ಜಾತಿ ಪದ್ಧತಿ ಮಧ್ಯೆ ಕನಕದಾಸ ಆರಾಧನೆ ವಿರೋಧಾಭಾಸ

KannadaprabhaNewsNetwork |  
Published : Nov 19, 2024, 12:50 AM IST
ಹೊನ್ನಾಳಿ ಫೋಟೋ 18ಎಚ್.ಎಲ್.ಐ1. ತಾಲೂಕು ಅಡಳಿತದವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದಾಸಶ್ರೇಷ್ಠ ಕನಕದಾಸರ 537ನೇ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಅವರು ಭಾಗವಹಿಸಿ ಮಾತನಾಡಿದರು. ಸಮಾಜದ ಅಧ್ಯಕ್ಷ ,ಮೋಹನ್,  ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಎ.ಸಿ. ತಹಶೀಲ್ದಾರ್, ಸೇರಿದಂತೆ ಇತರೆ ಗಣ್ಯರು ಇದ್ದರು.   | Kannada Prabha

ಸಾರಾಂಶ

16ನೇ ಶತಮಾನದಲ್ಲಿಯೇ ಜಾತಿ ಪದ್ಧತಿಯನ್ನು ಹೋಗಲಾಡಿಸಲು ಹೋರಾಟ ಮಾಡಿದವರಲ್ಲಿ ಕನಕದಾಸರು ಅಗ್ರಗಣ್ಯರಾಗಿದ್ದಾರೆ. ಅವರ ಸಮಾನತೆಯ ಪಾಠ ಅಜರಾಮರವಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಅಭಿಪ್ರಾಯಪಟ್ಟಿದ್ದಾರೆ.

- ಚನ್ನಗಿರಿ ತಾಲೂಕು ಆಡಳಿತ ನೇತೃತ್ವದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಶಾಂತನಗೌಡ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ

16ನೇ ಶತಮಾನದಲ್ಲಿಯೇ ಜಾತಿ ಪದ್ಧತಿಯನ್ನು ಹೋಗಲಾಡಿಸಲು ಹೋರಾಟ ಮಾಡಿದವರಲ್ಲಿ ಕನಕದಾಸರು ಅಗ್ರಗಣ್ಯರಾಗಿದ್ದಾರೆ. ಅವರ ಸಮಾನತೆಯ ಪಾಠ ಅಜರಾಮರವಾಗಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಅಭಿಪ್ರಾಯಪಟ್ಟರು.

ತಾಲೂಕು ಆಡಳಿತ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಭಕ್ತ ಕನಕದಾಸರ 537ನೇ ಜಯಂತಿ ಕಾರ್ಯಕ್ರಮದಲ್ಲಿ ದಾಸಶ್ರೇಷ್ಠ ಕನಕದಾಸರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಜಾತಿ ಪದ್ಧತಿ ಇಟ್ಟುಕೊಂಡು ಕನಕದಾಸರನ್ನು ಆರಾಧಿಸುವುದು ನಿರೋಧಾಭಾಸವೇ ಸರಿ. ಪ್ರಸ್ತುತ ಪ್ರತಿಯೊಂದು ವ್ಯವಸ್ಥೆಗಳಲ್ಲಿಯೂ ಜಾತೀಯತೆ ಕಾಣುತ್ತಿದೆ. ಇದರಿಂದ ಹೊರಬರಲು ಸಾಧ್ಯವಾಗುತ್ತಿಲ್ಲ ಈ ಹಿನ್ನೆಲೆಯಲ್ಲಿ ಹಿಂದೆಂದಿಗಿಂತಲೂ ಇಂದು ಕನಕದಾಸರ ಸಂದೇಶಗಳು ಹೆಚ್ಚು ಪ್ರಸ್ತತವಾಗಿದೆ ಎಂದ ಅವರು, ಉಡುಪಿಯ ಶ್ರೀಕೃಷ್ಣನ್ನನ್ನೆ ತನ್ನ ಕಡೆಗೆ ತಿರುಗುವಂತೆ ಮಾಡಿ, ಜಗತ್ತಿಗೆ ಭಕ್ತಿಯ ಪರಾಕಾಷ್ಠೆ ಮೆರೆದವರು ಕನಕದಾಸರು ಎಂದರು.

ತಾಲೂಕು ಕುರುಬ ಸಮಾಜ ಅಧ್ಯಕ್ಷ ನೆಲಹೊನ್ನೆ ಮೋಹನ ಮಾತನಾಡಿ, ದಾಸಶ್ರೇಷ್ಠ ಕನಕದಾಸರು ನಮ್ಮ ಕುರುಬ ಸಮುದಾಯದವರು ಎನ್ನುವುದೇ ಒಂದು ಹೆಮ್ಮೆಯ ವಿಷಯವಾಗಿದೆ. ಆದರೆ ಅವರು ತಮ್ಮ ಕೀರ್ತನೆ, ವಚನಗಳ ಮೂಲಕ ಇಡೀ ಮನುಕುಲದ ಆರಾಧ್ಯ ದೈವ ಎನಿಸಿದ್ದಾರೆ ಎಂದು ಹೇಳಿದರು.

