ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಮ್ಯೂಸಿಕ್ ಅಕಾಡೆಮಿ ಟ್ರಸ್ಟ್ ವತಿಯಿಂದ ಸ್ಥಾಪಕ ಗುರು, ಸಂಗೀತರತ್ನ, ಋಷಿಗಂಧರ್ವ ವಿ. ಕಾಂಚನ ವೆಂಕಟಸುಬ್ರಹ್ಮಣ್ಯ ಅವರ ೧೦೫ನೇ ಜನ್ಮ ವರ್ಷ ಮಹೋತ್ಸವದ ಅಂಗವಾಗಿ ಕಾಂಚನದಲ್ಲಿ ನಿರ್ಮಾಣವಾಗಿರುವ ನೂತನ ಸಂಗೀತ ಕಲಾ ಶಾಲೆ, ಸಭಾ ಭವನ ಹಾಗೂ ಭೋಜನ ಶಾಲೆಯ ಲೋಕಾರ್ಪಣೆಯ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಗುರುವಾರ ಸಂಜೆ ಆರಂಭವಾಗಿದ್ದು, ೭೨ನೇ ವರ್ಷದ ‘ಕಾಂಚನೋತ್ಸವ ೨೦೨೬’ ಕೂಡ ಆರಂಭ ಸ್ತುತಿಯಲ್ಲಿ ಚಾಲನೆ ಪಡೆಯಿತು.
ಉಪ್ಪಿನಂಗಡಿ: ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಮ್ಯೂಸಿಕ್ ಅಕಾಡೆಮಿ ಟ್ರಸ್ಟ್ ವತಿಯಿಂದ ಸ್ಥಾಪಕ ಗುರು, ಸಂಗೀತರತ್ನ, ಋಷಿಗಂಧರ್ವ ವಿ. ಕಾಂಚನ ವೆಂಕಟಸುಬ್ರಹ್ಮಣ್ಯ ಅವರ ೧೦೫ನೇ ಜನ್ಮ ವರ್ಷ ಮಹೋತ್ಸವದ ಅಂಗವಾಗಿ ಕಾಂಚನದಲ್ಲಿ ನಿರ್ಮಾಣವಾಗಿರುವ ನೂತನ ಸಂಗೀತ ಕಲಾ ಶಾಲೆ, ಸಭಾ ಭವನ ಹಾಗೂ ಭೋಜನ ಶಾಲೆಯ ಲೋಕಾರ್ಪಣೆಯ ಪೂರ್ವಭಾವಿಯಾಗಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಗುರುವಾರ ಸಂಜೆ ಆರಂಭವಾಗಿದ್ದು, ೭೨ನೇ ವರ್ಷದ ‘ಕಾಂಚನೋತ್ಸವ ೨೦೨೬’ ಕೂಡ ಆರಂಭ ಸ್ತುತಿಯಲ್ಲಿ ಚಾಲನೆ ಪಡೆಯಿತು.
ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಸಂಗೀತ ಕಲಾ ಶಾಲೆಯಲ್ಲಿ ವೇ. ಬ್ರ. ನಾರಾಯಣ ಬಡಿಕಿಲ್ಲಾಯರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ ನಡೆಯಿತು. ೭೨ನೇ ವರ್ಷದ ಶ್ರೀ ತ್ಯಾಗರಾಜ, ಶ್ರೀ ಪುರಂದರದಾಸರ ಆರಾಧನಾ ಮಹೋತ್ಸವ, ಸ್ಥಾಪಕ ಗುರು, ಸಂಗೀತ ರತ್ನ ಕಾಂಚನ ವೆಂಕಟಸುಬ್ರಮಣ್ಯ ಹಾಗೂ ಕರ್ನಾಟಕ ಕಲಾಶ್ರೀ ಕಾಂಚನ ವಿ. ಸುಬ್ಬರತ್ನಂ ಅವರ ಪುಣ್ಯ ಸ್ಮರಣೆಯ ಅಂಗವಾಗಿ ಆರಂಭ ಸ್ತುತಿಯಲ್ಲಿ ಸಂವಿತ್ ಆರ್.ಎಸ್. ಅವರು ತಬಲ ಹಾಗೂ ಕೆ.ಜೆ. ಋತ ವಯಲಿನ್ ನುಡಿಸಿದರು. ಸ್ವರ ಲಯ ಲಹರಿಯಲ್ಲಿ ಕೆ.ಜೆ. ಋತ, ಅಭಯ್ ಸಂಪಿಗೆತ್ತಾಯ, ಶ್ರೀಕೃಷ್ಣ ಭಟ್, ತೇಜಸ್ವಿ ಸಂಜಯ್, ವರ್ಚಸ್ ವಿ., ಅಪ್ರಮೇಯ ಹೊಸಹಳ್ಳಿ, ಸಂವಿತ್ ಆರ್.ಎಸ್., ಶಮಿತ್ ಕಲ್ಕೂರ್, ಸಾಕೇತರಾಮ್ ಫಣಿ ವೇದಾಲ ಅವರು ಸಂಗೀತ ವಾದ್ಯಗಳನ್ನು ನುಡಿಸಿ ಸಂಗೀತ ಪ್ರೇಮಿಗಳ ಮನಗೆದ್ದರು. ರಾತ್ರಿ ಕಾಂಚನ ಶ್ರೀ ಮ್ಯೂಸಿಕ್ ಅಕಾಡೆಮಿಯ ಶಿಷ್ಯರು, ಪ್ರಶಿಷ್ಯರು ಮತ್ತು ಅತಿಥಿ ಕಲಾವಿದರಿಂದ ಸಂಗೀತ ಸೇವೆ ನಡೆಯಿತು. ಈ ಸಂಧರ್ಭ ಕಾಂಚನ ಶ್ರೀ ಲಕ್ಷ್ಮೀನಾರಾಯಣ ಮ್ಯೂಸಿಕ್ ಅಕಾಡೆಮಿ ಟ್ರಸ್ಟ್ ಕಾರ್ಯದರ್ಶಿ ಕೆ . ರೋಹಿಣಿ ಸುಬ್ಬರತ್ನಂ, ಕಾಂಚನ ಸಹೋದರಿಯರಾದ ಕಾಂಚನ ಶ್ರೀರಂಜಿನಿ ಮತ್ತು ಕಾಂಚನ ಶ್ರುತಿರಂಜಿನಿ, ಸುಮನಸರಂಜಿನಿ, ರಾಜಶೇಖರ್ ಹೀಲ್ಯಾರು, ಪ್ರದೀಪ್ ಕುಮಾರ್ ಕಲ್ಕೂರ, ಕೆ. ಯು. ಜಯಚಂದ್ರ ರಾವ್, ಕಾಂಚನ ನಡ್ಪ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಟ್ರಸ್ಟ್ ಅಧ್ಯಕ್ಷ ಶ್ರೀಧರ ಗೌಡ ನಡ್ಪ, ಮೋಹನಚಂದ್ರ ಕಾಂಚನ, ಕೃಷ್ಣಪ್ರಸಾದ್, ಮುಕುಂದ ಗೌಡ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.