ಈ ಸಾಲಿನಿಂದ ಕನ್ನಡ -ಇಂಗ್ಲಿಷ್ ಮಾಧ್ಯಮ ಪ್ರಾರಂಭ: ಉಮಾ

KannadaprabhaNewsNetwork |  
Published : Feb 23, 2026, 02:00 AM IST
21ಕೆಎಂಎನ್‌ಡಿ-10ಬುಯ್ಯನ ದೊಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿರುವುದು. | Kannada Prabha

ಸಾರಾಂಶ

ಮಕ್ಕಳಿಂದಲೇ ಕಾರ್ಯಕ್ರಮ ನಿರೂಪಣೆ ಮಾಡಿಸುವುದರಿಂದ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಚಟುವಟಿಕೆ ಆಧಾರಿತ ಕಲಿಕೆಗೆ ಪ್ರಾಮುಖ್ಯತೆ ಇದೆ. ಏಕೆಂದರೆ ವಿದ್ಯಾರ್ಥಿಗಳು ಮಾಡಿ ಕಲಿತು ಅನುಭವಗಳಿಸಿ ಅರ್ಥ ಮಾಡಿಕೊಂಡು ಸ್ವಂತ ಸಾಮರ್ಥ್ಯದಿಂದ ಬರೆಯಲು ಸಾಧ್ಯವಾಗುತ್ತದೆ.

ಕನ್ನಡಪ್ರಭ ವಾರ್ತೆ ಹಲಗೂರು

ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನುರಿತ ಶಿಕ್ಷಕರಿಂದ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತದೆ ಎಂದು ಮಳವಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ ತಿಳಿಸಿದರು.

ಸಮೀಪದ ಬುಯ್ಯನ ದೊಡ್ಡಿ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಹಮ್ಮಿಕೊಂಡಿದ್ದ ಶಾಲಾ ಸಂಭ್ರಮ 2025-26ನೇ ಸಾಲಿನ ವಾರ್ಷಿಕೋತ್ಸವದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳಿಂದಲೇ ಕಾರ್ಯಕ್ರಮ ನಿರೂಪಣೆ ಮಾಡಿಸುವುದರಿಂದ ಮಕ್ಕಳಲ್ಲಿ ನಾಯಕತ್ವ ಗುಣ ಬೆಳೆಸುತ್ತದೆ. ಸರ್ಕಾರಿ ಶಾಲೆಗಳಲ್ಲಿ ಚಟುವಟಿಕೆ ಆಧಾರಿತ ಕಲಿಕೆಗೆ ಪ್ರಾಮುಖ್ಯತೆ ಇದೆ. ಏಕೆಂದರೆ ವಿದ್ಯಾರ್ಥಿಗಳು ಮಾಡಿ ಕಲಿತು ಅನುಭವಗಳಿಸಿ ಅರ್ಥ ಮಾಡಿಕೊಂಡು ಸ್ವಂತ ಸಾಮರ್ಥ್ಯದಿಂದ ಬರೆಯಲು ಸಾಧ್ಯವಾಗುತ್ತದೆ ಎಂದರು.

ಇಲಾಖೆಯಿಂದ ವರ್ಷಕ್ಕೆ 60 ದಿನಗಳ ಕಾಲ ಸರ್ಕಾರಿ ಶಾಲಾ ಶಿಕ್ಷಕರಿಗೆ ಬೋಧನಾ ತರಬೇತಿ ನೀಡಲಾಗುತ್ತಿದೆ. ಇದರಿಂದ ಅವರಿಗೆ ತರಗತಿಯಲ್ಲಿ ಪ್ರತಿಯೊಂದು ಮಗುವಿಗೆ ಯಾವ ರೀತಿ ಬೋಧನೆ ಮಾಡಬೇಕು ಎಂಬುದು ತಿಳಿದಿರುತ್ತದೆ. ಆದುದರಿಂದ ಸರ್ಕಾರಿ ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು ಸೇರಿಸುವಂತೆ ತಿಳಿಸಿದರು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಉದ್ಘಾಟಿಸಿ ಮಾತನಾಡಿ, ಶಾಲಾ ಸಂಭ್ರಮ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಒಂದು ಕಾರ್ಯಕ್ರಮ. ಶಾಲೆಯಲ್ಲಿ ನಡೆಸುವ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದರೆ ಅವರ ಜ್ಞಾನಾರ್ಜನೆ ಹೆಚ್ಚುತ್ತದೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಉತ್ತಿರ್ಣರಾದ ಈ ಭಾಗದ ವಿದ್ಯಾರ್ಥಿಗಳಾದ ಐಶ್ವರ್ಯ, ಬಿ.ಸಿ.ಲಾವಣ್ಯ, ಕೆ. ವೇದ, ಶಾಲಿನಿ, ಬಿ.ಕೆ.ಪುಷ್ಪಲತಾ, ನಂದೀಶ್ , ಅಜಯ್ಇವರಿಗೆ ಶಾಲಾ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ನೌಕರರ ಸಂಘದ ಅಧ್ಯಕ್ಷರಾದ ಶಿವಶಂಕರ ಮತ್ತು ದಾಸೇಗೌಡ, ನಾಗರಾಜು, ಮುಖ್ಯ ಶಿಕ್ಷಕರಾದ ವಿಷಕಂಠೇಗೌಡ, ಎಸ್‌ಡಿಎಂಸಿ ಅಧ್ಯಕ್ಷ ಲಕ್ಷ್ಮಣ ಸ್ವಾಮಿ, ಉಪಾಧ್ಯಕ್ಷರಾದ ರಂಜಿತ್ ಪ್ರಕಾಶ್ ಮತ್ತು ಶಿಕ್ಷಕರಾದ ರಾಘವೇಂದ್ರ ಮತ್ತು ಸಿಆರ್‌ಪಿಯ ಪುಟ್ಟರಾಜು ಜಿಎಸ್ ಕೃಷ್ಣ ನಿರೂರ್ತಿ ಶಿಕ್ಷಕ ಸಿದ್ದಪ್ಪ, ಗ್ರಾಮದ ಮುಖಂಡ ಕೃಷ್ಣೇಗೌಡ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಯಿಮುಚ್ಕೊಂಡಿದ್ರೆ ಒಳ್ಳೇದು : ಮೂವರು ಕಾಂಗ್ರೆಸ್ ಶಾಸಕರಿಗೆ ಡಿಕೆಶಿ ವಾರ್ನಿಂಗ್
‘ಒರಿಜಿನಲ್‌ ಚಾಯ್ಸ್‌ ಬ್ಯಾಡ್‌ ಚಾಯ್ಸ್‌. ಸೆಲ್ಲಿಂಗ್ ವಿಸ್ಕಿ ಈಸ್‌ ರಿಸ್ಕಿ’ : ಜಡ್ಜ್‌