ಕನ್ನಡ ಆಚರಣೆ ನವಂಬರಿಗೆ ಮಾತ್ರ ಸೀಮಿತವಾಗದಿರಲಿ

KannadaprabhaNewsNetwork |  
Published : Nov 02, 2026, 03:45 AM IST
ಹರಪನಹಳ್ಳಿಯ ಪ್ರವಾಸಿ ಮಂದಿರ ಬಳಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಭುವನೇಶ್ವರಿ ಭಾವಚಿತ್ರದ ಮೆರವಣಿಗೆ ವಿವಿಧ ಕಲಾ ತಂಡಗಳೊಂದಿಗೆ ವೈ‍ಭವದಿಂದ ಜರುಗಿತು. ಶಾಸಕಿ ಎಂ.ಪಿ.ಲತಾ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ವಿ.ಅಂಜಿನಪ್ಪ, ಇತರರು ಇದ್ದರು. | Kannada Prabha

ಸಾರಾಂಶ

ಕರ್ನಾಟಕದ ಏಕೀಕರಣಕ್ಕಾಗಿ ಅನೇಕರು ಶ್ರಮಿಸಿದ್ದಾರೆ, ಅವರನ್ನು ಇಂದು ಸ್ಮರಿಸುವ ಮೂಲಕ ಕನ್ನಡದ ಅಸ್ಮಿತೆ ಉಳಿಸಿ ಬೆಳೆಸಲು ನಾವೆಲ್ಲರೂ ನಿರಂತರ ಶ್ರಮಿಸಬೇಕು

ಹರಪನಹಳ್ಳಿ: ಕನ್ನಡದ ಆಚರಣೆ ಕೇವಲ ನವೆಂಬರ್ ತಿಂಗಳಿಗಷ್ಟೇ ಸೀಮಿತವಾಗಬಾರದು, ಅದು ನಮ್ಮ ದೈನಂದಿನ ಜೀವನದ ಭಾಗವಾಗಬೇಕು ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

ನಗರದ ಸಪಪೂ ಕಾಲೇಜಿನ ಆವರಣದಲ್ಲಿ ತಾಲೂಕಾಡಳಿತದಿಂದ ಭಾನುವಾರ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕದ ಏಕೀಕರಣಕ್ಕಾಗಿ ಅನೇಕರು ಶ್ರಮಿಸಿದ್ದಾರೆ, ಅವರನ್ನು ಇಂದು ಸ್ಮರಿಸುವ ಮೂಲಕ ಕನ್ನಡದ ಅಸ್ಮಿತೆ ಉಳಿಸಿ ಬೆಳೆಸಲು ನಾವೆಲ್ಲರೂ ನಿರಂತರ ಶ್ರಮಿಸಬೇಕು, ನಿತ್ಯ ಕನ್ನಡ ಭಾಷೆ, ಸಾಹಿತ್ಯ ಅಧ್ಯಯನ ಮಾಡಬೇಕು, ಕನ್ನಡ ಉಳಿಸಲು ನಾವು ಪ್ರತಿಜ್ಞೆ ಮಾಡಬೇಕು ಎಂದರು.

ಉಪವಿಭಾಗಾಧಿಕಾರಿ ಟಿ. ಸುರೇಶ್ ಕುಮಾರ ಮಾತನಾಡಿ, ಹರಿದು ಹಂಚಿ ಹೋಗಿದ್ದ ಕನ್ನಡ ನಾಡನ್ನು ಒಂದುಗೂಡಿಸಲು ಅನೇಕರು ಅವಿರತ ಹೋರಾಟ ಮಾಡುವ ಮೂಲಕ ನಾಡು ನುಡಿ ಭಾಷೆಗಾಗಿ ಶ್ರಮಿಸಿದ್ದಾರೆ ಎಂದರು.

ಉಪನ್ಯಾಸಕ ಕೆ. ಪರಶುರಾಮ ವಿಶೇಷ ಉಪನ್ಯಾಸ ನೀಡಿ, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆ ಶ್ರೀಮಂತಗೊಳಿಸಲು ಅನೇಕರು ಶ್ರಮಿಸಿದ್ದಾರೆ, ಕನ್ನಡ ಸಾಹಿತ್ಯ ಇಡೀ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ನಮ್ಮ ವಚನಕಾರರಿಗೆ ಸಲ್ಲುತ್ತದೆ ಎಂದರು.

ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನ ತಾಲೂಕಾಡಳಿತದಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಪೂರ್ವದಲ್ಲಿ ನಗರದ ಪ್ರವಾಸಿ ಮಂದಿರದಿಂದ ಜೂನಿಯರ್ ಕಾಲೇಜಿನವರೆಗೆ ಭುವನೇಶ್ವರಿ ಭಾವಚಿತ್ರ ಮೆರವಣಿಗೆ ಹಾಗೂ ವಿವಿಧ ಕಲಾ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಿಕ್ಷಕ ಎಚ್.ಸಲೀಂ ಸ್ವಾಗತಿಸಿದರೆ, ಶಿಕ್ಷಣ ಸಂಯೋಜಕ ಪಂಪಾನಾಯ್ಕ್ ನಿರೂಪಿಸಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಬಿ.ವಿ. ಗಿರೀಶ್ ಬಾಬು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕಾಧ್ಯಕ್ಷ ಎಂ. ಉದಯಶಂಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ತಾಪಂ ಇಒ ವೈ.ಎಚ್. ಎಚ್.ಚಂದ್ರಶೇಖರ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಕನಕಬಸ್ಸಾಪುರ ಮಂಜುನಾಥ, ಕ್ಷೇತ್ರಶಿಕ್ಷಣಾಧಿಕಾರಿ ಎಚ್. ಲೇಪಾಕ್ಷಪ್ಪ, ನಗರಸಭೆ ಪೌರಾಯುಕ್ತೆ ರೇಣುಕಾ ಎಸ್. ದೇಸಾಯಿ, ಸಮಾಜ ಕಲ್ಯಾಣಾಧಿಕಾರಿ ಗಂಗಪ್ಪ, ಲಾಟಿ ದಾದಪೀರ್‌, ಇಸ್ಮಾಯಿಲ್ ಎಲಿಗಾರ, ನಿಚ್ಚವನಹಳ್ಳಿ ಭೀಮಪ್ಪ ಕರವೇ ಅಧ್ಯಕ್ಷ ಗಿರಜ್ಜಿ ನಾಗರಾಜ, ಶಿಕ್ಷಣ ಸಂಯೋಜಕ ವೀರೇಶ, ಪಂಪಾನಾಯ್ಕ್, ಲತಾ ರಾಥೋಡ್, ಸೇರಿದಂತೆ ಇತರರು ಇದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜ್ಞಾನೇಶ್ ಕುಮಾರ್‌ ಜೈಲಿಗಟ್ಟುತ್ತೇವೆ : ರಾಹುಲ್‌ ಗುಡುಗು
ಕನ್ನಡ ಬಾವುಟಕ್ಕೆ ನಾಡಧ್ವಜ ಸ್ಥಾನಮಾನ: ಸಿಎಂ