ಕಸಬಾ ಹೋಬಳಿ ಘಟಕ ಸೇವಾ ದೀಕ್ಷೆ ಸಮಾರಂಭ । ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ
ಕನ್ನಡ ಭಾಷೆಯನ್ನು ನಾವೆಲ್ಲರೂ ಬಳಸುವ ಮೂಲಕ ಉಳಿಸಬೇಕು ಎಂದು ತರೀಕೆರೆ ಜಿ.ಎಚ್.ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಕರೆನೀಡಿದರು.
ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕ ತರೀಕೆರೆಯಿಂದ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಸಬಾ ಹೋಬಳಿ ಘಟಕ ಸೇವಾ ದೀಕ್ಷೆ ಸಮಾರಂಭದಲ್ಲಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ಕಾರ್ಯಕ್ರಮಗಳಿಗೆ ತಾವು ಸಹಕಾರ ನೀಡುವುದಾಗಿ ತಿಳಿಸಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ನೆಲ ಜಲ ಮತ್ತು ಸಂಸ್ಕೃತಿಯನ್ನು ಸಂರಕ್ಷಣೆ ಮಾಡುತ್ತಿದೆ. ರಾಜ್ಯದ ವಿವಿಧ ಸಂಸ್ಥೆಗಳಲ್ಲಿ ಕನ್ನಡಿ ಗರಿಗೆ ಉದ್ಯೋಗಾವಕಾಶ ಕೊಡಬೇಕು, ಐಟಿಬಿಟಿ ಕಂಪನಿಗಳಲ್ಲಿ ಬೇರೆಯವರು ಉದ್ಯೋಗದಲ್ಲಿದ್ದಾರೆ. ಶೇ.80ರಷ್ಟು ಉದ್ಯೋಗ ಕನ್ನಡಿಗರಿಗೆ ಕೊಡಬೇಕು. ನಮಗೆ ನ್ಯಾಯ ಒದಗಿಸಿಕೊಡಬೇಕು. ಭಾಷೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ. ಗ್ರಾಮಾಂತರ ಪ್ರದೇಶಗಳಲ್ಲಿ ಇಂದಿಗೂ ಬಂಧುತ್ವ ಉಳಿದಿದೆ ಎಂದು ಹೇಳಿದರು.
ಚಿಕ್ಕಮಗಳೂರು ಕಸಾಪ ಜಿಲ್ಲಾ ಸಂಚಾಲಕ ಇಮ್ರಾನ್ ಆಹಮದ್ ಬೇಗ್ ಮಾತನಾಡಿ ಕಸಬಾ ಹೋಬಳಿ ಘಟಕ ಸೇವಾ ದೀಕ್ಷೆ ಸಮಾರಂಭ ಕನ್ನಡ ಸಾಹಿತ್ಯ ಪರಿಷತ್ತಿಗೆ ಹೆಮ್ಮೆ ತಂದಿದೆ. ಹೋಬಳಿ ಘಟಕದ ನೂತನ ಅಧ್ಯಕ್ಷ ಟಿ.ಎನ್.ಜಗದೀಶ್ ಸಾಮಾಜಿಕ ಕಳಕಳಿ ಹೊಂದಿದ್ದಾರೆ. ಕನ್ನಡ ನೆಲ ಜಲ ಉಳಿಸಲು ಅನೇಕ ಹೋರಾಟ ಮಾಡಿದ್ದಾರೆ. ಈಗಿರುವಂತಹ ಪರಿಸ್ಥಿತಿಯಲ್ಲಿ ಕನ್ನಡದ ಸಂರಕ್ಷಣೆಗೆ ಚಳುವಳಿ ಎದುರಾಗುವ ಸಂಭವವಿದ್ದು ಇಂತಹ ಹೋರಾಟಗಾರರು ಸಾಹಿತ್ಯ ಕ್ಷೇತ್ರಕ್ಕೆ ಆಗಮಿಸಿರುವುದು ಸ್ವಾಗತಾರ್ಹ ಎಂದರು.
ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ರವಿ ದಳವಾಯಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಕಸಬಾ ಹೋಬಳಿ ಘಟಕದ ನೂತನ ಅಧ್ಯಕ್ಷರಾಗಿ ಟಿ.ಎನ್.ಜಗದೀಶ್ ಪರಿಷತ್ತಿನ ಧ್ವಜ ಸ್ವೀಕರಿಸಿ ರುವುದು ಎಲ್ಲರಿಗೂ ಸಂತೋಷ ತಂದಿದೆ. ತಾಂತ್ರಿಕ ಶಿಕ್ಷಣ ರಾಜ್ಯದಲ್ಲಿ ಹೆಚ್ಚಾಗಿದೆ. ಟಿ.ಎನ್.ಜಗದೀಶ್ ಅವರಿಗೆ ಸಂಘಟನಾ ಚತುರತೆ ಇದೆ ಎಂದು ಹೇಳಿದರು.
20ಕೆಟಿಆರ್.ಕೆ.1ಃ
--------------------