ಕನ್ನಡ ಜಾನಪದ ಸಾಹಿತ್ಯ ನಮ್ಮ ಸಂಸ್ಕೃತಿಯ ಜೀವಾಳ

KannadaprabhaNewsNetwork |  
Published : Oct 16, 2026, 02:45 AM IST
ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ಶಿಬಿರದಲ್ಲಿ ವಿಶೇಷ ಉಪನ್ಯಾಸ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆ ತಂತ್ರಜ್ಞಾನ ಯುಗದಲ್ಲಿರುವ ಇಂದಿನ ಯುವ ಸಮೂಹ ಕನ್ನಡ ನೆಲಮೂಲ ಸಂಸ್ಕೃತಿಯ ಜೀವಾಳವಾಗಿರುವ ಜಾನಪದ ಸಾಹಿತ್ಯದಲ್ಲಿನ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಕನ್ನಡ ಉಪನ್ಯಾಸಕ ಪ್ರೊ. ಚಂದ್ರಶೇಖರ ಕಾಳನ್ನವರ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ತಂತ್ರಜ್ಞಾನ ಯುಗದಲ್ಲಿರುವ ಇಂದಿನ ಯುವ ಸಮೂಹ ಕನ್ನಡ ನೆಲಮೂಲ ಸಂಸ್ಕೃತಿಯ ಜೀವಾಳವಾಗಿರುವ ಜಾನಪದ ಸಾಹಿತ್ಯದಲ್ಲಿನ ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಆದರ್ಶ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಕನ್ನಡ ಉಪನ್ಯಾಸಕ ಪ್ರೊ. ಚಂದ್ರಶೇಖರ ಕಾಳನ್ನವರ ಹೇಳಿದರು.

ಬಾಗಲಕೋಟೆ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಮುಚಖಂಡಿಯ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ 2026-27ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾರತದ ಯುವಜನತೆ ಮತ್ತು ಜಾನಪದ ಸಾಹಿತ್ಯ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕನ್ನಡ ಜಾನಪದ ಸಾಹಿತ್ಯವು ನಮ್ಮ ಬದುಕು, ಸಂಸ್ಕೃತಿ, ಸಂಪ್ರದಾಯ ಮತ್ತು ಪರಂಪರೆಯ ಜೊತೆಗೆ ಸಾಮಾಜಿಕ, ಧಾರ್ಮಿಕ, ಕೌಟುಂಬಿಕ ಹಾಗೂ ನೈತಿಕ ಮೌಲ್ಯಗಳನ್ನು ಒಳಗೊಂಡ ಶ್ರೀಮಂತ ಸಾಹಿತ್ಯವಾಗಿದೆ. ಎನ್ಎಸ್ಎಸ್ ಶಿಬಿರಗಳು ಗ್ರಾಮೀಣ ಪರಿಸರದಲ್ಲಿ ನಡೆಯುವುದರಿಂದ ಮೊಬೈಲ್ ಹಾಗೂ ತಂತ್ರಜ್ಞಾನದ ಯುಗದ ವಿದ್ಯಾರ್ಥಿಗಳಿಗೆ ಜಾನಪದ ಸಾಹಿತ್ಯದ ಮಹತ್ವ ಮತ್ತು ಅದರಲ್ಲಿರುವ ಜೀವನ ಮೌಲ್ಯಗಳನ್ನು ಅರಿತುಕೊಳ್ಳಲು ಸಹಕಾರಿಯಾಗುತ್ತವೆ. ಗರತಿಯ ಹಾಡುಗಳು, ಬೀಸುವ ಕಲ್ಲಿನ ಪದಗಳು, ಸೋಬಾನೆ ಪದಗಳು, ಹಂತಿ ಪದಗಳು, ಗೌರವ್ವನ ಹಾಡುಗಳು, ಸೀಗವ್ವನ ಹಾಡುಗಳು, ಗುಳ್ಳವನ ಹಾಡುಗಳು, ಜೋಕಮಾರಸ್ವಾಮಿ ಹಾಡುಗಳು, ಚೌಡಕಿ ಪದಗಳು, ಭಜನಾ ಪದಗಳು ಹಾಗೂ ಒಡಪುಗಳು ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಕನ್ನಡ ಜಾನಪದ ಸಾಹಿತ್ಯ ಬೆಳೆದು ಬಂದಿದೆ. ಇಂದಿನ ಮೊಬೈಲ್ ಯುಗದಲ್ಲಿ ಈ ಅಮೂಲ್ಯ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯೂ ಯುವಜನತೆಯ ಮೇಲಿದೆ. ಜಾನಪದ ಸಂಸ್ಕೃತಿಯಲ್ಲಿರುವ ಕರುಳಬಳ್ಳಿಯ ಸಂಬಂಧಗಳ ಮೌಲ್ಯವನ್ನು ಅರಿತು ಯುವಜನರು ಸಾಂಸ್ಕೃತಿಕ ಪರಂಪರೆಯ ವಾರಸುದಾರರಾಗಬೇಕು ಎಂದು ಕರೆ ನೀಡಿದರು.

ಹಿರಿಯ ಉಪನ್ಯಾಸಕ ವಿ.ಜಿ. ಜಡಿಮಠ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಸಾಹಿತ್ಯದಲ್ಲಿ ಜಾನಪದ ಸಂಸ್ಕೃತಿಯು ಪ್ರಾಚೀನ ಕಾಲದಿಂದಲೂ ಶ್ರೀಮಂತವಾಗಿ ಬೆಳೆದು ಬಂದಿದೆ. ವಿದ್ಯಾರ್ಥಿಗಳು ಶಿಬಿರಗಳಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳುವ ಮೂಲಕ ನಮ್ಮ ಜನಪದ ಕಲೆಗಳನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು.ಅತಿಥಿಗಳಾಗಿ ಆಗಮಿಸಿದ್ದ ಪತ್ರಿಕಾ ಛಾಯಾಗ್ರಾಹಕ ಸಂಗಮೇಶ ಬಡಿಗೇರ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿಯೇ ಕನ್ನಡ ಜಾನಪದ ಪರಂಪರೆ, ಸಂಪ್ರದಾಯ ಮತ್ತು ಕಲೆಗಳನ್ನು ಬೆಳೆಸಿಕೊಂಡರೆ ಸಾಮಾಜಿಕ ಜೀವನದಲ್ಲಿ ಸಾಧಕರಾಗಲು ಸಾಧ್ಯವಿದೆ ಎಂದರು.ಕಾರ್ಯಕ್ರಮದಲ್ಲಿ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಅನ್ನಪೂರ್ಣ ಪಾಟೀಲ, ಉಪನ್ಯಾಸಕರಾದ ರವಿ ಗೌಡರ, ಶ್ರೀಶೈಲ ಮಠಪತಿ ಹಾಗೂ ಕಾವ್ಯಾ ಉಪಸ್ಥಿತರಿದ್ದರು. ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿಗಳೇ ಕಾರ್ಯಕ್ರಮವನ್ನು ನಿರ್ವಹಿಸಿದ್ದು ವಿಶೇಷವಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೀರಶೈವ–ಲಿಂಗಾಯತ ವಿಭಜನೆ ರಾಜಕೀಯ ಷಡ್ಯಂತ್ರ
ಉ.ಕ ಜನರನ್ನು ಕಡೆಗಣಿಸಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