ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ

KannadaprabhaNewsNetwork |  
Published : Nov 04, 2026, 12:45 AM IST
3ಚ್ಎಸ್ಎನ್3 : ಕನ್ನಡ ಭಾಷೆ, ಸಂಸ್ಕೃತಿ ಹಾಗೂ ನಾಡಿನ ಹಿತಕ್ಕಾಗಿ ನಿರಂತರ ಹೋರಾಟ ನಡೆಸುತ್ತಿರುವ ತೀರ್ಥಂಕರ್ ಅವರ ಸೇವೆ ಗುರುತಿಸಿ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ತೀರ್ಥಂಕರ್, ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಸೇವೆಗೆ ಮುಂದಿನ ದಿನಗಳಲ್ಲಿಯೂ ನನ್ನಿಂದಾದ ಕೊಡುಗೆ ನೀಡುತ್ತೇನೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಬೇಲೂರು

ಕನ್ನಡ ಭಾಷೆ, ನೆಲ, ಜಲ ಹಾಗೂ ನಾಡಿನ ಸಂಸ್ಕೃತಿಯ ಉಳಿವಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕನ್ನಡಪರ ಹೋರಾಟಗಾರರನ್ನು ಗುರುತಿಸಿ ಗೌರವಿಸಬೇಕು ಎಂದು ಮೌಂಟ್ ಕಾರ್ಮೆಲ್ ಶಾಲೆಯ ಫಾದರ್ ಜೋಸೆಫ್ ಪಿಂಟೋ ಹೇಳಿದರು.

ಪಟ್ಟಣದ ಜೆ.ಪಿ. ನಗರದಲ್ಲಿರುವ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಕನ್ನಡಪರ ಹೋರಾಟಗಾರ ಬಿ.ಆರ್. ತೀರ್ಥಂಕರ್ ಅವರನ್ನು

ಸನ್ಮಾನಿಸಿ ಮಾತನಾಡಿ, ಪ್ರತಿ ವರ್ಷ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ನಾಡು, ನುಡಿ, ಭಾಷೆ ಮತ್ತು ಸಂಸ್ಕೃತಿಯ ಸೇವೆಗೆ ತಮ್ಮನ್ನು ತಾವು ಸಮರ್ಪಿಸಿಕೊಂಡಿರುವ ಮಹನೀಯರನ್ನು ಗುರುತಿಸಿ ನಮ್ಮ ಶಾಲೆಯಲ್ಲಿ ಸನ್ಮಾನಿಸುವುದು ವಾಡಿಕೆಯಾಗಿದೆ. ಈ ಬಾರಿ ಕನ್ನಡಪರ ಹೋರಾಟಗಾರ ಹಾಗೂ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ತೀರ್ಥಂಕರ್ ಅವರನ್ನು ಗೌರವಿಸುತ್ತಿರುವುದು ನಮಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ತಿಳಿಸಿದರು.

ತೀರ್ಥಂಕರ್ ಅವರು ಬಾಲ್ಯದಿಂದಲೇ ಕನ್ನಡ ಭಾಷೆ, ನೆಲ, ಜಲ ಹಾಗೂ ನಾಡಿನ ವಿವಿಧ ಸಮಸ್ಯೆಗಳ ಕುರಿತು ಹೋರಾಟದ ಮನೋಭಾವ ಬೆಳೆಸಿಕೊಂಡು ಬಂದಿದ್ದಾರೆ. ಬೇಲೂರಿನ ವಾಟಾಳ್ ಎಂದೇ ಜನಪ್ರಿಯರಾಗಿರುವ ಅವರು ಪಟ್ಟಣದಲ್ಲಿ ಯಾವುದೇ ಕನ್ನಡಪರ ಕಾರ್ಯಕ್ರಮ, ಸಾರ್ವಜನಿಕ ಹೋರಾಟ ಅಥವಾ ನಾಡು- ನುಡಿಗೆ ಸಂಬಂಧಿಸಿದ ಚಟುವಟಿಕೆಗಳು ನಡೆದರೂ ಮುಂಚೂಣಿಯಲ್ಲಿ ನಿಂತು ಸಕ್ರಿಯವಾಗಿ ಭಾಗವಹಿಸುತ್ತಾರೆ. ತಮ್ಮ ನಿರಂತರ ಹೋರಾಟ ಹಾಗೂ ಕ್ರಿಯಾಶೀಲತೆಯ ಮೂಲಕ ಕಾರ್ಯಕ್ರಮಗಳಿಗೆ ಮತ್ತು ಹೋರಾಟಗಳಿಗೆ ಹೆಚ್ಚಿನ ಬಲ ತುಂಬುವ ಕೆಲಸ ಮಾಡುತ್ತಿದ್ದಾರೆ. ಇಂತಹ ಕನ್ನಡಾಭಿಮಾನಿಗಳನ್ನು ಗುರುತಿಸಿ ಗೌರವಿಸುವುದು ನಮ್ಮೆಲ್ಲರಿಗೂ ಸಂತೋಷದ ವಿಚಾರವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ತೀರ್ಥಂಕರ್, ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಸೇವೆಗೆ ಮುಂದಿನ ದಿನಗಳಲ್ಲಿಯೂ ನನ್ನಿಂದಾದ ಕೊಡುಗೆ ನೀಡುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಫಾದರ್ ಅಂತೋನ್ ಸೋಜ್, ಅಧ್ಯಾಪಕಿ ಗೀತಾ, ಶಾಲೆಯ ಉಪನ್ಯಾಸಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