ದೊಡ್ಡಬಳ್ಳಾಪುರ: ನಗರಸಭೆ ವ್ಯಾಪ್ತಿಯೊಳಗಿನ ಬೃಹತ್ ಜಾಹಿರಾತು ಫಲಕಗಳಲ್ಲಿ ಕನ್ನಡವನ್ನು ಸಂಪೂರ್ಣ ನಿರ್ಲಕ್ಷಿಸಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.
ನಗರಸಭೆ ಈ ಕೂಡಲೇ ಸಂಬಂಧಪಟ್ಟ ಫಲಕಗಳ ಮಾಲೀಕರಿಗೆ ತುರ್ತು ಸಭೆ ನಡೆಸಿ ಕಡ್ಡಾಯವಾಗಿ ಕನ್ನಡ ಭಾಷೆ ಹಾಗೂ ಅಶ್ಲೀಲವೆನಿಸುವ ಜಾಹಿರಾತುಗಳಿಗೆ ಸಂಬಂಧಿಸಿದಂತೆ ನಿಯಮ ಪಾಲಿಸಲು ಆದೇಶಿಸಬೇಕು. ಈಗಾಗಲೇ ಕನ್ನಡ ಭಾಷೆ ನಿರ್ಲಕ್ಷಿಸಿರುವ ಜಾಹೀರಾತುಗಳನ್ನು ತೆರವುಗೊಳಿಸಬೇಕು. ಇಲ್ಲವಾದಲ್ಲಿ ಕರವೇ ನೇರ ಕಾರ್ಯಾಚರಣೆ ಮೂಲಕ ತೆರವುಗೊಳಿಸಲಿದೆ. ನಂತರದ ಯಾವುದೇ ಪರಿಣಾಮಗಳಿಗೂ ನಗರಸಭೆಯೇ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಮನವಿ ಸ್ವೀಕರಿಸಿದ ನಗರಸಭೆಯ ಪೌರಾಯುಕ್ತ ಕಾರ್ತಿಕೇಶ್ವರ್ ಮಾತನಾಡಿ, ಮನವಿಯನ್ನು ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಶ್ರೀ ನಗರ ಮನು, ವಕೀಲರಾದ ಮುನಿರಾಜ್, ಸುಬ್ರಮಣಿ, ಕೋಡಳ್ಳಿ ಬಾಬು, ಮೋಹನ್, ಮಂಜುನಾಥ್, ಡಿ.ಕ್ರಾಸ್ ಬಾಲು, ಹಮೀದ್, ಆದಿಲ್ ಉಪಸ್ಥಿತರಿದ್ದರು.23ಕೆಡಿಬಿಪಿ1-
ದೊಡ್ಡಬಳ್ಳಾಪುರದಲ್ಲಿ ಬೃಹತ್ ಜಾಹಿರಾತು ಫಲಕಗಳಲ್ಲಿ ಕನ್ನಡ ಕಡೆಗಣನೆ ವಿರುದ್ದ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ ಕರವೇ ಪ್ರವೀಣ್‌ಶೆಟ್ಟಿ ಬಣದ ನೇತೃತ್ವದಲ್ಲಿ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.