ಕನ್ನಡ ನಮ್ಮ ಬದುಕು, ಭವಿಷ್ಯ: ಡಾ.ಕೆ.ವೆಂಕಟೇಶ

KannadaprabhaNewsNetwork |  
Published : May 10, 2026, 02:30 AM IST
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ೧೨೫ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಕನ್ನಡ ಕೇವಲ ಭಾಷೆಯಾಗಿರದೆ, ನಮ್ಮ ಬದುಕು ಹಾಗೂ ಭವಿಷ್ಯವಾಗಿದೆ

ಸಂಡೂರು: ಕನ್ನಡ ಕೇವಲ ಭಾಷೆಯಾಗಿರದೆ, ನಮ್ಮ ಬದುಕು ಹಾಗೂ ಭವಿಷ್ಯವಾಗಿದೆ ಎಂದು ರಾಯಚೂರುನ ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಉಪ ಕುಲಸಚಿವ ಡಾ.ಕೆ.ವೆಂಕಟೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ಗುರುಭವನದಲ್ಲಿ ಮಂಗಳವಾರ ಕಸಾಪ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಕಸಾಪ ೧೧೨ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್. ಅಕ್ಕಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿಯೇ ಅತಿಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣಗೊಳ್ಳುತ್ತಿರುವ ವಿಷಯ ಆತಂಕವನ್ನುಂಟು ಮಾಡುತ್ತಿದೆ ಎಂದರು.

ಸನ್ಮಾನ ಸ್ವೀಕರಿಸಿದ ನಾಡೋಜ ಡಾ.ವಿ.ಟಿ. ಕಾಳೆ, ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಡಾ.ಜಗದೀಶ ಬಸಾಪುರ ಹಾಗೂ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಶ್ರೀಪ್ರಭುದೇವರ ಸಂಸ್ಥಾನ ವಿರಕ್ತಮಠದ ಪ್ರಭುಸ್ವಾಮೀಜಿ ಅವರು ಕನ್ನಡ ನಾಡು, ನುಡಿ, ವೈಶಿಷ್ಟ್ಯದ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜೀವಮಾನ ಶ್ರೇಷ್ಠ ಕಲಾ ಸಾಧಕ ಪ್ರಶಸ್ತಿ ಪುರಸ್ಕೃತ ಡಾ.ವಿ.ಟಿ. ಕಾಳೆ, ಸಾಹಿತ್ಯ ರತ್ನ ಪ್ರಶಸ್ತಿ ಪುರಸ್ಕೃತರಾದ ಡಾ.ತಿಪ್ಪೇರುದ್ರ ಸಂಡೂರು, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಕನ್ನಡ ವಿಷಯದಲ್ಲಿ ಶೇ ೧೦೦ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಸಾಪ ತಾಲೂಕು ಘಟಕದ ಅಧ್ಯಕ್ಷ ಬಿ.ನಾಗನಗೌಡ ಅಧ್ಯಕ್ಷತೆ ವಹಿಸಿದ್ದರು. ಬಸವರಾಜ ಬಣಕಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಟಿ. ವೆಂಕಟೇಶ್, ಎಚ್.ಕುಮಾರಸ್ವಾಮಿ ಸಂಗೀತ ಸೇವೆ ಸಲ್ಲಿಸಿದರು. ಕೆ.ಕುಮಾರಸ್ವಾಮಿ ಸ್ವಾಗತಿಸಿದರು. ಜಿ.ವೀರೇಶ್ ಕಾರ್ಯಕ್ರಮ ನಿರೂಪಿಸಿದರು. ಎಚ್.ಎನ್. ಭೋಸ್ಲೆ ಸನ್ಮಾನಿತರ ಪರಿಚಯ ಮಾಡಿಕೊಟ್ಟರು. ಶಶಿಕಲಾ ಚಂದ್ರಶೇಖರ್ ವಂದಿಸಿದರು.

ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕರಾದ ಬಿ.ಆರ್. ಮಸೂತಿ, ಶರಣಬಸಪ್ಪ ಕರಿಶೆಟ್ಟಿ, ಸಿ.ಎಂ. ಶಿಗ್ಗಾವಿ, ಷಣ್ಮುಖರಾವ್, ಬಿ.ಎಂ. ಮಹಾಂತೇಶ್, ನಾಗರಾಜ್, ಪುರುಷೋತ್ತಮ, ಶಿವಮೂರ್ತಿಸ್ವಾಮಿ ಸೇರಿದಂತೆ ಹಲವು ಸಾಹಿತ್ಯಾಸಕ್ತರು ಉಪಸ್ಥಿತರಿದ್ದರು.

ಸಂಡೂರಿನ ಗುರುಭವನದಲ್ಲಿ ಮಂಗಳವಾರ ಕಸಾಪ ತಾಲೂಕು ಘಟಕದಿಂದ ಹಮ್ಮಿಕೊಂಡಿದ್ದ ಕಸಾಪ ೧೧೨ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ವಿಷಯದಲ್ಲಿ ೧೨೫ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಚ್ಛ ಕುಶಾಲನಗರ ಕಾರ್ಯಕ್ರಮ ಮಾದರಿ: ಟಿ.ಕೆ.ರಾಮಕೃಷ್ಣ ಮೆಚ್ಚುಗೆ
ಹಿರಿಯ ಪತ್ರಕರ್ತ ಚಿ.ನಾ.ಸೋಮೇಶ್‌ಗೆ ಸನ್ಮಾನ