- ಸಾಣೆಹಳ್ಳಿಯಲ್ಲಿ ಉದ್ಘಾಟನೆಗೊಂಡ ಚಿಕ್ಕಮಗಳೂರು- ಚಿತ್ರದುರ್ಗ ಅಂತರ ಜಿಲ್ಲಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ
ನಗರ ಪ್ರದೇಶಗಳಲ್ಲಿರುವ ಕಾನ್ವೆಂಟ್ ಸಂಸ್ಕೃತಿ ಗ್ರಾಮೀಣ ಪ್ರದೇಶಕ್ಕೂ ಕಾಲಿಟ್ಟಿದ್ದು ಅದು ಹೀಗೆ ಮುಂದುವರೆದರೆ ಕನ್ನಡತನ ಅಳಿಸಿಹೊಗಿ, ಸಂಸ್ಕೃತಿ ಮಾಯವಾಗಲಿದೆ ಎಂದು ಸಾಣೇಹಳ್ಳಿಯ ಡಾ ಪಂಡಿತಾರಾಧ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ತಾಲೂಕಿನ ಸಾಣೆಹಳ್ಳಿಯ ತರಾಸು ಮಹಾಮಂಟಪದ ಅಲ್ಲಮಪ್ರಭು ವೇದಿಕೆಯಲ್ಲಿ ಉದ್ಘಾಟನೆಗೊಂಡ ಚಿಕ್ಕಮಗಳೂರು- ಚಿತ್ರದುರ್ಗ ಅಂತರ ಜಿಲ್ಲಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆವಹಿಸಿ ಮಾತನಾಡಿದರು. ಇಂತಹ ಸಾಹಿತ್ಯ ಸಮ್ಮೇಳನಗಳನ್ನು ಗ್ರಾಮೀಣ ಭಾಗದಲ್ಲಿ ಆಯೋಜಿಸುವ ಮೂಲಕ ಗ್ರಾಮೀಣ ಜನರಲ್ಲಿ ಕಲೆ, ಸಾಹಿತ್ಯ ಅರಿವು ಮೂಡಿಸಿ ಮಾಯವಾಗುತ್ತಿರುವ ಕನ್ನಡ ಭಾಷೆ ಉಳಿಸುವ ಕೆಲಸ ಎಲ್ಲರೂ ಮಾಡ ಬೇಕಿದೆ. ಸಾಹಿತ್ಯ ಸಮ್ಮೇಳನದ ಮೂಲಕ ಸಾಹಿತ್ಯ ಚರ್ಚೆ ಜೊತೆಗೆ ಪ್ರಚಲಿತ ಸಮಸ್ಯೆಗಳ ಬೆಳಕು ಚೆಲ್ಲುವಂತೆ ಆಗಬೇಕು. ರಾಜಕಾರಿಣಿ, ಕೃಷಿಕ, ವ್ಯಾಪಾರಿ, ಕೈಗಾರಿ ಕೋದ್ಯಮಿಗಳಿಗಿಂತ ಹೆಚ್ಚಾಗಿ ಸಾಹಿತಿಗಳಿಗೆ ಸಾಮಾಜಿಕ ಕಳಕಳಿ ಮತ್ತು ಬದ್ಧತೆ ಇರಬೇಕಾದ್ದು ಅನಿವಾರ್ಯ. ಬದ್ಧತೆಯಿಲ್ಲದೆ ಹೊತ್ತು ಬಂದಂತೆ ಕೊಡೆ ಹಿಡಿಯುವ ಪ್ರವೃತ್ತಿ ಸಾಹಿತಿಗಳಿಗೂ ಬಂದರೆ ಆದರ್ಶ ಅರ್ಥಹೀನವಾಗುತ್ತವೆ ಎಂದರು.ಆಪಾದನೆಗಳು ಯಾರಿಗೂ ತಪ್ಪಿದ್ದಲ್ಲ ಆಪಾದನೆಗಳು ಸಕಾರಾತ್ಮಕವಾಗಿರಬೇಕೇ ಹೊರತು ನಕಾರಾತ್ಮಕವಾಗಿರಬಾರದು. ಸ್ವಾಮಿ, ರಾಜಕಾರಿಣಿ, ಸಾಹಿತಿಗಳು ಮಿತಿಗಳನ್ನು ದಾಟಿದಾಗಲೇ ಶ್ರೇಷ್ಠತೆ ಬರುವುದು, ಸಾಹಿತಿಗೆ ಗೌರವ ಬರುವುದು. ರಾಜಕಾರಿಣಿ ಜನ ಮನ್ನಣೆಗಳಿಸುವುದು. ಆದರೆ ಇಂದು ಸಾಹಿತಿಗಳು, ರಾಜಕಾರಣಿಗಳು ಸ್ವಾಮಿಗಳು ತಮ್ಮದೇ ಆದ ಗೋಡೆ ಕಟ್ಟಿಕೊಳ್ಳುತ್ತಿದ್ದಾರೆ ಎಂದರು.
