- ಮೊದಲ ಹಂತದಲ್ಲಿ 200 ಮದರಸಾ ಬೋಧಕರಿಗೆ ಕಲಿಕೆ
--ಬೋಧನೆ ಹೇಗಿರುತ್ತೆ?- ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಮದರಸಾ ಶಿಕ್ಷಕರಿಗೆ ಕನ್ನಡ ಕಲಿಕೆ ಪಠ್ಯ
- 36 ಗಂಟೆ ಕಾಲಾವಧಿಯ ಕನ್ನಡ ಕಲಿಕಾ ತರಬೇತಿ ಕಾರ್ಯಕ್ರಮ ಆಯೋಜನೆ- ಬೋಧಕರಿಗೆ ವಾರಾಂತ್ಯದಲ್ಲಿ ದಿನಕ್ಕೆ 2 ತಾಸುಗಳ ಕಾಲ ಕನ್ನಡ ಭಾಷೆ ಕಲಿಕೆ
- ರಾಜ್ಯದಲ್ಲಿ 2000 ಮದರಸಾಗಳಿದ್ದು, ಎಲ್ಲ ಕಡೆ ಮುಂದೆ ಕಲಿಕಾ ಶಿಬಿರಗಳು
----ಕನ್ನಡಪ್ರಭ ವಾರ್ತೆ ಬೆಂಗಳೂರು
ಮಂಗಳವಾರ ನಗರದ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ರಾಜ್ಯದ ಅರೇಬಿಕ್ ಮದರಸಾಗಳ 200 ಬೋಧಕರಿಗೆ ಕನ್ನಡ ಕಲಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ದೈನಂದಿನ ಸಂವಹನಕ್ಕೆ ಅಗತ್ಯವಿರುವ ಸರಳ ಕನ್ನಡವನ್ನು ಅವರಿಗೆ ಹೇಳಿಕೊಡಲಾಗುತ್ತದೆ. ಬೋಧಕರು ಕನ್ನಡ ಕಲಿತರೆ ವಿದ್ಯಾರ್ಥಿಗಳಿಗೂ ಕನ್ನಡ ಕಲಿಸಲು ಸಾಧ್ಯವಾಗುತ್ತದೆ ಎಂದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಮಾತನಾಡಿ, ಅಲ್ಪಸಂಖ್ಯಾತರು ಕನ್ನಡವನ್ನು ನಿರೀಕ್ಷಿತ ಮಟ್ಟದಲ್ಲಿ ಕಲಿಯದಿರುವುದು ಕೂಡ ವಿಭಜಕ ರಾಜಕಾರಣಕ್ಕೆ ಕಾರಣ. ಹೀಗಾಗಿ, ಭಾಷೆ ಮೂಲಕ ಸಂಬಂಧಗಟ್ಟಿಗೊಳಿಸಲು ಅಲ್ಪಸಂಖ್ಯಾತ ಸಮುದಾಯಕ್ಕೆ ಕನ್ನಡ ಕಲಿಸುವ ಪ್ರಯತ್ನ ಆರಂಭಿಸಲಾಗಿದೆ.
ಪ್ರಾಧಿಕಾರದಿಂದ ಪಠ್ಯ ಸಿದ್ಧಪಡಿಸಲಾಗಿದೆ. ಒಟ್ಟು 36 ಗಂಟೆಗಳ ತರಬೇತಿ ಕಾರ್ಯಕ್ರಮವನ್ನು ವಾರಾಂತ್ಯದಲ್ಲಿ ದಿನಕ್ಕೆ 2 ತಾಸು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಹಾಲ್‌ನಲ್ಲಿ ತೆಗೆದುಕೊಳ್ಳಲಾಗುತ್ತದೆ ಎಂದರು.
ಉರ್ದು ಅಕಾಡೆಮಿ ಕನ್ನಡ ಸಂಸ್ಕೃತಿ ಇಲಾಖೆಯಡಿ ತನ್ನಿ:
ಉರ್ದು ಅಕಾಡೆಮಿಯನ್ನು ಮುಖ್ಯವಾಹಿನಿಯಲ್ಲಿ ಉಳಿಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಡಿ ತರಬೇಕೆಂದು ಬಿಳಿಮಲೆ ಅವರು ಸಚಿವ ಜಮೀರ್ ಅಹ್ಮದ್ ಅವರಲ್ಲಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು. ಇದಕ್ಕೆ ಕ್ರಮ ವಹಿಸುತ್ತೇನೆ ಎನ್ನುವ ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.