ಕನ್ಹೇರಿ ಮಠದ ಸ್ವಾಮೀಜಿಗೆ ಧಾರವಾಡಕ್ಕೂ ನಿರ್ಬಂಧ

KannadaprabhaNewsNetwork |  
Published : Nov 06, 2025, 02:15 AM IST
5ಡಿಡಬ್ಲೂಡಿ1ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜ | Kannada Prabha

ಸಾರಾಂಶ

ಧಾರವಾಡ ಹಾಗೂ ಕುಂದಗೋಳದಲ್ಲಿ ಕನ್ಹೇರಿ ಮಠದ ಸ್ವಾಮೀಜಿ ಭಕ್ತರು ಶ್ರೀಗಳಿಗೆ ಯಾವುದೇ ಕಾರಣಕ್ಕೂ ನಿರ್ಬಂಧ ಹೇರಬಾರದು ಎಂದು ಪ್ರತಿಭಟನೆಗಳನ್ನು ಸಹ ಮಾಡಿದ್ದರು. ಆದರೆ, ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗೃತಾ ಕ್ರಮವಾಗಿ ನ. 5ರಿಂದ ಜನವರಿ 3ರ ವರೆಗೆ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಬುಧವಾರ ಆದೇಶಿಸಿದ್ದಾರೆ.

ಧಾರವಾಡ:

ಲಿಂಗಾಯತ ಮಠಾಧೀಶರ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆಂದು ಬಸವ ತತ್ವ ಅನುಯಾಯಿಗಳ ಒತ್ತಡದ ಹಿನ್ನೆಲೆಯಲ್ಲಿ ಇದೀಗ ಮಹಾರಾಷ್ಟ್ರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ಧಾರವಾಡ ಜಿಲ್ಲೆಗೂ ನಿರ್ಬಂಧ ಹೇರಲಾಗಿದೆ.

ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ‌ ಗ್ರಾಮದಲ್ಲಿ ನ. 7ರಂದು ನಡೆಯಲಿರುವ ಸಹಜಾನಂದ ಸಪ್ತಾಹಕ್ಕೆ ಕನ್ಹೇರಿ ಮಠದ ಸ್ವಾಮೀಜಿ ಆಗಮಿಸಬೇಕಿತ್ತು. ಆದರೆ, ಲಿಂಗಾಯತ ಮಠಾಧೀಶರು, ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕನ್ಹೇರಿ ಮಠದ ಸ್ವಾಮೀಜಿ ಧಾರವಾಡಕ್ಕೆ ಬರಲು ಬಿಡುವುದಿಲ್ಲ. ಒಂದು ವೇಳೆ ಬಂದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಜಾಗತಿಕ‌ ಲಿಂಗಾಯತ ಮಹಾಸಭಾ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತ್ತು.

ಈ ಮಧ್ಯೆ ಧಾರವಾಡ ಹಾಗೂ ಕುಂದಗೋಳದಲ್ಲಿ ಕನ್ಹೇರಿ ಮಠದ ಸ್ವಾಮೀಜಿ ಭಕ್ತರು ಶ್ರೀಗಳಿಗೆ ಯಾವುದೇ ಕಾರಣಕ್ಕೂ ನಿರ್ಬಂಧ ಹೇರಬಾರದು ಎಂದು ಪ್ರತಿಭಟನೆಗಳನ್ನು ಸಹ ಮಾಡಿದ್ದರು. ಆದರೆ, ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗೃತಾ ಕ್ರಮವಾಗಿ ನ. 5ರಿಂದ ಜನವರಿ 3ರ ವರೆಗೆ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಬುಧವಾರ ಆದೇಶಿಸಿದ್ದಾರೆ.

ಕನ್ಹೇರಿ ಮಠದ ಸ್ವಾಮೀಜಿಗೆ ಈಗಾಗಲೇ ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ಪ್ರವೇಶಕ್ಕೂ ನಿರ್ಬಂಧ ಹೇರಿದ್ದನ್ನು ಸ್ಮರಿಸಬಹುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