ರಾಜ್ಯ ಸುರಭಿಶ್ರೀ ಪ್ರಶಸ್ತಿಗೆ ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ ಆಯ್ಕೆ

KannadaprabhaNewsNetwork | Published : Dec 3, 2023 1:00 AM

ಸಾರಾಂಶ

ಗೌರಿಗದ್ದೆಯ ಸ್ವರ್ಣ ಪೀಠಿಕಾಪುರ ಅವದೂತ ವಿನಯ್ ಗುರೂಜಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ದಿವ್ಯ ಸಾನ್ನಿಧ್ಯವನ್ನು ಕರ್ಕಿ ಕ್ಷೇತ್ರದ ಜ್ಞಾನೇಶ್ವರಿ ಪೀಠದ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮೀಜಿ ವಹಿಸುವರು. ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮಿಗಳು, ಲಕ್ಕವಳ್ಳಿ ಮೋಕ್ಷ ಮಂದಿರದ ವೃಷಭಸೇನ ಪಟ್ಟಾಚಾರಕ ಮಹಾಸ್ವಾಮಿಗಳು, ರೇವಣಸಿದ್ದೇಶ್ವರ ಮಹಾಸ್ವಾಮಿಗಳು ದುಗ್ಲಿ, ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಶಾಂತಪುರಮಠ ಭಾಗವಹಿಸುವರು. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ಡಿಡಿ ಪಿಕ್ಚರ್ ಪ್ರೈವೈಟ್‌ ಲಿಮಿಟೆಡ್‌ನ ಎಂ.ವಿ. ಕೃಷ್ಣಪ್ಪ, ಮಾಜಿ ಶಾಸಕ ಗಂಗಾಧರ್ ಭಟ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಸೊರಬ

ಸುರಭಿ ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊಡಮಾಡುವ ಸುರಭಿಶ್ರೀ ರಾಜ್ಯ ಪ್ರಶಸ್ತಿಗೆ ಸುವರ್ಣ ನ್ಯೂಸ್ ಮತ್ತು ಕನ್ನಡಪ್ರಭ ದಿನಪತ್ರಿಕೆ ಪ್ರಧಾನ ಸಂಪಾದಕ ರವಿ ಹೆಗಡೆ ಆಯ್ಕೆಯಾಗಿದ್ದು, ಡಿ.5ರಂದು ಸೊರಬ ಪಟ್ಟಣದ ಡಾ. ರಾಜ್ ರಂಗಮಂದಿರದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸುರಭಿ ಸೇವಾ ಚಾರಿಟೇಬಲ್ ಟ್ರಸ್ಟ್‌ ಅಧ್ಯಕ್ಷ ಎಸ್.ಜಿ. ರಾಮಚಂದ್ರ ಹೇಳಿದರು.

