ತರೀಕೆರೆಯಲ್ಲಿ ಭಕ್ತಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮ
ಭಕ್ತಶ್ರೇಷ್ಠ ಶ್ರೀ ಕನಕದಾಸರು ಅಮೂಲ್ಯ ಕೊಡುಗೆ ನೀಡಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಪಟ್ಟಣದ ಶ್ರೀ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ನಡೆದ ಭಕ್ತಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಅಧ್ಯಕ್ಷತೆ ವಹಿಸಿ ಮಾತನಾಡಿ ನಳಚರಿತ್ರೆ, ರಾಮಧಾನ್ಯ ಚರಿತೆ ಇಂತಹ ಅಮೂಲ್ಯ ಕೊಡುಗೆಯನ್ನು ಕನ್ನಡ ಸಾಹಿತ್ಯಕ್ಕೆ ನೀಡಿದ್ದಾರೆ. ಅಕ್ಕಿ ಮತ್ತು ಬಡವರ ರಾಗಿ ಮಹತ್ವವನ್ನು ರಾಮಧಾನ್ಯ ಚರಿತೆಯಲ್ಲಿ ಸಾರಿದ್ದಾರೆ ಎಂದು ಹೇಳಿದ್ದಾರೆ.ಪಟ್ಟಣದಲ್ಲಿ ಸೂಕ್ತ ಸ್ಥಳದಲ್ಲಿ ಭಕ್ತಶ್ರೇಷ್ಠ ಶ್ರೀ ಕನಕದಾಸರ ಕಂಚಿನ ಪುತ್ಥಳಿ ಸ್ಥಾಪಿಸಲಾಗುವುದು ಎಂದ ಅವರು ತಮ್ಮೆಲ್ಲರ ಸಹಕಾರದಿಂದ ಕ್ಷೇತ್ರ ಶಾಸಕರಾದ ತಮ್ಮನ್ನು, ಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಎಸ್.ಸಿದ್ದರಾಮಯ್ಯ ರಾಜ್ಯ ಪ್ರವಾಸೋದ್ಯಮ ನಿಗಮದ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ ಇದಕ್ಕಾಗಿ ಸರ್ವರಿಗೂ ಕೃತಜ್ಞತೆ ಅರ್ಪಿಸುತ್ತೇನೆ ಎಂದು ಹೇಳಿದರು.
ಅಜ್ಜಂಪುರ ತಾ.ಪಂ.ಕಾರ್ಯ ನಿರ್ವಹಣಾಧಿಕಾರಿ ವಿಜಯಕುಮಾರ್ ಉಪನ್ಯಾಸ ನೀಡಿದರು. ಟಿ.ವಿ.ಶಿವಶಂಕರಪ್ಪ ಅವರಿಗೆ ಕನಕಶ್ರೀ ಪ್ರಶಸ್ತಿ ವಿತರಿಸಿ ಸನ್ಮಾನಿಸಲಾಯಿತು. ತಾ.ಕಸಾಪ ಅಧ್ಯಕ್ಷ ರವಿ ದಳವಾಯಿ ಕವನ ವಾಚಿಸಿದರು.
-
ತರೀಕೆರೆಯಲ್ಲಿ ನಡೆದ ಕನಕದಾಸರ ಜಯಂತಿಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ಶ್ರೀ ಗುರು ರೇವಣ ಸಿದ್ದೇಶ್ವರ ತಾಲೂಕು ಕುರುಬರ ಸಮಾಜ ಅಧ್ಯಕ್ಷ ಟಿ.ಎಸ್.ರಮೇಶ್, ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಟಿ.ವಿ.ಶಿವಶಂಕರಪ್ಪ, ಎಂ.ಎಲ್.ಡಿ.ಬಿ.ನಿರ್ದೇಶಕ ಟಿ.ಎಸ್. ಪ್ರಕಾಶ್ ವರ್ಮ, ತಾ.ಪಂಚ ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷೆ ಹೇಮಲತ ರೇವಣ್ಣ ಮತ್ತಿತರರು ಇದ್ದರು.