ಕನ್ನಡ ಸಾಹಿತ್ಯಕ್ಕಿದೆ ಸಾವಿರಾರು ವರ್ಷದ ಇತಿಹಾಸ: ಮಂಜುನಾಥ ಮಾಗಡಿ

KannadaprabhaNewsNetwork |  
Published : Nov 17, 2025, 01:30 AM IST
ಪೋಟೊ-೧೬ ಎಸ್.ಎಚ್.ಟಿ. ೧ಕೆ- ಕಸಾಪ ವತಿಯಿಂದ ಮಂಜುನಾಥ ಮಾಗಡಿ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಕನ್ನಡ ಭಾಷೆ ತನ್ನದೇಯಾದ ಹಿರಿಮೆ ಹೊಂದಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಕನ್ನಡಕ್ಕಿರುವ ಆಗಾಧ ಶಕ್ತಿ ಮತ್ತೊಂದು ಭಾಷೆಯಲ್ಲಿ ಕಾಣಲು ಸಾಧ್ಯವಿಲ್ಲ.

ಶಿರಹಟ್ಟಿ: ಕನ್ನಡ ಸಾಹಿತ್ಯಕ್ಕೆ ಸಾವಿರಾರು ವರ್ಷಗಳ ಸುದೀರ್ಘ ಇತಿಹಾಸವಿದೆ. ಕನ್ನಡವು ಸಾವಿರಾರು ವರ್ಷಗಳಿಗೂ ಹೆಚ್ಚು ಹಳೆಯ ಲಿಖಿತ ಇತಿಹಾಸವನ್ನು ಹೊಂದಿದೆ. ೬ನೇ ಶತಮಾನದಲ್ಲಿ ಸಾಹಿತ್ಯಿತ ಮತ್ತು ಕಾವ್ಯರೂದಲ್ಲಿ ಬೆಳೆಯಲು ಪ್ರಾರಂಭಿಸಿತು. ಕನ್ನಡ ಭಾಷೆಯು ತನ್ನದೇ ಆದ ವೈಶಿಷ್ಟ್ಯ ಮತ್ತು ಸಂಪ್ರದಾಯವನ್ನು ಹೊಂದಿದೆ ಎಂದು ಮಂಜುನಾಥ ಮಾಗಡಿ ತಿಳಿಸಿದರು.ಕನ್ನಡ ಸಂಭ್ರಮಾಚರಣೆ ಪ್ರಯುಕ್ತ ಕುರಿತು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಶಿರಹಟ್ಟಿ ವತಿಯಿಂದ ಸರ್ಕಾರಿ ಪದವಿಪೂರ್ವ ಕಾಲೇಜಿನ ಹೊಳೆಇಟಗಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು. ಕ್ರಿ.ಶ. ೨೫೦ರ ಹಿಂದಿನ ಶಾಸನಗಳು ಕೂಡ ಕನ್ನಡ ಭಾಷೆಯ ಲಿಪಿಯನ್ನು ಹೊಂದಿವೆ. ಇದು ಅದರ ಪ್ರಾಚೀನತೆಗೆ ಸಾಕ್ಷಿಯಾಗಿದೆ ಎಂದರು.ಕನ್ನಡ ಭಾಷೆ ತನ್ನದೇಯಾದ ಹಿರಿಮೆ ಹೊಂದಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಕನ್ನಡಕ್ಕಿರುವ ಆಗಾಧ ಶಕ್ತಿ ಮತ್ತೊಂದು ಭಾಷೆಯಲ್ಲಿ ಕಾಣಲು ಸಾಧ್ಯವಿಲ್ಲ. ಆದರೆ ರಾಜ್ಯದಲ್ಲಿ ಶೇಕಡಾವಾರು ಕನ್ನಡ ಮಾತನಾಡುವವರ ಸಂಖ್ಯೆ ಕ್ರಮೇಣ ಕುಸಿಯುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದ್ದು, ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬ ನಾಗರಿಕನೂ ಶುದ್ಧ ಮನಸ್ಸಿನಿಂದ ಕನ್ನಡ ಭಾಷೆ ಕಲಿಯಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದ ಅಧ್ಯಕ್ಷ ನವೀನ ಅಳವಂಡಿ ಮಾತನಾಡಿ, ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಲಿಖಿತ ಇತಿಹಾಸವಿದೆ. ಅಲ್ಲಿಂದ ಇಲ್ಲಿಯವರೆಗೆ ಅನೇಕ ಶ್ರೇಷ್ಠ ಸಾಹಿತಿಗಳು ಇದನ್ನು ಶ್ರೀಮಂತಗೊಳಿಸಿದ್ದಾರೆ. ಅದರ ಫಲವಾಗಿ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ. ಕನ್ನಡ ಭಾಷೆಗೆ ಇರುವ ಸಿರಿವಂತಿಕೆ ಬೇರಾವ ಭಾಷೆಗೂ ಇಲ್ಲ ಎಂದರು.ವಿದ್ಯಾರ್ಥಿಗಳಿಗೆ ಕನ್ನಡ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಜೀವನ, ಸಾಧನೆ ಹಾಗೂ ಅವರ ಕೃತಿಗಳ ಕುರಿತು ತಿಳಿಸಿದ ಅವರು, ಕನ್ನಡ ಸಾಹಿತ್ಯಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ಅನೇಕ ಮಹಾನ್ ವ್ಯಕ್ತಿಗಳ ಕೊಡುಗೆಗಳ ಫಲವಾಗಿ ಕನ್ನಡ ಸಮೃದ್ಧಿಯಾಗಿ ಬೆಳೆದಿದೆ. ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡಕ್ಕೆ ಧಕ್ಕೆ ಬಂದಿದ್ದರೂ ತನ್ನ ಮೂಲ ಬೇರನ್ನು ಉಳಿಸಿಕೊಂಡು ಬಂದಿದೆ ಎಂದರು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಾಚಾರ್ಯರಾದ ಎಂ.ಆರ್. ಮೇಘಲಮನಿ ಮತ್ತು ಕಾಲೇಜಿನ ವಿವಿಧ ಉಪನ್ಯಾಸಕರು ಇದ್ದರು.

PREV

Recommended Stories

ಕೆಎಲ್ಇ ಶಿಕ್ಷಣ ಜತೆಗೆ ಸಂಸ್ಕಾರ ನೀಡಿದ ಸಂಸ್ಥೆ
ಸಾಲುಮರದ ತಿಮ್ಮಕ್ಕನವರ ಪ್ರಕೃತಿ ಪ್ರೇಮ ಎಲ್ಲರಿಗೂ ಆದರ್ಶ: ಶಾಸಕಿ ಅನ್ನಪೂರ್ಣ