ಉಡುಪಿ: ನಾಡು ಕಂಡ ಅಪ್ರತಿಮ ದಾಸರಾಗಿರುವ ಕನಕದಾಸರಿಗೂ ಉಡುಪಿಗೂ ಅಭಿನಭಾವ ಸಂಬಂಧವಿದೆ. ಕನಕದಾಸರ ಭಕ್ತಿಗೆ ಒಲಿದ ಉಡುಪಿಯ ಕೃಷ್ಣ ಕಿಂಡಿಯಲ್ಲಿ ದರ್ಶನ ನೀಡಿರುವುದು ಇತಿಹಾಸ ಪುಟದಲ್ಲಿ ಶಾಶ್ವತವಾಗಿದೆ. ಇಂದೂ ಭಕ್ತರು ಕನಕನ ಕಿಂಡಿ ಮೂಲಕವೇ ಶ್ರೀಕೃಷ್ಣನ ದರ್ಶನ ಪಡೆಯುವುದು ಕನಕದಾಸರ ಭಕ್ತಿಯ ಪ್ರತೀಕವಾಗಿದೆ ಎಂದು ಶಾಸಕ ಯಶಪಾಲ್ ಸುವರ್ಣ ಹೇಳಿದರು. ಅವರು ಶುಕ್ರವಾರ ನಗರದ ಗೋವಿಂದ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಆಶ್ರಯದಲ್ಲಿ ನಡೆದ ಶ್ರೀ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಕನಕದಾಸರು ಜಾತಿ, ಮತ ಮತ್ತು ಸಮಾಜದ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಹೇಳಿ, ಸಮಾಜ ಹಾಗೂ ದಾಸಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಸೇವೆ ಸಲ್ಲಿಸಿದವರು ಎಂದರು.
ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಉಪನ್ಯಾಸಕಿ ಪ್ರಜ್ಞಾ ಮಾರ್ಪಳ್ಳಿ ಅವು ಕನಕದಾಸರ ಜೀವನ ಸಾಧನೆ ಬಗ್ಗೆ ಉಪನ್ಯಾಸ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಆಕಾಶವಾಣಿ ಉದ್ಯೋಷಕ ಪ್ರದೀಪ್ ಡಿ. ಎಂ. ಹಾವಂಜೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.