ಉನ್ನತ ಪರಂಪರೆಯ ಕನ್ನಡ ಸಾಹಿತ್ಯ: ನಾಸಿರ್‌ ಅಹಮದ್‌

KannadaprabhaNewsNetwork |  
Published : Nov 25, 2024, 01:02 AM IST
ಚಿತ್ರ :  24ಎಂಡಿಕೆ5 : ಕಸಾಪ ವತಿಯಿಂದ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ ನಡೆಯಿತು.  | Kannada Prabha

ಸಾರಾಂಶ

ಕನ್ನಡ ಸಾಹಿತ್ಯ ಲೋಕದಲ್ಲಿ ದಾಸ ಸಾಹಿತ್ಯ ವಚನ ಸಾಹಿತ್ಯ ಎಲ್ಲವೂ ಅತ್ಯುನ್ನತ ಪರಂಪರೆ ಹೊಂದಿದೆ ಎಂದು ಎಂ.ಬಿ. ನಾಸಿರ್‌ ಅಹಮ್ಮದ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಎರಡು ಸಾವಿರ ವರ್ಷಗಳಿಗೂ ಹೆಚ್ಚಿನ ಇತಿಹಾಸ ಹೊಂದಿದ ಕನ್ನಡ ಭಾಷೆ ನಾಡು ನುಡಿ ಅತಿ ಉತ್ಕೃಷ್ಟವಾದದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ದಾಸ ಸಾಹಿತ್ಯ ವಚನ ಸಾಹಿತ್ಯ ಶಿಶು ಸಾಹಿತ್ಯ ಜಾನಪದ ಸಾಹಿತ್ಯ, ಪ್ರೇಮ ಸಾಹಿತ್ಯ, ದಾಂಪತ್ಯ ಸಾಹಿತ್ಯ ಈ ಹಲವಾರು ವಿಭಾಗಗಳಿದ್ದು ಎಲ್ಲವೂ ಅತ್ಯುನ್ನತ ಪರಂಪರೆ ಹೊಂದಿದೆ ಎಂದು ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್ ನ ಉಪಾಧ್ಯಕ್ಷ ರಾದ ಎಂ.ಬಿ ನಾಸಿರ್ ಅಹಮದ್ ನುಡಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ,ಎ.ಎಲ್. ಜಿ ಕ್ರೆಸೆಂಟ್ ಶಾಲೆ, ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್ ಹಾಗೂ ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ವತಿಯಿಂದ ಮಡಿಕೇರಿಯ ಕ್ರೆಸೆಂಟ್ ಶಾಲಾ ಸಭಾಂಗಣದಲ್ಲಿ ನಡೆದ 69 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಲ್ಲಿ ಸಾಮಾನ್ಯ ಜ್ಞಾನ ಬೆಳೆಯಬೇಕು, ಕನ್ನಡ ನಾಡು ನುಡಿಯ ವಿಚಾರ ತಿಳಿಯಬೇಕು, ಕನ್ನಡ ಗೀತೆಗಳನ್ನು ಹಾಡುವ ಮೂಲಕ ಅದರ ಅರಿವು ಅವರಿಗೆ ಮೂಡಬೇಕು ಎಂದು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು.

ಕ್ರೆಸೆಂಟ್ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಜಿ.ಎಚ್ ಹನೀಫ್‌ ಮಾತನಾಡಿ, ನಮ್ಮ ವಿದ್ಯಾರ್ಥಿಗಳಿಗೆ ಈ ರೀತಿಯ ಒಂದು ಉತ್ತಮವಾದ ಕಾರ್ಯಕ್ರಮದಿಂದ ಕನ್ನಡ ನಾಡು ನುಡಿ ಪರಿಚಯ ಮಾಡಿಕೊಡುತ್ತಿರುವ ಸಾಹಿತ್ಯ ಪರಿಷತ್ತಿಗೆ ಧನ್ಯವಾದ ಅರ್ಪಿಸಿದರು.

