ಗೋವಾದಲ್ಲಿ ಶೀಘ್ರವೇ ಕನ್ನಡ ಭವನ: ಸಚಿವ‌ ತಂಗಡಗಿ

KannadaprabhaNewsNetwork |  
Published : Dec 17, 2023, 01:45 AM IST
ಗೋವಾದಲ್ಲಿ ಸಚಿವ ಶಿವರಾಜ ತಂಗಡಗಿ ಕನ್ನಡ ಭವನ ನಿರ್ಮಿಸಲು ಸ್ಥಳ ಪರಿಶೀಲಿಸಿದರು. | Kannada Prabha

ಸಾರಾಂಶ

ಕೇರಳ, ಮಹಾರಾಷ್ಟ್ರದಲ್ಲಿ ಅಲ್ಲಿನ‌ ‌ಸರ್ಕಾರ ನೀಡಿದ ಸ್ಥಳದಲ್ಲಿ ಕನ್ನಡ ಭವನ ನಿರ್ಮಿಸಲಾಗಿದೆ. ಆದರೆ‌ ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲು ಜಾಗ ನೀಡುವಂತೆ ಹಲವು ಬಾರಿ ಇಲ್ಲಿನ‌ ಸರ್ಕಾರಕ್ಕೆ ಕೋರಲಾಗಿತ್ತು. ಆದರೆ ಭೂಮಿ ನೀಡಲು ಗೋವಾ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಆದರೆ ಈ ಬಾರಿ ನಾವೇ ಒಂದು ಎಕರೆ ಭೂಮಿ‌ ಖರೀದಿಸಿ ಕನ್ನಡ ಭವನ ನಿರ್ಮಾಣ ಮಾಡುತ್ತೇವೆ

ಕೊಪ್ಪಳ: ಗೋವಾ ರಾಜ್ಯದಲ್ಲಿ ಶೀಘ್ರವೇ ಕನ್ನಡ ಭವನ ನಿರ್ಮಿಸಲಾಗುವುದು ಎಂದು ಕನ್ನಡ, ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಗೋವಾದಲ್ಲಿನ ಕನ್ನಡಿಗರಿಗೆ ಭರವಸೆ ನೀಡಿದ್ದಾರೆ.

