ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ ಮುಖ್ಯ ರಸ್ತೆ, ನಂದಿನಿ ವೃತ್ತದ ಶ್ರೀ ವಿಶ್ವ ವಿನಾಯಕ ಆಟೋ ನಿಲ್ದಾಣದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಲಾಯಿತು. ನಾಡ ಧ್ವಜಾರೋಹಣ ನೆರವೇರಿಸಿ ತಾಯಿ ಭುವನೇಶ್ವರಿ ಮಾತೆಗೆ ಪುಷ್ಪ ನಮನ ಸಲ್ಲಿಸಲಾಯಿತು. ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು. ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪ, ಮಾಜಿ ಸದಸ್ಯ ಶರವಣ, ಸ್ಥಳೀಯ ಪ್ರಮುಖರು, ಆಟೋ ಚಾಲಕರು, ಮಾಲೀಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.