ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡ ಕಡೆಗಣನೆ?

KannadaprabhaNewsNetwork |  
Published : May 05, 2026, 02:00 AM IST
ರೈಲ್ವೆ | Kannada Prabha

ಸಾರಾಂಶ

ನೈಋತ್ಯ ರೈಲ್ವೆ ಎಲ್‌ಡಿಸಿಇ ಪರೀಕ್ಷೆಗೆ ಹೊರಡಿಸಿರುವ ಸುತ್ತೋಲೆಯಲ್ಲಿ ಅಕೃತ ಭಾಷೆಗೆ ಆದ್ಯತೆ ನೀಡಲಾಗಿದ್ದು, ಆ ಮೂಲಕ ಮತ್ತೊಮ್ಮೆ ರೈಲ್ವೆ ಪರೀಕ್ಷೆಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಆರೋಪ ಕೇಳಿಬಂದಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನೈಋತ್ಯ ರೈಲ್ವೆ ಎಲ್‌ಡಿಸಿಇ ಪರೀಕ್ಷೆಗೆ ಹೊರಡಿಸಿರುವ ಸುತ್ತೋಲೆಯಲ್ಲಿ ಅಕೃತ ಭಾಷೆಗೆ ಆದ್ಯತೆ ನೀಡಲಾಗಿದ್ದು, ಆ ಮೂಲಕ ಮತ್ತೊಮ್ಮೆ ರೈಲ್ವೆ ಪರೀಕ್ಷೆಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಆರೋಪ ಕೇಳಿಬಂದಿದೆ.

ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗವು ಇತ್ತೀಚೆಗೆ ಆಫೀಸ್‌ ಸೂಪರಿಂಟೆಂಡೆಂಟ್‌ ಹಂತ 6ರ 39 ಹುದ್ದೆಗಳು, ಸೀನಿಯರ್‌ ಕ್ಲರ್ಕ್‌ ಹಂತ 5ರ 25 ಹುದ್ದೆ ಹಾಗೂ ಇಂಟರ್‌ಮೀಡಿಯಟ್‌ ಅಪ್ರೆಂಟಿಸ್‌ ಮೆಕ್ಯಾನಿಕ್ಸ್‌ನ 9 ಹುದ್ದೆಗಳಿಗೆ ಎಲ್‌ಡಿಸಿಇ ಪರೀಕ್ಷೆ ನಡೆಸಲು ಸುತ್ತೋಲೆ ಹೊರಡಿಸಿದೆ. ಆದರೆ, ಈ ಪದೋನ್ನತಿ ಪರೀಕ್ಷೆಯ ಸುತ್ತೋಲೆಯಲ್ಲಿ ಅಕೃತ ಭಾಷೆಯಲ್ಲಿ ಮಾತ್ರ ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಅಧಿಕೃತ ಭಾಷೆ ಯಾವುದು?:

ಆದರೆ, ಪ್ರತಿ ಬಾರಿ ನೈಋತ್ಯ ರೈಲ್ವೆಯಿಂದ ಕೈಗೊಳ್ಳುವ ಪರೀಕ್ಷೆಯ ಸುತ್ತೋಲೆಗಳಲ್ಲಿ ಯಾವ ಭಾಷೆಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಲಾಗುತ್ತದೆ. ಈ ಹಿಂದಿನ ಪರೀಕ್ಷಾ ಸುತ್ತೋಲೆಗಳಲ್ಲಿ ಹಿಂದಿ, ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ ಎಂದು ಸ್ಪಷ್ಟವಾಗಿ ತಿಳಿಸಲಾಗಿತ್ತು.

ಇದೀಗ ಅಕೃತ ಭಾಷೆಯಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು ಎಂದು ತಿಳಿಸುವ ಮೂಲಕ ಗೊಂದಲ ಸೃಷ್ಟಿಸಲಾಗಿದೆ. ರೈಲ್ವೆ ಇಲಾಖೆಯಲ್ಲಿ ಹಿಂದಿ-ಇಂಗ್ಲಿಷ್‌ಗಳನ್ನು ಅಕೃತ ಭಾಷೆ ಎಂದು ಕರೆಯಲಾಗುತ್ತದೆ. ಇನ್ನು ರಾಜ್ಯದ ಅಕೃತ ಭಾಷೆ ಕನ್ನಡವಾಗಿದೆ. ಆದರೆ, ನೈರುತ್ಯ ರೈಲ್ವೆ ಹೊರಡಿಸಿರುವ ಸುತ್ತೋಲೆಯಂತೆ ಅಕೃತ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾದರೆ ರೈಲ್ವೆ ಅಕೃತ ಭಾಷೆಗಳಾದ ಹಿಂದಿ, ಇಂಗ್ಲಿಷ್‌ನಲ್ಲಿ ಪರೀಕ್ಷೆ ನಡೆಸಲಾಗುತ್ತದೆಯೇ ಅಥವಾ ರಾಜ್ಯದ ಅಕೃತ ಭಾಷೆ ಕನ್ನಡದಲ್ಲಿ ಪರೀಕ್ಷೆ ನಡೆಯುವುದೇ ಎಂಬ ಗೊಂದಲ ಅಭ್ಯರ್ಥಿಗಳಲ್ಲಿ ಮೂಡುವಂತಾಗಿದೆ.

