- ಮಂತ್ರಾಲಯದಲ್ಲಿ ಅಂತಾರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ
ಶತಮಾನಗಳಷ್ಟು ಪುರಾತನ ಹಿನ್ನೆಲೆಯಿರುವ ನಮ್ಮ ಪ್ರಾಚೀನ ಭಾಷೆ ಕನ್ನಡದ ಶಾಸನಗಳ ಕುರುಹುಗಳು ದೇಶದ ಬಹುತೇಕ ರಾಜ್ಯಗಳಲ್ಲಿ ಪತ್ತೆಯಾಗಿವೆ ಎಂದು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧ್ಯಕ್ಷ ಶ್ರೀ ಸುಬುಧೇಂದ್ರ ತೀರ್ಥರು ನುಡಿದರು.
ಆಂಧ್ರ ಪ್ರದೇಶದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಗುರುರಾಜ ಸಭಾಂಗಣದಲ್ಲಿ ಶುಕ್ರವಾರ ಚಿಕ್ಕಮಗಳೂರು ಜಿಲ್ಲೆ, ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಗೋವಾದ ಅಂತಾರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಪರಿಷತ್ತು ಪ್ರಥಮ ಸಮ್ಮೇಳನ ಉದ್ಘಾಟಿಸಿ ಶ್ರೀಗಳು ಆಶೀರ್ವಚನ ನೀಡಿದರು.ಸಾಹಿತ್ಯ ಕ್ಷೇತ್ರಕ್ಕೆ ಕರ್ನಾಟಕ, ಆಂಧ್ರ ಸೇರಿದಂತೆ ಇತರೆ ರಾಜ್ಯಗಳ ಅನೇಕ ರಾಜ ಮಹಾರಾಜರು ಅರಸರು ಅಪಾರ ಕೊಡುಗೆ ನೀಡಿದ್ದಾರೆ. ಗಡಿನಾಡು ಬಳ್ಳಾರಿ ಹಾಗೂ ಮಂತ್ರಾಲಯದ ಸುತ್ತಮುತ್ತಲು ಕನ್ನಡ ಅತಿ ಹೆಚ್ಚು ಪ್ರೀತಿ ಪಾತ್ರವಾಗಿ ಬೆಳವಣಿಗೆಯಾಗಿದೆ ಎಂದು ತಿಳಿಸಿದರು.
ಇಂದಿಗೂ ಆಂಧ್ರಪ್ರದೇಶದ ರುದ್ರ ಭೂಮಿಯಲ್ಲಿ ಕನ್ನಡಕ್ಕೆ ಸಂಬಂಧಪಟ್ಟ ಶಾಸನಗಳು ದೊರೆತಿವೆ. ಅದರಂತೆ ಕೇರಳ, ತಮಿಳುನಾಡು ಸೇರಿದಂತೆ ಅನೇಕ ರಾಜ್ಯಗಳಲ್ಲಿ ಕನ್ನಡದ ಭಾಷೆ ಒಳಗೊಂಡ ಕುರುಹುಗಳು ಸಿಕ್ಕಿರುವುದು ಗಮನಿಸಿದರೆ ಕನ್ನಡ ಪ್ರೀತಿ ಇಡೀ ದೇಶಾದ್ಯಂತ ಹಬ್ಬಿರುವುದು ವ್ಯಕ್ತವಾಗಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಶ್ರೀ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ಶ್ರೀ ಮಠದ ಗುರು ರಾಘವೇಂದ್ರ ಸ್ವಾಮಿಗಳು ತಮಿಳುನಾಡಿನಲ್ಲಿ ಜನಿಸಿದವರು. ಕನ್ನಡವನ್ನು ಮಾತೃ ಭಾಷೆಯಾಗಿ ಅಳವಡಿಸಿಕೊಂಡು ''''''''ಇಂದು ಎನಗೆ ಗೋವಿಂದ'''''''' ಎಂಬ ಕೃತಿಯನ್ನು ಕನ್ನಡದಲ್ಲಿ ರಚಿಸಿದ್ದರು. ಇದಾದ ಬಳಿಕ ತಮ್ಮ ಕಾರ್ಯ ವ್ಯಾಪ್ತಿಯನ್ನು ಆಂಧ್ರಪ್ರದೇಶದ ಮಣ್ಣಿನಲ್ಲಿ ನೆಲೆಕಂಡವರು ಎಂದು ಹೇಳಿದರು.
ಚಿಕ್ಕಮಗಳೂರು ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಪಂಚರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನ ಒಂದು ದೊಡ್ಡ ಮೈಲಿಗಲ್ಲು ಸೃಷ್ಟಿಸಿದೆ. ನಾಡು ಕಟ್ಟುವ ಕಾಯಕದಲ್ಲಿ ಕನ್ನಡಿಗರು ಕಾಯಕಲ್ಪದಡಿ, ಹೊಸ ಚಿಂತನೆ ಯಡಿ ವಿನೂತನವಾಗಿ ಮಾಡಿ ನಾಡಿನ ಭಾಷೆಯನ್ನು ಗಗನದೆತ್ತರಕ್ಕೆ ಕೊಂಡೊಯ್ಯುವ ಕೆಲಸ ಮಾಡಲಾಗುತ್ತಿದೆ ಎಂದರು.
ಕಸಾಪ ಪ್ರಥಮ ಕನ್ನಡ ಸಿರಿ ಪ್ರಶಸ್ತಿ ಚಿಕ್ಕಮಗಳೂರು ಜಿಲ್ಲೆಯಿಂದ ಆರಂಭಗೊಂಡು ಗಡಿ ದಾಟಿ ಆಂಧ್ರದಲ್ಲಿ ಕಾರ್ಯಕ್ರಮ ನಡೆಸಿ ಪ್ರಶಸ್ತಿ ವಿತರಿಸುವ ಕಾರ್ಯ ಮಾಡಲಾಗಿದೆ ಎಂದರು.
ಕನ್ನಡಿಗರು ಮಾತೃಭಾಷೆಯನ್ನು ಉಳಿಸಿ, ಬೆಳೆಸಿಕೊಂಡು ಬದುಕುತ್ತಿರುವುದು ಅವರ ಕನ್ನಡದ ಪ್ರೀತಿ ಹಾಗೂ ಕನ್ನಡದ ಶಕ್ತಿಗೆ ಸಾಕ್ಷಿಯಾಗಿದೆ. ಅವರ ಹೋರಾಟಕ್ಕೆ ನಾವೆಲ್ಲರೂ ಧ್ವನಿ ಆಗಬೇಕು ಆದ್ದರಿಂದ ಸರ್ಕಾರ ಆ ಬೇಡಿಕೆಗಳನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
22 ಕೆಸಿಕೆಎಂ 1ಆಂಧ್ರ ಪ್ರದೇಶದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಗುರುರಾಜ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಂತಾರಾಜ್ಯ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಪೀಠಾಧ್ಯಕ್ಷರಾದ ಶ್ರೀ ಸುಬುಧೇಂದ್ರ ತೀರ್ಥರು ಉದ್ಘಾಟಿಸಿದರು. ಡಾ. ಮಹೇಶ್ ಜೋಶಿ, ಡಾ. ಪ್ರದೀಪ್ ಕುಮಾರ್ ಹೆಬ್ರಿ, ಡಾ.ಬಿ.ಎಂ. ಪಟೇಲ್ ಪಾಂಡು ಇದ್ದರು.