ಕನ್ನಡ ಪ್ರತಿಯೊಬ್ಬರ ಹೆಗ್ಗಳಿಕೆ: ಡಾ. ವಿದ್ಯಾಕುಮಾರಿ

KannadaprabhaNewsNetwork |  
Published : Nov 06, 2024, 11:56 PM IST
6ಕನ್ನಡ | Kannada Prabha

ಸಾರಾಂಶ

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಸ್ವಾಗತ ಕೋರಿ, ಚಂಡೆ ಬಾರಿಸುವ ಮೂಲಕ ರಥಯಾತ್ರೆಗೆ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಣಿಪಾಲ

ಕನ್ನಡ ನಾಡು ನುಡಿಯ ಕುರಿತು ಅಭಿಮಾನ ಮೂಡಿಸುವ ಉದ್ದೇಶದಿಂದ ‘ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆ’ ಪ್ರತಿ ಜಿಲ್ಲೆಗಳಿಗೆ ಸಂಚರಿಸುತ್ತಿದ್ದು, ಅನೇಕ ಶತಮಾನಗಳ ಇತಿಹಾಸ ಹೊಂದಿದ ಕನ್ನಡ ನಾಡು ಹಾಗೂ ಕನ್ನಡ ಭಾಷೆ ಪ್ರತಿಯೊಬ್ಬರ ಹೆಗ್ಗಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.

ಮಂಗಳವಾರ ಇಲ್ಲಿನ ಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಕ್ಕೆ ಸ್ವಾಗತ ಕೋರಿ, ಚಂಡೆ ಬಾರಿಸುವ ಮೂಲಕ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ಪರಂಪರೆ ದೇಶದ ಪ್ರಾಚೀನ ಪರಂಪರೆಯಲ್ಲಿ ಒಂದಾಗಿದೆ, ಸುಮಾರು 2000 ಕ್ಕೂ ಹೆಚ್ಚು ವರ್ಷಗಳ ಸುದೀರ್ಘ ಇತಿಹಾಸ ಹೊಂದಿದೆ. ಕನ್ನಡ ಭಾಷೆ ಕಟ್ಟುವ, ಉಳಿಸಿ ಬೆಳೆಸುವ ಕಾಯಕದಲ್ಲಿ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ 20, 21 ಹಾಗೂ 22 ರಂದು ಮಂಡ್ಯ ಜಿಲ್ಲೆಯಲ್ಲಿ ನಡೆಯಲಿದೆ. ಜಿಲ್ಲೆಯ ಕನ್ನಡ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಮಾತನಾಡಿ, ಮಂಡ್ಯದಲ್ಲಿ ನಡೆಯಲಿರುವ 87 ನೇ ಕನ್ನಡ ಸಾಹಿತ್ಯ ಸಮ್ಮೇಳನವು ಯಶಸ್ವಿಯಾಗಿ ನಡೆಯಲಿ ಎಂದು ಹಾರೈಸಿದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಕನ್ನಡ ಭಾಷೆಯ ಸೊಗಡನ್ನು ಎಲ್ಲೆಡೆ ಪಸರಿಸುವ ಜೊತೆಗೆ, ಮಾತೃ ಭಾಷಾಭಿಮಾನ ಬೆಳಸಿಕೊಂಡು ಕನ್ನಡ ನಾಡು ನುಡಿ ಹಾಗೂ ಸಂಸ್ಕೃತಿಯ ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಬದ್ದರಾಗಿ ಕಾರ್ಯನಿರ್ವಹಿಸಬೇಕು ಎಂದರು.

ಮೆರವಣಿಗೆ ಮೂಲಕ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯನ್ನು ಬೀಳ್ಕೋಡಲಾಯಿತು. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ನಗರಾಭಿವೃಧ್ದಿ ಪ್ರಾಧಿಕಾರ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಿಬ್ಬಂದಿ ಮತ್ತಿತರರುಇದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ ನಿರೂಪಿಸಿದರು. ಕ.ಸಾ.ಪ ದ ಕಾರ್ಯದರ್ಶಿ ಸುಬ್ರಮಣ್ಯ ಶೆಟ್ಟಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು, ನಾಳೆ ಬೆಲ್ಕಾನ್ ಪ್ರದರ್ಶನ
ಬುರುಡೆ ಪ್ರಕರಣ: ವಿಚಾರಣೆ 13ಕ್ಕೆ ಮುಂದೂಡಿಕೆ