ಕನ್ನಡ ಅಭಿಮಾನ ಅಂತರಾಳದಿಂದ ಬರಬೇಕು: ಸಂಗಮೇಶ್ವರ

KannadaprabhaNewsNetwork |  
Published : Nov 02, 2023, 01:01 AM IST
ಚಿತ್ರ: ಡಿ೧-ಬಿಡಿವಿಟಿಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೮ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನಾಡಧ್ವಜಾರೋಹಣ ನೆರವೇರಿಸಿ, ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದರು. | Kannada Prabha

ಸಾರಾಂಶ

ಕನಕ ಮಂಟಪ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ

ಕನ್ನಡಪ್ರಭ ವಾರ್ತೆ, ಭದ್ರಾವತಿ ಕನ್ನಡದ ಬಗೆಗಿನ ಅಭಿಮಾನ ಅಂತರಾಳದಿಂದ ಬರಬೇಕು. ಕನ್ನಡ ರಾಜ್ಯೋತ್ಸವ ವರ್ಷದ 360 ದಿನಗಳ ನಿತ್ಯೋತ್ಸವ ಆಗಬೇಕೆಂದರೆ ಜನರ ಮನೋಭಾವ ಹಾಗೂ ಪ್ರೀತಿ ಮುಖ್ಯ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು. ನಗರದ ಹಳೇ ನಗರದ ಕನಕ ಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಾಡಧ್ವಜಾರೋಹಣ ನೆರವೇರಿಸಿ, ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಆಡಳಿತ ಭಾಷೆ ಹಾಗೂ ಮಾತೃಭಾಷೆಯಾದ ಕನ್ನಡಕ್ಕೆ ಇನ್ನೂ ಹೆಚ್ಚಿನ ಸ್ಥಾನಮಾನಗಳು ಲಭಿಸಬೇಕು. ತಾಯಿಯನ್ನು ಗೌರವಿಸುವಂತೆಯೇ ಕನ್ನಡ ಭಾಷೆಯನ್ನು ಗೌರವಿಸುವುದು ಕನ್ನಡನಾಡಿನ ಪ್ರತಿಯೊಬ್ಬರ ಕರ್ತವ್ಯ. ಅತ್ಯಂತ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ನಾಡು ಕರ್ನಾಟಕ ಎಂಬುದು ಪ್ರತಿಯೊಬ್ಬ ಕನ್ನಡಿಗರ ಹೆಮ್ಮೆ ಎಂದರು. ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ತಹಸೀಲ್ದಾರ್ ಕೆ.ಆರ್. ನಾಗರಾಜ್, ಕನ್ನಡ ಭಾಷೆಗೆ 2 ಸಾವಿರ ವರ್ಷಗಳ ಇತಿಹಾಸವಿದೆ. ಭವ್ಯ ಪರಂಪರೆ ಇದ್ದು, ನಾಡು, ನುಡಿಗಾಗಿ ಶ್ರಮಿಸಿದ ಮಹನೀಯರನ್ನು ಸ್ಮರಿಸಿ ಅವರ ದಾರಿಯಲ್ಲಿ ನಾವೆಲ್ಲರೂ ಮುನ್ನಡೆಯುವುದು ನಮ್ಮೆಲ್ಲರ ಕರ್ತವ್ಯ ಎಂದರು. ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ., ಉಪಾಧ್ಯಕ್ಷೆ ಬಿ.ಪಿ. ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸುದೀಪ್‌ಕುಮಾರ್, ಪೌರಾಯುಕ್ತ ಎಚ್.ಎಂ. ಮನುಕುಮಾರ್, ಸದಸ್ಯರಾದ ಬಸವರಾಜ್ ಆನೇಕೊಪ್ಪ, ಮಣಿ ಎಎನ್‌ಎಸ್, ಚನ್ನಪ್ಪ, ಕಾಂತರಾಜ್, ಸೈಯ್ಯದ್ ರಿಯಾಜ್, ಲತಾ ಚಂದ್ರಶೇಖರ್, ಶಶಿಕಲಾ ನಾರಾಯಣಪ್ಪ, ಮಂಜುಳ ಸುಬ್ಬಣ್ಣ, ಪೊಲೀಸ್ ಉಪಾಧೀಕ್ಷಕ ಕೆ.ಆರ್. ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಬಸಪ್ಪ ಇನ್ನಿತರರು ಉಪಸ್ಥಿತರಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ. ನಾಗೇಂದ್ರಪ್ಪ ಸ್ವಾಗತಿಸಿದರು. ಅಪೇಕ್ಷ ಮಂಜುನಾಥ್ ನಿರೂಪಿಸಿ, ವಂದಿಸಿದರು. ಇದಕ್ಕೂ ಮೊದಲು ನಗರದ ಬಿ.ಎಚ್. ರಸ್ತೆಯ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಕನಕ ಮಂಟಪ ಮೈದಾನದವರಿಗೂ ತಾಯಿ ಭುವನೇಶ್ವರಿ ದೇವಿ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಿತು. - - - -ಡಿ೧-ಬಿಡಿವಿಟಿ: ಕನ್ನಡ ರಾಜ್ಯೋತ್ಸವದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್ ನಾಡಧ್ವಜಾರೋಹಣ ನೆರವೇರಿಸಿ, ವೇದಿಕೆ ಕಾರ್ಯಕ್ರಮ ಉದ್ಘಾಟಿಸಿದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