ಕುರುಬ ಸಮಾಜದ ಪ್ರಧಾನ ಕಾರ್ಯದರ್ಶಿ, ಎಂ.ಆರ್. ಮಹೇಶ್ ಕುರುಬ, ಸಮಾಜದ ಮಹತ್ವ, ಕನಕದಾಸರ ಜೀವನ ಚರಿತ್ರೆ ಕುರಿತು ಮಾತನಾಡಿದರು. ಪುರಸಭೆ ಸದಸ್ಯ ಹೊಸಕೇರಿ ಸುರೇಶ್, ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಮಾತನಾಡಿದರು.

ತಹಸೀಲ್ದಾರ್ ಪಟ್ಟರಾಜ ಗೌಡ ಮಾತನಾಡಿ, ತಾಲೂುಕು ಅಡಳಿತ ವತಿಯಿಂದ 32ಕ್ಕೂ ಹೆಚ್ಚು ಜಯಂತಿಗಳನ್ನು ಆಚರಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ಜೊತೆಯಲ್ಲಿ ಸಮಾಜದ ಮುಖಂಡರೆಲ್ಲರೂ ಸೇರಿ, ಸಹಕರಿಸಿದರೆ ಈ ಆಚರಣೆಗಳಿಗೆ ಇನ್ನೂ ಹೆಚ್ಚಿನ ಮೆರಗು ಬರುತ್ತದೆ ಎಂದರು.

ಸಮಾಜದ ಮುಖಂಡರಾದ ಕುಂಬಳೂರು ವಾಗೀಶ, ಕತ್ತಿಗೆ ನಾಗರಾಜ್, ಪುರಸಭೆ ಅಧ್ಯಕ್ಷ ಎ.ಕೆ.ಮೈಲಪ್ಪ, ಉಪಾದ್ಯಕ್ಷೆ ಸಾವಿತ್ರಮ್ಮ ವಿಜೇಂದ್ರಪ್ಪ, ಮುಖ್ಯಾಧಿಕಾರಿ ಟಿ.ಲೀಲಾವತಿ, ಮುಖಂಡ ಸತ್ತಿಗೆ ಲೋಕೇಶ್, ವಿಜೇಂದ್ರಪ್ಪ, ತಾಪಂ ಇಒ ಪ್ರಕಾಶ್, ತಾಲೂಕು ಅಧಿಕಾರಿಗಳು, ಕುರುಬ ಸಮಾಜ ಮುಖಂಡರು ಉಪಸ್ಥಿತರಿದ್ದರು.

- - -

ಬಾಕ್ಸ್‌ ಜನಸಾಮಾನ್ಯರಿಗೂ ಅರ್ಥವಾಗುವ ರೀತಿಯಲ್ಲಿ ಕನಕದಾಸರು ಕೀರ್ತನೆಗಳನ್ನು ರಚಿಸಿ, ಮನುಷ್ಯ ಸಮಾಜದಲ್ಲಿ ಮೌಲ್ಯಯುತ ಜೀವನ ನಡೆಸುವ ಮಾರ್ಗಗಳನ್ನು ಸೂಚಿಸಿದ್ದಾರೆ. "ಕುಲ ಕುಲ ಎಂದು ಬಡಿದಾಡದಿರಿ, ನಿಮ್ಮ ಕುಲದ ನೆಲೆಯನೇನಾದರೂ ಬಲ್ಲಿರಾ? " ಎಂದು ಅವರು ಪ್ರಶ್ನಿಸಿದ್ದರು

- ಡಿ.ಜಿ.ಶಾಂತನಗೌಡ, ಶಾಸಕ, ಹೊನ್ನಾಳಿ ಕ್ಷೇತ್ರ

- - - -18ಎಚ್.ಎಲ್.ಐ1: ಹೊನ್ನಾಳಿ ತಾಲೂಕು ಕಚೇರಿಯಲ್ಲಿ ಕನಕದಾಸರ 537ನೇ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಿ.ಜಿ.ಶಾಂತನಗೌಡ ಮಾತನಾಡಿದರು.

PREV

Recommended Stories

ಮದ್ದೂರು ಗಣೇಶ ಗಲಾಟೆಗೆ ಪೂರ್ಣ ಮುಸ್ಲಿಮರೇ ಕಾರಣ: ಸಚಿವ ಚಲುವ
ಬುರುಡೆ ಕೇಸ್‌ : ಸಾಕ್ಷಿದಾರರ ಬಂಧನ..? ಮಟ್ಟಣ್ಣವರ್‌, ಜಯಂತ್‌, ಅಭಿಷೇಕ್, ಮನಾಫಾ ವಿಠಲಗೆ ಗ್ರಿಲ್