ಕನ್ನಡ ಕೇವಲ ಭಾಷೆಯಲ್ಲ ಸಂಸ್ಕೃತಿಯ ಹಿರಿಮೆ: ಶಾಸಕ ಟಿ.ಬಿ.ಜಯಚಂದ್ರ ಅಭಿಪ್ರಾಯ

KannadaprabhaNewsNetwork |  
Published : Nov 18, 2024, 12:04 AM IST
17ಶಿರಾ2: ಶಿರಾದಲ್ಲಿ ಕನ್ನಡಾಂಬೆ ಜ್ಯೋತಿಯನ್ನು ಹೊತ್ತು ಬಂದ ಕನ್ನಡ ರಥಕ್ಕೆ ಅದ್ಧೂರಿ ಸ್ವಾಗತ ಕೋರಲಾಯಿತು. ಶಾಸಕ ಟಿ.ಬಿ.ಜಯಚಂದ್ರ, ತಹಶೀಲ್ದಾರ್ ಸಚ್ಚಿದಾನಂದ ಕುಚನೂರ, ತಾಲೂಕು ಕಸಾಪ ಅಧ್ಯಕ್ಷ ಬಿ.ಪಿ.ಪಾಂಡುರಂಗಯ್ಯ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಡಿ. 20 ರಿಂದ 22ರವರೆಗೆ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥವು 87 ದಿನಗಳ ಕಾಲ ರಾಜ್ಯದ 240 ತಾಲೂಕುಗಳಲ್ಲಿ ಸಂಚರಿಸಲಿದೆ. ಈ ರಥಯಾತ್ರೆಯ ಮೂಲಕ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವ ಮತ್ತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ.

ಕನ್ನಡಪ್ರಭ ವಾರ್ತೆ ಶಿರಾ

ಕನ್ನಡ ಕೇವಲ ಭಾಷೆಯಲ್ಲ. ತನ್ನದೇ ಆದ ನೆಲ, ಜಲ, ಸಂಸ್ಕೃತಿಯ ಹಿರಿಮೆಯನ್ನು ಒಳಗೊಂಡಿದೆ. ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಲಿ ಎಂದು ಶಾಸಕ ಡಾ. ಟಿ. ಬಿ. ಜಯಚಂದ್ರ ಹೇಳಿದರು.

ಮಂಡ್ಯ ಜಿಲ್ಲೆಯಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ನಿಮಿತ್ತ ಕನ್ನಡ ಜ್ಯೋತಿಯನ್ನು ಹೊತ್ತು ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಚರಿಸುತ್ತಿರುವ ಕನ್ನಡ ರಥ ಭಾನುವಾರ ಶಿರಾ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅದ್ಧೂರಿ ಸ್ವಾಗತ ಕೋರಿ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಾವೆಲ್ಲರೂ ಕೂಡ ಭಾಗವಹಿಸಿ ಯಶಸ್ವಿಗೊಳಿಸೋಣ ಎಂದು ಶುಭಹಾರೈಸಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪಾಂಡುರಂಗಯ್ಯ ಮಾತನಾಡಿ, ಡಿ. 20 ರಿಂದ 22ರವರೆಗೆ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥವು 87 ದಿನಗಳ ಕಾಲ ರಾಜ್ಯದ 240 ತಾಲೂಕುಗಳಲ್ಲಿ ಸಂಚರಿಸಲಿದೆ. ಈ ರಥಯಾತ್ರೆಯ ಮೂಲಕ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯನ್ನು ಎಲ್ಲೆಡೆ ಪಸರಿಸುವ ಮತ್ತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ ಎಂದರು.

ಕನ್ನಡಾಂಬೆ ಜ್ಯೋತಿಯನ್ನು ಹೊತ್ತು ಬಂದ ಕನ್ನಡ ರಥಕ್ಕೆ ತಾಲೂಕು ಆಡಳಿತ, ಕನ್ನಡಪರ ಸಂಘಟನೆಗಳು ಹಾಗೂ ಸಾರ್ವಜನಿಕರು ಅದ್ಧೂರಿಯಾಗಿ ಬರಮಾಡಿಕೊಂಡರು.

ನಗರಸಭೆ ಅಧ್ಯಕ್ಷ ಜೀಷಾನ್ ಮೊಹಮೂದ್, ಉಪಾಧ್ಯಕ್ಷರಾದ ಲಕ್ಷ್ಮೀಕಾಂತ್, ತಹಸೀಲ್ದಾರ್ ಸಚ್ಚಿದಾನಂದ ಕುಚನೂರ, ನಗರಸಭೆ ಪೌರಾಯುಕ್ತರಾದ ರುದ್ರೇಶ್, ಡಿವೈಎಸ್ಪಿ ಶೇಖರ್, ಸಿಪಿಐ ಮಂಜೇಗೌಡ, ತಾಲೂಕು ಕಸಾಪ ಕಸಬಾ ಹೋಬಳಿ ಘಟಕದ ಅಧ್ಯಕ್ಷೆ ರೇಣುಕಮ್ಮ, ತಾಪಂ ಯೋಜನಾ ಅಧಿಕಾರಿ ರಂಗನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ವಿ.ಕೆ.ಬಡಿಗೇರ, ಕೃಷಿ ತಾಂತ್ರಿಕ ಅಧಿಕಾರಿ ನಟರಾಜು, ಸಿಡಿಪಿಒ ರಾಜನಾಯಕ್, ಸಾಹಿತಿ ಡಾ. ದ್ವಾರನಕುಂಟೆ ಲಕ್ಷ್ಮಣ್, ಕಳ್ಳಂಬೆಳ್ಳ ಆರ್.ಐ. ಬಿ. ರಂಗನಾಥ್, ಬುಕ್ಕಪಟ್ಟಣ ಆರ್. ಐ. ಉಮೇಶ್, ಕಳ್ಳಂಬೆಳ್ಳ ನಾಡಕಚೇರಿ ಉಪ ತಹಸೀಲ್ದಾರ್ ನರಸಿಂಹಮೂರ್ತಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಗುಳಿಗೇನಹಳ್ಳಿ ನಾಗರಾಜು, ಯಲಿಯೂರು ಗ್ರಾಮ ಪಂಚಾಯ್ತಿ ಪಿಡಿಒ ಜುಂಜೇಗೌಡ, ನಗರಸಭೆ ಸದಸ್ಯರಾದ ಬುರ್ಹನ್ ಮಹಮೂದ್, ಫಾರ್ಮನ್, ಮುಖಂಡರಾದ ಜೀಲಾನ್, ನಸ್ರುಲ್ಲಾ ಖಾನ್ ಸೇರಿದಂತೆ ಹಲವರು ಹಾಜರಿದ್ದರು.

PREV

Recommended Stories

ಕಮ್ಮಿ ಫಲಿತಾಂಶ ಬಂದರೆ ಶಿಕ್ಷಕರ ವೇತನ ಕಟ್ ಇಲ್ಲ
12.69 ಲಕ್ಷ ಶಂಕಾಸ್ಪದ ಬಿಪಿಎಲ್‌ ಚೀಟಿ ರಾಜ್ಯದಲ್ಲಿ ಪತ್ತೆ: ಮುನಿಯಪ್ಪ