ಕನ್ನಡ ಜ್ಯೋತಿ ರಥಯಾತ್ರೆ ಇಂದು ಪಟ್ಟಣಕ್ಕೆ ಆಗಮನ

KannadaprabhaNewsNetwork |  
Published : Sep 10, 2024, 01:46 AM IST
ಕನ್ನಡ ಜ್ಯೋತಿ ರಥಯಾತ್ರೆ ಸೆ.೧೦ರ ಮಂಗಳವಾರ ಬೆಳಿಗ್ಗೆ ೧೧ಗಂಟೆಗೆ ಪಟ್ಟಣಕ್ಕೆ ಆಗಮನ | Kannada Prabha

ಸಾರಾಂಶ

ಕನ್ನಡ ಜ್ಯೋತಿ ರಥಯಾತ್ರೆ ಸೆ. 10ರಂದು ಬೆಳಗ್ಗೆ 11 ಗಂಟೆಗೆ ಪಟ್ಟಣಕ್ಕೆ ಆಗಮಿಸಲಿದೆ ಎಂದು ಶ್ರೀಧರ್‌ ಕಂಕನವಾಡಿ ತಿಳಿಸಿದರು. ತಹಸೀಲ್ದಾರ್‌ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಕರ್ನಾಟಕ ಸಂಭ್ರಮದ 50 ರ ಅಭಿಯಾನದ ಅಂಗವಾಗಿ ಕನ್ನಡ ಜ್ಯೋತಿ ರಥಯಾತ್ರೆ ಸೆ. 10ರ ಮಂಗಳವಾರ ಬೆಳಗ್ಗೆ 11ಗಂಟೆಗೆ ಪಟ್ಟಣಕ್ಕೆ ಆಗಮಿಸಲಿದ್ದು, ಕಕ್ಕೆಹೊಳೆ ಜಂಕ್ಷನ್‌ನಲ್ಲಿ ಜ್ಯೋತಿ ರಥವನ್ನು ಸ್ವಾಗತಿಸಿಲಾಗುವುದು ಎಂದು ಶ್ರೀಧರ್ ಕಂಕನವಾಡಿ ಹೇಳಿದರು.

ತಹಸೀಲ್ದಾರ್ ಕಚೇರಿಯಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದ ತಹಸೀಲ್ದಾರ್ ಅವರು, ಕಕ್ಕೆಹೊಳೆ ಜಂಕ್ಷನ್‌ನಿಂದ ಮೆರವಣಿಗೆಯ ಮೂಲಕ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಸಾಗಿ ಜೇಸಿ ವೇದಿಕೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಅಂತಾರಾಷ್ಟೀಯ ಪ್ರಜಾಪ್ರಭುತ್ವದ ದಿನದ ಅಂಗವಾಗಿ ಸೆ. 15ರಂದು ಬೆಳಗ್ಗೆ 10ಗಂಟೆಗೆ ಕಕ್ಕೆಹೊಳೆ ಜಂಕ್ಷನ್‌ನಿಂದ ಬಾಣಾವಾರ ರಸ್ತೆಯಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ತನಕ ಮಾನವ ಸರಪಳಿ ನಿರ್ಮಿಸಲಾಗುವುದು ಎಂದು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ್, ರಾಷ್ಟ್ರೀಯ ಹಬ್ಬಗಳ ಸಮಿತಿ ಎಚ್.ಸಿ.ನಾಗೇಶ್, ನಂದಕುಮಾರ್, ಪ್ರಮುಖರಾದ ಜೆ.ಆರ್.ಪಾಲಾಕ್ಷ, ಜನಾರ್ಧನ್, ಟಿ.ಈ.ಸುರೇಶ್ ವಿವಿಧ ಇಲಾಖಾಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!