಬಹು ದಿನಗಳಿಂದ ವಿಳಂಬವಾಗುತ್ತಿದೆ. ಸರ್ಕಾರ ಕನಕ ಭವನದ ನಿರ್ಮಾಣಕ್ಕೆ ಅಗತ್ಯ ಅನುದಾನ ನೀಡಬೇಕು ಎಂದು ಸಭೆಯಲ್ಲಿ ಮನವಿ ಮಾಡಿಕೊಂಡರು.
ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಜಿ.ಎಸ್.ಶಂಕರಪ್ಪ ಮಾತನಾಡಿ, ದಾರ್ಶನಿಕರು, ಶರಣರು, ಸಂತರು, ಕವಿಗಳು ಒಂದೇ ಜಾತಿಗೆ ಸೀಮಿತವಾಗಿಲ್ಲ. ಅವರು ಸಮಾಜದ ಉದ್ಧಾರಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟವರಾಗಿದ್ದಾರೆ. ಅಂಥವರ ತತ್ವ- ಆದರ್ಶಗಳು ಇಂದಿನ ಯುವಪೀಳಿಗೆ ಪಾಲಿಸಬೇಕಿದೆ ಎಂದರು.ಸಮಾರಂಭಕ್ಕೂ ಮುನ್ನ ಶ್ರೀ ಬೀರಲಿಂಗೇಶ್ವರ ದೇವಾಲಯದಿಂದ ಶ್ರೀ ಕನಕ ದಾಸರ ಮೂರ್ತಿಯನ್ನು ಅಲಂಕೃತ ವಾಹನದಲ್ಲಿಟ್ಟು, ವಿವಿಧ ವಾಧ್ಯಮೇಳಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಮುಖ್ಯ ಅತಿಥಿಗಳಾಗಿ ತಾಪಂ ಇಒ ಬಿ.ಕೆ.ಉತ್ತಮ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಡಿ.ಕಟ್ಟಿಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಯಪ್ಪ, ಕರಡೇರ್ ರಾಜು, ಪುರಸಭೆ ಸದಸ್ಯ ಪಾರಿ ಪರಮೇಶ್, ಮೊಟ್ಟೆ ಚಿಕ್ಕಣ್ಣ, ಪಟ್ಲಿ ನಾಗರಾಜ್, ಜಿತೇಂದ್ರರಾಜ್, ತಾಲೂಕು ಮರಾಠ ಸಮಾಜ ಅಧ್ಯಕ್ಷ, ಪುರಸಭೆ ಸದಸ್ಯ ಕಾಫಿಪುಡಿ ಶಿವಾಜಿ ರಾವ್, ಕರಡೇರ್ ರಾಮಣ್ಣ, ಪರಮೇಶ್ವರಪ್ಪ, ಸ್ಟಾಂಪ್ ವೆಂಡರ್ ಕೆ.ಆರ್.ಮಂಜುನಾಥ್, ಸಂತೆಬೆನ್ನೂರು ಬಸವರಾಜಪ್ಪ, ಕೆ.ಆರ್.ಗೋಪಿ, ಎ.ಸಿ.ಚಂದ್ರು, ಕನಕ ಸೇವಾ ಟ್ರಸ್ಟಿನ ಅಧ್ಯಕ್ಷ ನಾಗರಾಜ್ ಮೊದಲಾದವರು ಹಾಜರಿದ್ದರು.- - - -18ಕೆಸಿಎನ್‌ಜಿ2:
ಚನ್ನಗಿರಿ ಪಟ್ಟಣದ ಶ್ರೀ ಬೀರಲಿಂಗೇಶ್ವರ ಸ್ವಾಮಿ ದೇವಾಲಯದಿಂದ ಶ್ರೀ ಕನಕ ದಾಸರ ಮೂರ್ತಿಯನ್ನು ಅಲಂಕೃತ ವಾಹನದಲ್ಲಿ ವಿವಿಧ ವಾಧ್ಯಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.