ಇನ್ನು, ರೈಲ್ವೆ ಇಲಾಖೆಯು ಪದೇಪದೇ ಸ್ಥಳೀಯ ಭಾಷೆ ಕನ್ನಡ ಕಡೆಗಣಿಸಿ ಪರೀಕ್ಷೆ ನಡೆಸಿರುವುದರಿಂದ ಈ ಬಾರಿ ಅಕೃತ ಭಾಷೆಯಲ್ಲಿ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದ್ದರೂ ರೈಲ್ವೆಯ ಅಕೃತ ಭಾಷೆಯಲ್ಲೇ ಪರೀಕ್ಷೆ ನಡೆಸಲಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ಅಲ್ಲದೆ, ಸಾಕಷ್ಟು ಹೋರಾಟದ ಬಳಿಕವೂ ಸುತ್ತೋಲೆಯಲ್ಲಿ ಕನ್ನಡದಲ್ಲಿ ಪರೀಕ್ಷೆ ನಡೆಸುವ ಅಂಶ ಸೇರ್ಪಡೆ ಮಾಡದಿರುವುದು ಪರೀಕ್ಷಾರ್ಥಿಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಕನ್ನಡ ಕಡೆಗಣಿಸಿದರೆ ಹೋರಾಟ: ಕರವೇ ಎಚ್ಚರಿಕೆ:

ಹಲವು ಬಾರಿ ಹೋರಾಟ ನಡೆಸಿದ್ದರೂ ಮತ್ತೆ ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡವನ್ನು ನಮೂದಿಸದೆ ಗೊಂದಲ ಸೃಷ್ಟಿಸಿ, ಕನ್ನಡ ಕಡೆಗಣೆಗೆ ಕಾರಣವಾಗಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಗೌಡ, ಪರೀಕ್ಷಾ ಸುತ್ತೋಲೆಯಲ್ಲಿ ಪ್ರಶ್ನೆ ಪತ್ರಿಕೆಯ ಭಾಷೆಗಳ ಆಯ್ಕೆಯಲ್ಲಿ ಕನ್ನಡ ಉಲ್ಲೇಖಿಸದಿರುವುದು ಸ್ಪಷ್ಟವಾಗಿ ಭಾಷಾ ದ್ರೋಹವಾಗಿದೆ. ಇದು ಕರ್ನಾಟಕದ ಅಧಿಕೃತ ನುಡಿಯಾದ ಕನ್ನಡಕ್ಕೆ ಮಾಡಿದ ಅಪಮಾನ. ತಮ್ಮ ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯುವ ಕನ್ನಡಿಗ ರೈಲ್ವೆ ಉದ್ಯೋಗಿಗಳ ಹಕ್ಕು ಕಸಿದುಕೊಳ್ಳಲಾಗುತ್ತಿದೆ. ಇದು ಕನ್ನಡಿಗರ ಉದ್ಯೋಗಾವಕಾಶಗಳನ್ನು ಕಿತ್ತುಕೊಂಡು ಹಿಂದಿ ರಾಜ್ಯದವರಿಗೆ ನೀಡುವ ಸ್ಪಷ್ಟ ಹುನ್ನಾರವಾಗಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಕನ್ನಡವನ್ನು ಅಧಿಕೃತ ಭಾಷೆಯಾಗಿ ಘೋಷಿಸಲಾಗಿದೆ. ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳಲ್ಲಿ ಕನ್ನಡ ಅನುಷ್ಠಾನ ಕಡ್ಡಾಯವಾಗಿದೆ. ಆದರೆ ಕೇಂದ್ರ ಸರ್ಕಾರದ ಅಡಿಯಲ್ಲಿರುವ ನೈಋತ್ಯ ರೈಲ್ವೆ ಇಲಾಖೆಯು ಕರ್ನಾಟಕದಲ್ಲಿ ಕನ್ನಡವನ್ನು ಪೂರ್ಣವಾಗಿ ಕಡೆಗಣಿಸುತ್ತಿದೆ. ಇದು ಕನ್ನಡಿಗರ ಭಾವನೆಗಳನ್ನು ತಿರಸ್ಕಾರದಿಂದ ನೋಡುವ, ಅವರ ಗೌರವವನ್ನು ಕುಗ್ಗಿಸುವ ಕೆಟ್ಟ ಬೆಳವಣಿಗೆಯಾಗಿದೆ. ರೈಲ್ವೇ ಪರೀಕ್ಷೆಗಳಲ್ಲಿ ತ್ರಿಭಾಷಾ (ಕನ್ನಡ-ಇಂಗ್ಲಿಷ್-ಹಿಂದಿ) ವ್ಯವಸ್ಥೆ ಅಳವಡಿಸದಿದ್ದಲ್ಲಿ ಕರವೇ ತೀವ್ರ ಸ್ವರೂಪದ ಹೋರಾಟ ನಡೆಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ತಕ್ಷಣವೇ ಕೇಂದ್ರ ಸರ್ಕಾರರದ ಮೇಲೆ ಒತ್ತಡ ಹೇರಬೇಕು. ಕರ್ನಾಟಕದಿಂದ ಆಯ್ಕೆಯಾಗಿರುವ ಸಂಸದರು, ಕೇಂದ್ರ ಸಚಿವರು ಮೌನ ಮುರಿಯಬೇಕು. ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವರಾಗಿರುವ ವಿ.ಸೋಮಣ್ಣ ಅವರು ತಕ್ಷಣ ಕ್ರಿಯಾಶೀಲರಾಗಿ ಈ ಅನ್ಯಾಯ ತಡೆಯಬೇಕು ಎಂದು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮದ್ಯ ಮಾರಾಟ: 13 ವರ್ಷದ ದಾಖಲೆ ಉಡೀಸ್‌!
ಆರೋಗ್ಯ ಇಲಾಖೆ ಅಧಿಕಾರಿ, ನೌಕರರ ನಿಸ್ವಾರ್ಥ ಸೇವೆ ಸ್ಮರಿಸಬೇಕು: ಕೆ.ಎಸ್.ಆನಂದ್