ಕಾಶಿ, ಗಯಾ, ಪ್ರಯಾಗ್‌ರಾಜ್‌ನಲ್ಲಿ ಕನ್ನಡ ಸಂಸ್ಕೃತಿ ಅನಾವರಣ

KannadaprabhaNewsNetwork |  
Published : Oct 08, 2026, 01:45 AM IST
ಚಿತ್ರ 2 | Kannada Prabha

ಸಾರಾಂಶ

ಹಿರಿಯೂರಿನ ವಿಶ್ವ ಕನ್ನಡ ಕಲಾ ಸಂಸ್ಥೆ ವತಿಯಿಂದ ಕಾಶಿ–ಗಯಾ–ಪ್ರಯಾಗ್ ರಾಜ್ ಪ್ರವಾಸ ಏರ್ಪಡಿಸಿ ಕನ್ನಡ ಭಾಷೆ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸೊಗಡನ್ನು ಪರಿಚಯಿಸಲಾಯಿತು.

ಕನ್ನಡಪ್ರಭ ವಾರ್ತೆ ಹಿರಿಯೂರು

ಹಿರಿಯೂರಿನ ವಿಶ್ವ ಕನ್ನಡ ಕಲಾ ಸಂಸ್ಥೆ ವತಿಯಿಂದ ಕಾಶಿ–ಗಯಾ–ಪ್ರಯಾಗ್‌ರಾಜ್ ಪ್ರವಾಸ ಏರ್ಪಡಿಸಿ ಕನ್ನಡ ಭಾಷೆ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸೊಗಡನ್ನು ಪರಿಚಯಿಸಲಾಯಿತು. ಪ್ರವಾಸದ ಅಂಗವಾಗಿ ಬೋಧಗಯಾದ ಬುದ್ಧ ರೆಸಾರ್ಟ್‌ನಲ್ಲಿ ಕನ್ನಡ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಪ್ರವಾಸಿಗರು ತಮ್ಮಲ್ಲಿದ್ದ ವಿವಿಧ ಪ್ರತಿಭೆಗಳನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.

ಹಾಡು, ನೃತ್ಯ, ಕವನ, ಭಕ್ತಿಗೀತೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳು ಪ್ರೇಕ್ಷಕರ ಗಮನ ಸೆಳೆದವು.

ಪ್ರವಾಸದ ಕೊನೆಯ ದಿನ ಕಾಶಿಯಲ್ಲಿಯೂ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮವು ಕನ್ನಡ ಭಾಷೆ, ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಅನಾವರಣಕ್ಕೆ ವೇದಿಕೆಯಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಾಗನಾಥ್ ಮಾತನಾಡಿ, ಕನ್ನಡ ಭಾಷೆ ಮತ್ತು ಕನ್ನಡದ ಅಸ್ಮಿತೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ. ಕನ್ನಡ ಶಾಲೆಗಳು ಮುಚ್ಚುತ್ತಿರುವುದು ವಿಷಾದನೀಯ ಸಂಗತಿಯಾಗಿದ್ದು ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದರು.

ಬಸವರಾಜ್ ಮಾತನಾಡಿ, ಇಂತಹ ವಿಶಾಲವಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿರುವುದನ್ನು ಇದೇ ಮೊದಲ ಬಾರಿಗೆ ನೋಡಿದ್ದು ಇದು ಶ್ಲಾಘನೀಯವಾದುದು ಎಂದರು.

ಬಿ.ಪಿ.ಸುರೇಶ್ ಮಾತನಾಡಿ, ಪ್ರವಾಸದೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬೆಸೆದು ಕನ್ನಡದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪರಿಚಯಿಸುತ್ತಿರುವ ವಿಶ್ವ ಕನ್ನಡ ಕಲಾ ಸಂಸ್ಥೆಯ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಈ.ರವೀಶ ಅಕ್ಕರ ಮಾತನಾಡಿ, ಸಂಸ್ಥೆಯ ವತಿಯಿಂದ ಜಿಲ್ಲೆ, ತಾಲೂಕು ಸೇರಿದಂತೆ ವಿವಿಧ ಹಂತಗಳಲ್ಲಿ ನೂರಾರು ಕನ್ನಡಪರ, ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಪ್ರವಾಸದ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಪರಂಪರೆಯನ್ನು ಅಂಡಮಾನ್ ಪ್ರವಾಸದಿಂದ ಆರಂಭಿಸಿ ನಂತರ ಲಕ್ಷದ್ವೀಪದಲ್ಲಿಯೂ ಮುಂದುವರಿಸಲಾಗಿತ್ತು. ಇದೀಗ ಕಾಶಿ, ಗಯಾ ಹಾಗೂ ಪ್ರಯಾಗ್ ರಾಜ್ ಪ್ರವಾಸದಲ್ಲಿಯೂ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಸಂತಸ ತಂದಿದೆ ಎಂದರು.

30 ಪ್ರವಾಸಿಗರಿಗೆ ಕನ್ನಡ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಜೆ. ಮಂಜುನಾಥ್, ನಂದೀಶ್, ವಿಮಲದೇವಿ, ದೇವಿಕಾ, ಭಾಗ್ಯ, ಶೋಭಾ, ದೇವಿಕಾ, ಮ್ಯಾನೇಜರ್ ಪ್ರದೀಪ್ ಕುಮಾರ್ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ: ಖಂಡ್ರೆ
ಮೀನು ಹಿಡಿಯುವ ಕಾರ್ಯ ಟೆಂಡರ್ ಮೂಲಕ ನಡೆಸಿ