ಪಟ್ಟಣದ ಮುರುಘಾ ಮಠದ ಆವರಣದಲ್ಲಿ ರಾಜ್ಯ ಸುರಭಿಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಲ್ಲದೇ ಮಾತೃಶ್ರೀ ಹೇಮಾವತಿ ವೀರೇಂದ್ರ ಹೆಗ್ಗಡೆ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ. ಜಗದೀಶ್, ಶಿವಮೊಗ್ಗ ಟೈಮ್ಸ್ ದಿನಪತ್ರಿಕೆಯ ಸಂಪಾದಕ ಎಸ್. ಚಂದ್ರಕಾಂತ್ ಸುರಭಿಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜೊತೆಗೆ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಗೌರಿಗದ್ದೆಯ ಸ್ವರ್ಣ ಪೀಠಿಕಾಪುರ ಅವದೂತ ವಿನಯ್ ಗುರೂಜಿ ಕಾರ್ಯಕ್ರಮವನ್ನು ಉದ್ಘಾಟಿಸುವರು. ದಿವ್ಯ ಸಾನ್ನಿಧ್ಯವನ್ನು ಕರ್ಕಿ ಕ್ಷೇತ್ರದ ಜ್ಞಾನೇಶ್ವರಿ ಪೀಠದ ಸಚ್ಚಿದಾನಂದ ಜ್ಞಾನೇಶ್ವರ ಭಾರತಿ ಮಹಾಸ್ವಾಮೀಜಿ ವಹಿಸುವರು. ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮಿಗಳು, ಲಕ್ಕವಳ್ಳಿ ಮೋಕ್ಷ ಮಂದಿರದ ವೃಷಭಸೇನ ಪಟ್ಟಾಚಾರಕ ಮಹಾಸ್ವಾಮಿಗಳು, ರೇವಣಸಿದ್ದೇಶ್ವರ ಮಹಾಸ್ವಾಮಿಗಳು ದುಗ್ಲಿ, ಶಿವಾನಂದ ಶಿವಾಚಾರ್ಯ ಸ್ವಾಮಿಗಳು ಶಾಂತಪುರಮಠ ಭಾಗವಹಿಸುವರು. ಜಿಲ್ಲಾಧಿಕಾರಿ ಡಾ. ಸೆಲ್ವಮಣಿ, ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‌ಕುಮಾರ್, ಡಿಡಿ ಪಿಕ್ಚರ್ ಪ್ರೈವೈಟ್‌ ಲಿಮಿಟೆಡ್‌ನ ಎಂ.ವಿ. ಕೃಷ್ಣಪ್ಪ, ಮಾಜಿ ಶಾಸಕ ಗಂಗಾಧರ್ ಭಟ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.

ಕಾರ್ಯಕ್ರಮಕ್ಕೂ ಮೊದಲು 18 ವರ್ಷಕ್ಕಿಂತ ಮೇಲ್ಪಟ್ಟ ವಯೋಮಿತಿಯ ಹೆಣ್ಣುಮಕ್ಕಳಿಗೆ ರಾಜ್ಯಮಟ್ಟದ ಡ್ಯಾನ್ಸ್ ಡ್ಯಾನ್ಸ್ ನೃತ್ಯ ಸ್ಪರ್ಧೆ ಇದ್ದು, ಪ್ರಥಮ, ದ್ವಿತೀಯ, ತೃತೀಯ ಬಹುಮಾನ, ನಗದು ಹಾಗೂ ಆಕರ್ಷಕ ಟೋಫಿ ನೀಡಲಾಗುವುದು ಎಂದು ಹೇಳಿದರು.

ಸುರಭಿ ಸೇವಾ ಚಾರಿಟೇಬಲ್ ಉಪಾಧ್ಯಕ್ಷ ವಿದ್ವಾನ್ ನಾರಾಯಣ ಭಟ್ ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಸೇವಾ ಕಾರ್ಯಗಳಲ್ಲಿ ನಿರತವಾದ ಸುರಭಿ ಸೇವಾ ಟ್ರಸ್ಟ್ ರಾಜ್ಯದಲ್ಲಿ ಉತ್ತಮ ಕೆಲಸವನ್ನು ಮಾಡುವ ಸಮಾಜಮುಖಿ ಶ್ರೇಷ್ಠರನ್ನು ಗುರುತಿಸುವ ಇನ್ನಷ್ಟು ಉತ್ತೇಜನ ನೀಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸುರಭಿ ಸೇವಾ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕಿ ವಾಣಿಶ್ರೀ ಹಾಜರಿದ್ದರು.

- - - -02ಕೆಪಿಸೊರಬ03:

ಸೊರಬ ಪಟ್ಟಣದ ಮುರುಘಾ ಮಠದ ಆವರಣದಲ್ಲಿ ರಾಜ್ಯ ಸುರಭಿಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಟ್ರಸ್ಟ್ ಅಧ್ಯಕ್ಷ ಎಸ್.ಜಿ. ರಾಮಚಂದ್ರ ಮಾತನಾಡಿದರು.

Share this article