ಕನ್ನಡ ಸಂಸ್ಕಾರ, ಬದುಕಿನ ಜೀವನಾಡಿ: ಹರಿಣಿ ವಿಜಯ್‌

KannadaprabhaNewsNetwork |  
Published : Nov 07, 2026, 02:45 AM IST
2-ಎನ್ ಪಿ ಕೆ-3.  ಮೂರ್ನಾಡು ಹೋಬಳಿ ಘಟಕದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷರಾದ ತೇಲಪಂಡ ಸುಬ್ಬಯ್ಯ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು2-ಎನ್ ಪಿ ಕೆ-4..ಮೂರ್ನಾಡು ಹೋಬಳಿ ಘಟಕದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ದಲ್ಲಿ ಕನ್ನಡಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕನ್ನಡದ ಸೇವೆ ಸಲ್ಲಿಸುತ್ತಿರುವ ಕನ್ನಡಾಭಿಮಾನಿಗಳಾದ ದಿನೇಶ್ ಪಗ್ಗೋಲಿ ಹಾಗೂ  ಧ್ವಜ ಸ್ತಂಭ ದಾನಿ ಉದಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. | Kannada Prabha

ಸಾರಾಂಶ

ಕನ್ನಡವೆಂಬುದು ಕೇವಲ ಸಂವಹನದ ಭಾಷೆಯಲ್ಲ, ಅದು ನಮ್ಮ ಅಸ್ಮಿತೆ, ಆತ್ಮಗೌರವ, ಸಂಸ್ಕೃತಿ, ಸಂಸ್ಕಾರ ಮತ್ತು ಬದುಕಿನ ಜೀವನಾಡಿ. ಎಂದು ಕನ್ನಡ ಸಾಹಿತ್ಯ ಪರಿಷತ್ತು, ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷ ಈರಮಂಡ ಹರಿಣಿ ವಿಜಯ್ ಅಭಿಪ್ರಾಯಪಟ್ಟರು.

ನಾಪೋಕ್ಲು: ಕನ್ನಡವೆಂಬುದು ಕೇವಲ ಸಂವಹನದ ಭಾಷೆಯಲ್ಲ, ಅದು ನಮ್ಮ ಅಸ್ಮಿತೆ, ಆತ್ಮಗೌರವ, ಸಂಸ್ಕೃತಿ, ಸಂಸ್ಕಾರ ಮತ್ತು ಬದುಕಿನ ಜೀವನಾಡಿ. ಎಂದು ಕನ್ನಡ ಸಾಹಿತ್ಯ ಪರಿಷತ್ತು, ಮೂರ್ನಾಡು ಹೋಬಳಿ ಘಟಕದ ಅಧ್ಯಕ್ಷ ಈರಮಂಡ ಹರಿಣಿ ವಿಜಯ್ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಪರಿಷತ್ತು, ಮೂರ್ನಾಡು ಹೋಬಳಿ ಘಟಕದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ತೇಲಪಂಡ ಸುಬ್ಬಯ್ಯ ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ನಾವು ಹುಟ್ಟಿ ಬೆಳೆದ ನೆಲದ ಭಾಷೆಯನ್ನು ಪ್ರೀತಿಸುವುದರ ಜೊತೆಗೆ ದೈನಂದಿನ ಬದುಕಿನಲ್ಲಿ ಕನ್ನಡವನ್ನು ಮಾತನಾಡಬೇಕು ಎಂದರು.

ಸಾಹಿತಿ ಕಿಗ್ಗಾಲು ಗಿರೀಶ್ ಮಾತನಾಡಿ, ಭಾಷೆಯನ್ನು ಕೇವಲ ಅಭಿಮಾನದಿಂದ ಹೊಗಳುವುದಷ್ಟೇ ಅಲ್ಲ, ಅದನ್ನು ನಿರಂತರವಾಗಿ ಬಳಸುವ ಮೂಲಕ ಉಳಿಸಿ ಬೆಳೆಸಬೇಕು ಎಂದು ಕರೆ ನೀಡಿದರು.

