ಆಟೋ ಚಾಲಕರ ಸಂಘದ ಉಪಾಧ್ಯಕ್ಷ ನಾಸಿರ್ ಖಾನ್ ಮಾತನಾಡಿ, ಆಟೋ ಚಾಲಕರು, ಮಾಲೀಕರು, ಕನ್ನಡಾಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸಂಘದ ಕಾರ್ಯದರ್ಶಿ ಪುಟ್ಟರಾಜು ಮಾತನಾಡಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಸಾರುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆಹ್ವಾನ ನೀಡಿದರು.
ಕನ್ನಡಪ್ರಭ ವಾರ್ತೆ ಸಕಲೇಶಪುರಮಲೆನಾಡು ಆಟೋ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ನವೆಂಬರ್ 29ರಂದು ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಯೋಗೇಶ್ ಕಲ್ಗಣೆ ತಿಳಿಸಿದರು.ಪಟ್ಟಣದ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ನಾಡು, ನುಡಿ ಹಾಗೂ ಭಾಷೆಯ ಅಭಿಮಾನವನ್ನು ಸಾರುವ ಉದ್ದೇಶದಿಂದ ಸಂಘದ ವತಿಯಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಬಾರಿಯೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಆಟೋ ಚಾಲಕರು ಮತ್ತು ಮಾಲೀಕರು ಕುಟುಂಬ ಸಮೇತರಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಅಂದು ಬೆಳಿಗ್ಗೆ 10.30ಕ್ಕೆ ಪುರಸಭೆ ಮುಂಭಾಗದ ಆಟೋ ನಿಲ್ದಾಣದಲ್ಲಿ ಧ್ವಜಾರೋಹಣ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಸಾರ್ವಜನಿಕ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಸಂಜೆ 4 ಗಂಟೆಗೆ ಶ್ರೀ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ಹಳೆ ಬಸ್ ನಿಲ್ದಾಣದವರೆಗೆ ಆಟೋಗಳ ಭವ್ಯ ಮೆರವಣಿಗೆ ನಡೆಯಲಿದೆ. ಸಂಜೆ 5 ಗಂಟೆಗೆ ಸಭಾ ಕಾರ್ಯಕ್ರಮ ಹಾಗೂ ರಾತ್ರಿ 7.30ರಿಂದ ಸಾಂಸ್ಕೃತಿಕ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿವರಿಸಿದರು.ಸಂಘದ ಉಪಾಧ್ಯಕ್ಷ ನಾಸಿರ್ ಖಾನ್ ಮಾತನಾಡಿ, ಆಟೋ ಚಾಲಕರು, ಮಾಲೀಕರು, ಕನ್ನಡಾಭಿಮಾನಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸಂಘದ ಕಾರ್ಯದರ್ಶಿ ಪುಟ್ಟರಾಜು ಮಾತನಾಡಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಸಾರುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆಹ್ವಾನ ನೀಡಿದರು.
ಸಭಾ ವೇದಿಕೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲು ಉದ್ದೇಶಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಗೌರವಾಧ್ಯಕ್ಷ ಲಿಯಾಖತ್ ಅಲಿ ಖಾನ್, ಸದಸ್ಯರಾದ ಅಜಾಯುಲ್ ಹಾಗೂ ಸೈಯದ್ ಪೈರೋಜ್ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.