ಕ್ರಸೆಂಟ್ ಶಾಲೆಯ ಅಧ್ಯಕ್ಷ ನಿಝಾಮುದ್ದೀನ್ ಸಿದ್ದೀಖಿ, ಉಪಾಧ್ಯಕ್ಷ ಅನೀಸ್ ಜವಾಹರ್, ನಿರ್ದೇಶಕ ಉಮ್ಮರ್ ಚಡಖಾನ್, ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಎಸ್.ಐ ಮುನೀರ್ ಅಹಮದ್, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷೆ ಪುದಿಯನೆರವನ ರೇವತಿ ರಮೇಶ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷೆ ಕಡ್ಲೇರ ತುಳಸಿ ಮೋಹನ್, ಕೋಶಾಧಿಕಾರಿ ಸಂಪತ್ ಕುಮಾರ್ ಇದ್ದರು.

ಸಾಹಿತಿಗಳಾದ ಬೈತಡ್ಕ ಜಾನಕಿ, ಗೌರಮ್ಮ ಮಾದಮ್ಮಯ್ಯ, ಭಾರತಿ ರಮೇಶ್, ಕಟ್ಟರ್ತನ ಲಲಿತ ಅಯ್ಯಪ್ಪ, ಚೊಕ್ಕಾಡಿ ಪ್ರೇಮ ರಾಘವಯ್ಯ, ರಾಧಾ ಪೊನ್ನಪ್ಪ ಶರೀಫ್ ಶಾಲಾ ಅಧ್ಯಾಪಕರು, ಶಾಲಾ ವಿದ್ಯಾರ್ಥಿಗಳಿಂದ ಕನ್ನಡ ಗೀತ ಗಾಯನ ಕವನ ವಾಚನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು. 15 ಶಾಲೆಗಳ 30 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಮೊದಲ ಸುತ್ತಿನಲ್ಲಿ ಇಬ್ಬರು ವಿದ್ಯಾರ್ಥಿಗಳ ಎಂಟು ತಂಡವನ್ನು ಆಯ್ಕೆಗೊಳಿಸಲಾಯಿತು. ಹತ್ತು ಸುತ್ತುಗಳ ಸ್ಪರ್ಧೆಯಲ್ಲಿ ಹಾಕತ್ತೂರಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ನಿತ್ಯಶ್ರೀ ಎಂಎಸ್ ಮತ್ತು ಚೇತನ್ ಪಿ ಸಿ ಇವರು ಪ್ರಥಮ ಬಹುಮಾನಗಳಿಸಿದರು. ದ್ವಿತೀಯ ಬಹುಮಾನವನ್ನು ನಾಪೋಕ್ಲುವಿನ ಎಕ್ಸೆಲ್ ಎಜುಕೇಶನ್ ಶಾಲೆಯ ಸುಮಂತ್ ಟಿ ಆರ್ ಮತ್ತು ದರ್ಶ ದೇಶಮ್ಮ ಪಡೆದುಕೊಂಡರು. ತೃತೀಯ ಬಹುಮಾನವನ್ನು ರಾಫೆಲ್ಸ್ ವಿದ್ಯಾಸಂಸ್ಥೆ ನಾಪೋಕ್ಲು ಶಾಲೆಯ ವಿದ್ಯಾರ್ಥಿಗಳಾದ ಮೆಹರೂಫ್ ಮತ್ತು ಸಲ್ಮಾನ್ ಫಾರಿಸ್ ಪಡೆದುಕೊಂಡರು.

ಹಿರಿಯ ಸಾಹಿತಿ ಬಿ.ಎ ಶಂಷುದ್ದೀನ್ ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಅವರು ಸ್ಪರ್ಧಿಸಿದ 8 ತಂಡಗಳಿಗೆ ನಾಡಿನ ಪ್ರಸಿದ್ಧ ನದಿಗಳಾದ ಶರಾವತಿ, ಗೋದಾವರಿ, ಭದ್ರ, ಕನ್ನಿಕೆ, ಕಾವೇರಿ, ತುಂಗಾ, ಕೃಷ್ಣ , ಭೀಮ ಹೀಗೆ ನದಿಗಳ ಹೆಸರನ್ನು ಇಡುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ತಂದುಕೊಟ್ಟರು.

ಕ್ರೆಸೆಂಟ್ ಶಾಲಾ ಅಧ್ಯಾಪಕಿ ಸುಲ್ಹತ್ ನಿರೂಪಿಸಿದರು. ಕೊಡಗು ಬ್ಯಾರಿ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಎಸ್ ಐ ಮುನೀರ್ ಅಹಮದ್ ಸ್ವಾಗತಿಸಿದರು. ಕೋಶಾಧಿಕಾರಿ ಸಂಪತ್ ಕುಮಾರ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