ಕಂಕನಾಡಿ: ಇಂದು ರೋಹನ್ ಇಥೋಸ್ ಭೂಮಿಪೂಜೆ

KannadaprabhaNewsNetwork |  
Published : Apr 19, 2025, 12:41 AM IST
ನಿರ್ಮಾಣವಾಗಲಿರುವ ಅಪಾರ್ಟ್‌ಮೆಂಟ್. | Kannada Prabha

ಸಾರಾಂಶ

ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ರೋಹನ್ ಇಥೋಸ್ ಭೂಮಿ ಪೂಜೆ ಶನಿವಾರ ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ರೋಹನ್ ಇಥೋಸ್ ಭೂಮಿ ಪೂಜೆ ಶನಿವಾರ ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ.

ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು ಐಶಾರಾಮಿ ಹಾಗೂ ಆಧುನಿಕ ಸೌಕರ್ಯಗಳನ್ನು ಒಳಗೊಂಡಿದೆ. ಈ ಯೋಜನೆಯು 15 ಮಹಡಿಗಳನ್ನು ಹೊಂದಿದ್ದು, ಪ್ರತಿ ಮಹಡಿಯಲ್ಲಿ 1640 ರಿಂದ 2025 ಚದರ ಅಡಿಗಳ 3 ಬಿಎಚ್‌ಕೆಯ ಮತ್ತು 2515 ರಿಂದ 2975 ಚದರ ಅಡಿಗಳ 4 ಬಿಎಚ್‌ಕೆಯ ಎರಡು ಫ್ಲ್ಯಾಟ್‌ಗಳಿದ್ದು, ಒಟ್ಟು 28 ಅಪಾರ್ಟ್ಮೆಂಟ್‌ಗಳಿರಲಿವೆ.

ರೋಹನ್ ಇಥೋಸ್ ವಿಶ್ವ ದರ್ಜೆಯ ಸೌಲಭ್ಯಗಳೊಂದಿಗೆ ಇನ್ಫಿನಿಟಿ ಸ್ವಿಮ್ಮಿಂಗ್ ಫೂಲ್, ಆಧುನಿಕ ಜಿಮ್, ಇಂಡೋರ್ ಗೇಮ್ಸ್, ಯೋಗ ರೂಮ್, ಮಕ್ಕಳ ಆಟದ ವಲಯ ಮತ್ತು ಬಹು ಉಪಯೋಗಿ ಸಭಾಂಗಣವನ್ನು ಹೊಂದಿದೆ. ತಳ ಮತ್ತು ಕೆಳ ಅಂತಸ್ತುಗಳಲ್ಲಿ ವಿಶಾಲ ಪಾರ್ಕಿಂಗ್ ಸೌಲಭ್ಯವಿದೆ. ಇಥೋಸ್‌ ಹೊಸ ಟ್ರೆಂಡ್, ಗುಣಮಟ್ಟ ಮತ್ತು ಗ್ರಾಹಕರ ಅನುಕೂಲತೆಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣಗೊಳ್ಳುತ್ತಿದೆ.

ಮೂರು ದಶಕಗಳಿಗೂ ಹೆಚ್ಚು ಕಾಲದ ಉನ್ನತ ಪರಂಪರೆಯನ್ನು ಹೊಂದಿರುವ ರೋಹನ್ ಕಾರ್ಪೊರೇಶನ್ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ವಿಶ್ವಾಸಾರ್ಹ ಹೆಸರನ್ನು ಗಳಿಸಿದೆ. ಸಂಸ್ಥೆಯು ಕರಾವಳಿಯಲ್ಲಿ ಅನೇಕ ರೆಸಿಡೆನ್ಶಿಯಲ್, ಕಮರ್ಶಿಯಲ್ ಮತ್ತು ಲೇಔಟ್ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಹೆಚ್ಚಿನ ಮಾಹಿತಿ ಅಥವಾ ಬುಕಿಂಗ್‌ಗಾಗಿ, ರೋಹನ್ ಕಾರ್ಪೊರೇಶನ್ ದೂರವಾಣಿ ಸಂಖ್ಯೆ: 98454 90100, ಈಮೇಲ್: info@rohancorporation.in, ಜಾಲತಾಣ: www.rohancorporation.in ಅಥವಾ ರೋಹನ್ ಕಾರ್ಪೋರೇಶನ್, ರೋಹನ್ ಸಿಟಿ, ಬಿಜೈ, ಮಂಗಳೂರು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