ಸಮಾಜ ಸುಧಾರಣೆಗೆ ಶ್ರಮಿಸಿದ ಕನಕರು

KannadaprabhaNewsNetwork |  
Published : Nov 19, 2024, 12:52 AM IST
18ಕೆಬಿಪಿಟಿ.1.ಬಂಗಾರಪೇಟೆ ಪಟ್ಟಣದಲ್ಲಿ ಕನಕದಾಸರ ಜಯಂತಿಯನ್ನು ಶಾಸಕ ನಾರಾಯಸ್ವಾಮಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಬಂಗಾರಪೇಟೆ ಪಟ್ಟಣದಲ್ಲಿ ಕುರುಬ ಸಮುದಾಯದ ಭವನ ನಿರ್ಮಾಣ ಮಾಡಲು ಅನುದಾನವನ್ನು ಮಂಜೂರು ಮಾಡಲು ಮತ್ತು ಕನಕದಾಸ ಹಾಗು ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ತಗಲುವ ವೆಚ್ಚವನ್ನು ವೈಯಕ್ತಿಕವಾಗಿ ನೀಡುವುದಾಗಿ ಶಾಸಕ ನಾರಾಯಣಸ್ವಾಮಿ ಭರವಸೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬಂಗಾರಪೇಟೆ

ಜಾತಿ ವ್ಯವಸ್ಥೆ, ಸಾಮಾಜಿಕ ತಾರತಮ್ಯ ಮತ್ತು ಅಸಮಾನತೆ ವಿರುದ್ಧ ಕೀರ್ತನೆಗಳ ಮೂಲಕ ಜನಜಾಗೃತಿಗೊಳಿಸಿದ್ದ ಕನಕರು ದಾಸಶ್ರೇಷ್ಠರು ಮಾತ್ರವಲ್ಲ, ಒಬ್ಬ ಅಪೂರ್ವ ಸಮಾಜ ಸುಧಾರಕ ಎಂದು ಶಾಸಕ ಎಸ್ ಎನ್ ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ಪುರಸಭೆ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಕರ್ನಾಟಕ ಪ್ರದೇಶ ಕುರುಬರ ಸಂಘದ ಸಹಯೋಗದಲ್ಲಿ ದಾಸಶ್ರೇಷ್ಠ ಭಕ್ತ ಕನಕದಾಸರ 537 ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜವನ್ನು ಸುಧಾರಿಸುವ ನಿಟ್ಟಿನಲ್ಲಿ ಆದಿಕೇಶವ ಕಾವ್ಯನಾಮ ಮೂಲಕ ಕನ್ನಡ ಸಾಹಿತ್ಯಕ್ಕೆ ತಮ್ಮ ಕೀರ್ತನೆಗಳ ಮೂಲಕ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದರು.

ಸಮುದಾಯ ಭವನ, ಪುತ್ಥಳಿ

16ನೇ ಶತಮಾನದಲ್ಲಿಯೇ ಜಾತಿವ್ಯವಸ್ಥೆ, ಮೌಢ್ಯದ ವಿರುದ್ಧ ಧ್ವನಿಯೆತ್ತಿ ತಮ್ಮ ಅನೇಕ ಕೀರ್ತನೆಗಳ ಮುಖಾಂತರ ಅರಿವು ಮೂಡಿಸಿದ ಮತ್ತು ಸರ್ವಸ್ವ ವನ್ನು ತ್ಯಾಗ ಮಾಡಿ ಸರಳವಾದ ಜೀವನವನ್ನು ಅಳವಡಿಸಿಕೊಂಡರು ಮಹಾನ್ ಪುರುಷ ಕನಕದಾಸರು. ಪಟ್ಟಣದಲ್ಲಿ ಕುರುಬ ಸಮುದಾಯದ ಭವನ ನಿರ್ಮಾಣ ಮಾಡಲು ಅನುದಾನವನ್ನು ಮಂಜೂರು ಮಾಡುವುದಾಗಿ ಮತ್ತು ಕನಕದಾಸ ಹಾಗು ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ನಿರ್ಮಾಣ ತಗಲುವ ವೆಚ್ಚವನ್ನು ವೈಯಕ್ತಿಕವಾಗಿ ನೀಡುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭ ದಲ್ಲಿ ಕುರುಬರ ಸಂಘದ ಅಧ್ಯಕ್ಷ ಎಲ್.ರಾಮಕೃಷ್ಣ, ಸಮಾಜ ಸೇವಕ ಚಿಕ್ಕವಲಗಮಾದಿ ಮುನಿರಾಜು ತಹಸೀಲ್ದಾರ್ ಎಸ್. ವೆಂಕಟೇಶಪ್ಪ, ಇಒ ಎಚ್. ರವಿಕುಮಾರ್, ಬಿಇಒ ಗುರುಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಸತ್ಯನಾರಾಯಣ. ಪುರಸಭೆ ಅಧ್ಯಕ್ಷ ಎಂ. ಗೋವಿಂದ, ಉಪಾಧ್ಯಕ್ಷ ಚಂದ್ರವೇಣಿ ಮಂಜುನಾಥ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಸಿ. ಅಪ್ಪಯ್ಯಗೌಡ, ಬೂದಿಕೋಟೆ ಬ್ಲಾಕ್ ಕಾಂಗ್ರೆಸ್, ಅಧ್ಯಕ್ಷ ಕೆ.ವಿ. ನಾಗರಾಜ್ ಮತ್ತಿತರರು ಇದ್ದರು.

PREV

Recommended Stories

ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!