ಕನ್ನಡ ಕೇವಲ ಸಂವಹನದ ಭಾಷೆಯಲ್ಲ, ಅದು ನಮ್ಮೆಲ್ಲರ ಅಸ್ಮಿತೆ

KannadaprabhaNewsNetwork |  
Published : Nov 24, 2026, 12:30 AM IST
ಚಿತ್ರ 23ಬಿಡಿಆರ್53 | Kannada Prabha

ಸಾರಾಂಶ

Kannada is not merely a language of communication; it is the identity of us all.

ಹಿರೇಮಠ ಸಂಸ್ಥಾನ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು

ಭಾಲ್ಕಿ: ಕನ್ನಡ ಕೇವಲ ಸಂವಹನದ ಭಾಷೆಯಲ್ಲ, ಅದು ಕನ್ನಡಿಗರ ಇತಿಹಾಸ, ಸಂಸ್ಕೃತಿ ಮತ್ತು ವಿಶಿಷ್ಟ ಗುರುತಿನ ಅಸ್ಮಿತೆ ಎಂದು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.

ಇಲ್ಲಿನ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದಿಂದ ಭಾನುವಾರ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ, ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ಜಯಂತಿ ಮತ್ತು 327ನೇ ಮಾಸಿಕ ಶರಣ ಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿ, ಭಾಷೆ ಉಳಿದರೆ, ಸಂಸ್ಕೃತಿ, ಪರಂಪರೆ ಉಳಿಯುತ್ತದೆ. ಅದಕ್ಕಾಗಿ ಕನ್ನಡ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮ ಹಿರಿಯರು, ಅತ್ಯಂತ ಕಠಿಣ ಪರಿಸ್ಥಿತಿಯಲ್ಲಿ ಕನ್ನಡ ಉಳಿವಿಗಾಗಿ ಹೋರಾಡಿದರು. ಅನೇಕರು ತ್ಯಾಗ, ಬಲಿದಾನ ಮಾಡಿದರು. ಇಂದು ಅಂತಹ ಯಾವ ಪರಿಸ್ಥಿತಿ ಇಲ್ಲದಿದ್ದರೂ ನಮ್ಮ ಮನೆಯಲ್ಲಿಯೇ ಕನ್ನಡ ಭಾಷೆ ಮಾಯವಾಗುತ್ತಿದೆ. ಪ್ರತಿಯೊಬ್ಬ ಕನ್ನಡಿಗರು ತಮ್ಮ ಮನೆಯಲ್ಲಿ ಕನ್ನಡ ಮಾತನಾಡಿದರೆ ನಮ್ಮ ಭಾಷೆ ಉಳಿಯುತ್ತದೆ ಎಂದು ತಿಳಿಸಿದರು.

ರಾಜ್ಯ ಕಸಾಪ ಮಹಿಳಾ ಪ್ರತಿನಿಧಿ ಮಲ್ಲಮ್ಮ ಆರ್ ಪಾಟೀಲ್ ಮಾತನಾಡಿ, ಪ್ರತಿಯೊಬ್ಬ ಕನ್ನಡಿಗರು ಕನ್ನಡ ಭಾಷೆಯಲ್ಲಿ ವ್ಯವಹರಿಸಿ ಭಾಷೆಯ ಶ್ರೀಮಂತಿಕೆ ಹೆಚ್ಚಿಸಬೇಕು ಎಂದರು.

ತಾಲೂಕು ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಮಲ್ಲಿಕಾರ್ಜುನ ಹಲ್ಮಂಡಗೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಗಳ ಪ್ರಮುಖರಾದ ಸಂತೋಷ ಬಿ.ಜಿ.ಪಾಟೀಲ, ಸಂಗಮೇಶ ಗುಮ್ಮೆ, ಸಂಜುಕುಮಾರ ನಾವದಗಿ, ಗೋರಕ ಶ್ರೀಮಾಳೆ, ರಾಜಕುಮಾರ ಡಾವರಗಾಂವೆ, ಚಂದು ಸಂಪಂಗೆ ಸೇರಿದಂತೆ ಇನ್ನಿತರ ಪ್ರಮುಖರು ಇದ್ದರು.

--

ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಪಿಎಂಸಿಯಲ್ಲಿ ರೈತರಿಂದ ಕಮಿಷನ್ ವಸೂಲಿ ಮಾಡುವಂತಿಲ್ಲ
ಕನ್ನಡಕ್ಕೆ ನುಡಿದಂತೆ ಬರೆಯುವ, ಬರೆದಂತೆ ನುಡಿವ ಅದ್ಭುತ ಶಕ್ತಿ