ಕನ್ನಡ ಅತ್ಯಂತ ಪ್ರಾಚೀನ ಭಾಷೆ: ಸೂರಿ ಶ್ರೀನಿವಾಸ್

KannadaprabhaNewsNetwork |  
Published : Jul 19, 2025, 01:00 AM IST
17ಕೆಕೆಡಿಯು2. | Kannada Prabha

ಸಾರಾಂಶ

ಕಡೂರು, ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಅತ್ಯಂತ ಪ್ರಾಚೀನ ಭಾಷೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.

- ಕಡೂರು ತಾಲೂಕು ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕ ಉದ್ಘಾಟನೆ

ಕನ್ನಡಪ್ರಭ ವಾರ್ತೆ, ಕಡೂರು

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಅತ್ಯಂತ ಪ್ರಾಚೀನ ಭಾಷೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.ಕಡೂರು ತಾಲೂಕು ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕ ಉದ್ಘಾಟಿಸಿ ಮಾತನಾಡಿದರು. ವಿಶ್ವದಲ್ಲಿರುವ ಇತರೆ ಭಾಷೆಗಳನ್ನು ಗಮನಿಸಿದಾಗ ಅತ್ಯಂತ ಸುಂದರ ಹಾಗೂ ಸುಲಲಿತ ಭಾಷೆ ನಮ್ಮ ಕನ್ನಡ ಭಾಷೆ ಯಾಗಿದೆ. ಇದು ಇತರೆ ಎಲ್ಲ ಭಾಷೆಗಳಿಗೂ ರಾಜನಿದ್ದಂತೆ ಎಂದು ನುಡಿದರು.

ಭುವನೇಶ್ವರಿ ಭಾವಚಿತ್ರ ಅನಾವರಣಗೊಳಿಸಿದ ಜಿಲ್ಲಾ ಕೋಶಾಧ್ಯಕ್ಷ ಬಿ.ಪ್ರಕಾಶ್ ಮಾತನಾಡಿ, ರಾಜ್ಯದಲ್ಲಿಯೇ ಚಿಕ್ಕಮ ಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವಿನೂತನ ಕಾರ್ಯಕ್ರಮ ಆಯೋಜಿಸುವ ಮೂಲಕ ರಾಜ್ಯದಲ್ಲಿ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಕಡೂರು ತಾಲೂಕಿನಲ್ಲಿ ಗ್ರಾಮ ಸಾಹಿತ್ಯ ಸಮ್ಮೇಳನ, ಹೋಬಳಿ ಸಾಹಿತ್ಯ ಸಮ್ಮೇಳನ, ತಾಲೂಕು ಸಾಹಿತ್ಯ ಸಮ್ಮೇಳನ ಆಯೋಜಿಸಲು ಈಗಾಗಲೇ ತಯಾರಿ ನಡೆದಿದೆ ಎಂದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್. ಎಸ್. ವೆಂಕಟೇಶ್ ಪ್ರತಿಜ್ಞಾವಿಧಿ ಬೋಧಿಸಿದರು. ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಕಡೂರು ತಾಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಜ ಶೇಖರ್ ಮಾತನಾಡಿ, ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಭುವನೇಶ್ವರಿ ಪುತ್ಥಳಿಯನ್ನು ಕಡೂರು ಪಟ್ಟಣದಲ್ಲಿ ಶಾಸಕರು ಮತ್ತು ಪುರಸಭೆ ಅಧ್ಯಕ್ಷರು ಮತ್ತು ಸದಸ್ಯರ ಸಹಕಾರದೊಂದಿಗೆ ನಿರ್ಮಿಸಲು ಸಾಧ್ಯವಾಗಿದೆ. ಮುಂದಿನ ದಿನಗಳಲ್ಲಿ ಮಹಿಳಾ ಸಾಹಿತ್ಯ ಸಮ್ಮೇಳನವನ್ನು ನಿಮ್ಮೆಲ್ಲರ ಸಹಕಾರದೊಂದಿಗೆ ಆಯೋಜಿಸಲಾಗುವುದು ಎಂದು ತಿಳಿಸಿದರು.ಕಸಬಾ ಹೋಬಳಿ ಕಸಾಪ ಅಧ್ಯಕ್ಷ ಆರ್. ಹನುಮಂತಪ್ಪ ಪರಿಷತ್ತಿನ ಧ್ವಜ ಸ್ವೀಕರಿಸಿ ಮಾತನಾಡಿ, ಶ್ರಾವಣ ಮಾಸದಲ್ಲಿ ಮನೆ ಅಂಗಳದಲ್ಲಿ ಸಾಹಿತ್ಯ ಸುಧೆ , ಶಾಲಾ ಕಾಲೇಜುಗಳಲ್ಲಿ ಸಾಹಿತ್ಯ ಚಿಂತನ, ಮತ್ತು ಕಸಬಾ ಹೋಬಳಿಯಲ್ಲಿ ಗ್ರಾಮ ಸಾಹಿತ್ಯ ಸಮ್ಮೇಳನ, ಹೋಬಳಿ ಮತ್ತು ತಾಲೂಕು ಮಟ್ಟದ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ತಾಲೂಕು ಕಸಾಪ ಕಾರ್ಯದರ್ಶಿ ಜಿ. ಎಸ್. ಪ್ರಸನ್ನ, ತಾಪಂ ಮಾಜಿ ಉಪಾಧ್ಯಕ್ಷ ಕುರುಬಗೆರೆ ತಿಮ್ಮಯ್ಯ, ಶ್ರೀ ಕಟ್ಟೆ ಹೊಳೆಯಮ್ಮ ಜಾತ್ರಾ ಸಮಿತಿ ಅಧ್ಯಕ್ಷ ಎಸ್ .ಬಿ .ಹನುಮಂತಪ್ಪ, ಪಟ್ಟಣಗೆರೆ ಗ್ರಾಪಂ ಅಧ್ಯಕ್ಷೆ ಶಾಲಿನಿ ದಿನೇಶ್, ಜಿಗಣೆಹಳ್ಳಿ ನೀಲಕಂಠಪ್ಪ, ಕುರುಬಗೆರೆ ಕೆ.ಆರ್. ವೆಂಕಟೇಶ್, ಮಲ್ಲೇಶಪ್ಪ, ಪಿ. ಟಿ. ಹರೀಶ್ , ಕಡೂರು ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಸಿಂಗಟಗೆರೆ ಸಿದ್ದಪ್ಪ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

PREV

Recommended Stories

ಸ್ವಸ್ಥ ಶರದ್ ಋತು ಪ್ರಕೃತಿಯ ಲಯದಲ್ಲಿ ಸ್ವಸ್ಥತೆ ! ಶರದ್ ಋತುವಿನ ಆಹಾರ ಮತ್ತು ದಿನಚರ್ಯೆ
ನಟ ದರ್ಶನ್‌ಗೆ ಜೈಲಿನಲ್ಲಿ ಹರಿದ ಚಾದರ : ವಕೀಲರ ವಾದ