ನಿವೃತ್ತ ಡಿವೈಎಸ್ಪಿ ಲಿಂಗಪ್ಪ ಮಾತನಾಡಿ, ನಾವು ಮನೆಯಲ್ಲಿ ಬೇರೆ ಭಾಷೆಗಳನ್ನು ಮಾತನಾಡಬಹುದು, ಅನೇಕ ಭಾಷೆಗಳನ್ನು ಕಲಿಯಬಹುದು. ಆದರೆ ನಮ್ಮ ಅಕ್ಷರಜ್ಞಾನಕ್ಕೆ ಬುನಾದಿಯಾದ ಕನ್ನಡವನ್ನು ಎಂದಿಗೂ ಮರೆಯಬಾರದು ಎಂದರು.

ನಿವೃತ್ತ ಪ್ರಾಂಶುಪಾಲ ದಂಬೆಕೋಡಿ ಸುಶೀಲ ಮಾತನಾಡಿ ಇತರ ಭಾಷೆಗಳನ್ನು ಕಲಿಯುವ ಭರದಲ್ಲಿ ನಮ್ಮ ತಾಯ್ನುಡಿಯನ್ನು ಕಡೆಗಣಿಸಬಾರದು ಎಂದರು.

ಮಹಾಬಲೇಶ್ವರ ಭಟ್ ತ್ರಿನೇತ್ರ ವಾಹನ ಮಾಲೀಕರು ಹಾಗೂ ಚಾಲಕರ ಸಂಘದ ಅಧ್ಯಕ್ಷ ಅಶ್ವಥ್ ರೈ ಕನ್ನಡ ಬೆಳವಣಿಗೆಗೆ ನಡೆಸುವ ಕಾರ್ಯಕ್ರಮಗಳಿಗೆ ಸದಾ ಬೆಂಬಲ ನೀಡುತ್ತೇವೆ ಎಂದರು.ಕನ್ನಡಾಭಿಮಾನಿಗಳಾದ ದಿನೇಶ್ ಪಗ್ಗೋಲಿ ಹಾಗೂ ಧ್ವಜ ಸ್ತಂಭ ದಾನಿ ಉದಯ್ ಅವರನ್ನು ಗೌರವಿಸಲಾಯಿತು.ಖಜಾಂಚಿ ಸೂರಜ್ ತಿಮ್ಮಯ್ಯ, ಸಂಘಟನಾ ಕಾರ್ಯದರ್ಶಿ ಕೊಂಪುಳಿರ ಮಮತಾ, ಅಬ್ದುಲ್ ಖಾದರ್, ಸಹ ಕಾರ್ಯದರ್ಶಿ ಸುಚಿತ ಕಾವೇರಪ್ಪ, ಮಠದಮನೆ ಧನಂಜಯ, ಈರಮಂಡ ವಿಜಯ್, ಪದಾಧಿಕಾರಿಗಳಾದ ಭಾರತಿ, ಸಂಧ್ಯಾ, ಡೈಸಿ, ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷ ಚಾರಿಮಂಡ ಚಂಗಪ್ಪ, ಹಿಂದೂ ಮಲಯಾಳಿ ಸಂಘದ ಕಾರ್ಯದರ್ಶಿ ಸಜೀವ್, ಸದಸ್ಯರಾದ ಮಣಿ ಚಂಗಪ್ಪ, ಟೈಲರ್ ಅಸೋಸಿಯೇಷನ್ ನ ಶೇಕ್ ಅಹ್ಮದ್, ಮಾಜಿ ಗ್ರಾಮ ಪಂಚಾಯತ್ ಸದಸ್ಯಈರ ಸುಬ್ಬಯ್ಯ, ಸದಸ್ಯರಾದ ಜಯಂತಿ, ಜಸ್ಮಿ ಚಿಂತು ಮತ್ತಿತರರಿದ್ದರು.

ಪೋಟೋ:

ಮೂರ್ನಾಡು ಹೋಬಳಿ ಘಟಕದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷರಾದ ತೇಲಪಂಡ ಸುಬ್ಬಯ್ಯ ಅವರು ಧ್ವಜಾರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿದರು

2-ಎನ್ ಪಿ ಕೆ-4..

ಮೂರ್ನಾಡು ಹೋಬಳಿ ಘಟಕದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ದಲ್ಲಿ ಕನ್ನಡಪರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕನ್ನಡದ ಸೇವೆ ಸಲ್ಲಿಸುತ್ತಿರುವ ಕನ್ನಡಾಭಿಮಾನಿಗಳಾದ ದಿನೇಶ್ ಪಗ್ಗೋಲಿ ಹಾಗೂ ಧ್ವಜ ಸ್ತಂಭ ದಾನಿ ಉದಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

====================================================================

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