ಸಚಿವರಾದ ಬಳಿಕ‌ ಮೊದಲ ಬಾರಿಗೆ ಗೋವಾ ರಾಜ್ಯಕ್ಕೆ ಶನಿವಾರ ಭೇಟಿ ನೀಡಿದ ಸಚಿವರು, ದಕ್ಷಿಣ ಗೋವಾದ ಜುವಾರಿ ನಗರದಲ್ಲಿನ ಕನ್ನಡಿಗರ ಸಮಸ್ಯೆ ಆಲಿಸಿದ ಬಳಿಕ‌ ಅವರು ಮಾತನಾಡಿದರು.ಕೇರಳ, ಮಹಾರಾಷ್ಟ್ರದಲ್ಲಿ ಅಲ್ಲಿನ‌ ‌ಸರ್ಕಾರ ನೀಡಿದ ಸ್ಥಳದಲ್ಲಿ ಕನ್ನಡ ಭವನ ನಿರ್ಮಿಸಲಾಗಿದೆ. ಆದರೆ‌ ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲು ಜಾಗ ನೀಡುವಂತೆ ಹಲವು ಬಾರಿ ಇಲ್ಲಿನ‌ ಸರ್ಕಾರಕ್ಕೆ ಕೋರಲಾಗಿತ್ತು. ಆದರೆ ಭೂಮಿ ನೀಡಲು ಗೋವಾ ಸರ್ಕಾರ ಮನಸ್ಸು ಮಾಡುತ್ತಿಲ್ಲ. ಆದರೆ ಈ ಬಾರಿ ನಾವೇ ಒಂದು ಎಕರೆ ಭೂಮಿ‌ ಖರೀದಿಸಿ ಕನ್ನಡ ಭವನ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.ದಕ್ಷಿಣ ಗೋವಾದಲ್ಲಿ ಒಂದೆರಡು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಈ‌ ಭಾಗದ ಜಿಲ್ಲಾಧಿಕಾರಿ‌ ಸಂಪರ್ಕಿಸಿ, ಶೀಘ್ರವೇ ಜಾಗದ ಖರೀದಿ ಪ್ರಕ್ರಿಯೆ ಅಂತಿಮಗೊಳಿಸಲಾಗುವುದು. ಸಿಎಂ ಸಿದ್ದರಾಮಯ್ಯ ಜತೆ ಚರ್ಚಿಸಿ ಮುಂದಿನ‌ ಆಯ-ವ್ಯಯದಲ್ಲಿ ಕನ್ನಡಭವನ ನಿರ್ಮಾಣ ಬಗ್ಗೆ ಘೋಷಿಸಿ, ಅವರಿಂದಲೇ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಹೇಳಿದರು.‌ಒಗ್ಗಟ್ಟು ಎಲ್ಲಿ‌ ಇರಲಿದೆಯೋ ಅಲ್ಲಿ ಶಕ್ತಿ ಇರಲಿದೆ. ಗೋವಾದಲ್ಲಿ 15 ಲಕ್ಷ ಜನಸಂಖ್ಯೆ ಇದ್ದು, ಈ ಪೈಕಿ ನಾಲ್ಕರಿಂದ ಐದು ಲಕ್ಷ‌ ಕನ್ನಡಿಗರೇ ಇದ್ದಾರೆ. ಮನಸ್ಸು ಮಾಡಿದ್ರೆ ಮೂರ್ನಾಲ್ಕು ಮಂದಿ ಶಾಸಕರನ್ನು ನೀವೇ ಆಯ್ಕೆ ಮಾಡಬಹುದು ಎಂದರು.ಗೋವಾ ರಾಜ್ಯ ಶೇ. 70 ಪ್ರವಾಸೋದ್ಯಮ ಅವಲಂಬಿಸಿದೆ. ಇಲ್ಲಿಗೆ ಭೇಟಿ ನೀಡುವವರಲ್ಲಿ ಕನ್ನಡಿಗರೇ ಹೆಚ್ಚಿದ್ದಾರೆ. ಇಲ್ಲಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ‌ ಕನ್ನಡಿಗರು ಹೆಚ್ಚಿದ್ದಾರೆ. ಗೋವಾ ಕನ್ನಡಿಗರಿಗೆ ಸರ್ಕಾರ ಮೂಲಭೂತ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರಕಾಶ್ ಮತ್ತಿಹಳ್ಳಿ, ಗೋವಾ ಕಸಾಪ, ಗೋವಾ ರಕ್ಷಣಾ ವೇದಿಕೆ ಸೇರಿದಂತೆ ವಿವಿಧ ಗೋವಾ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.ಪುನರ್ವಸತಿಗೆ ಆಗ್ರಹ: ಇನ್ನು ಗೋವಾ ಬೈನಾದಲ್ಲಿ ಉತ್ತರ ಕರ್ನಾಟಕದವರೇ ಹೆಚ್ಚಾಗಿ ವಾಸವಾಗಿದ್ದು, ಸಂತ್ರಸ್ತರಾಗಿರುವ ಅವರಿಗೆ ಇಲ್ಲಿ ತನಕ ಗೋವಾ ಸರ್ಕಾರ ಪುನರ್ವಸತಿ ಕಲ್ಪಿಸಿಕೊಟ್ಟಿಲ್ಲ. ಸಂತ್ರಸ್ತರಿಗೆ ಗೋವಾ ಸರ್ಕಾರ ಪುನರ್ವಸತಿ ಕಲ್ಪಿಸಿಕೊಡಬೇಕು ಎಂದು ಸಚಿವ ಶಿವರಾಜ್ ತಂಗಡಗಿ ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?