ನಮ್ಮ ನಾಡಿನ ಮೌಲ್ಯಯುತವಾದ ಜಾನಪದ ಕಲೆಗಳೂ ಅವಸಾನದ ಅಂಚಿನಲ್ಲಿವೆ.ಸರ್ಕಾರ ಉದಾಸೀನ ಮಾಡದೆ ಶಾಸ್ತ್ರೀಯ ಸಂಗೀತಗಳಿಗೆ ನೀಡಿ ದಂತೆ ಜಾನಪದ ಕಾಲಾವಿದರಿಗೂ ಹೆಚ್ಚಿನ ನೆರವು ನೀಡುವ ಕೆಲಸ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾಡಬೇಕು ಎಂದರು.
ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ ಜಿಲ್ಲಾ ಉಸ್ತುವಾರಿ ಸಚಿವ ಬಿ ಸುಧಾಕರ್ ಮಾತನಾಡಿ ಕನ್ನಡ ಉಳಿಸಿ, ಬೆಳೆಸುವ ಕೆಲಸವನ್ನು ಸರ್ಕಾರ ಪ್ರಮಾಣಿಕವಾಗಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಬಳಸುವಂತೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ ಎಂದರು.
ವೇದಿಕೆಯಲ್ಲಿ ಶಾಸಕ ರಘುಮೂರ್ತಿ ಸೇರಿದಂತೆ ಸಾಹಿತಿಗಳು ಹಾಗು ವಿವಿಧ ಬಾಗಗಳಿಂದ ಆಗಮಿಸಿದ್ದ ಕಸಾಪದ ಪದಾಧಿಕಾರಿಗಳು ಹಾಜರಿದ್ದರು.
ಸಮ್ಮೇಳನ ಎನ್ನುವುದು ಕೇವಲ ಸಂಕೇತ.ಅಲ್ಲಿ ನಡೆಯುವ ಚಟುವಟಿಕೆಗಳು ಕ್ರಿಯಾಶೀಲವಾಗಿರಬೇಕು. ಆಮಂತ್ರಣ ಪತ್ರಿಕೆ ನೋಡುವುದಕ್ಕೂ ಓದುವುದಕ್ಕೂ ಆಕರ್ಷಣೀಯವಾಗಿರಬೇಕು. ಮತದಾರರ ಚೀಟಿಯಂತಾಗಬಾರದು
ಕಸಾಪ ಮಾಜಿ ಅಧ್ಯಕ್ಷರು ಬೆಂಗಳೂರು.ಪೋಟೋ, 2ಎಚ್‌ಎಸ್‌ಡಿ1: ಸಾಣೇಹಳ್ಳಿಯಲ್ಲಿ ನಡೆದ ಸಾಹಿತ್ಯ ಸಮ್ಮೇಳನವನ್ನು ಗೊ ರು ಚನ್ನಬಸಪ್ಪ ಉದ್ಘಾಟಿಸಿದರು.