ಕುಂಭೇನಹಳ್ಳಿ ಗ್ರಾಮದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

KannadaprabhaNewsNetwork |  
Published : Nov 18, 2026, 01:45 AM IST
15ಎಚ್ಎಸ್ಎನ್16 :  | Kannada Prabha

ಸಾರಾಂಶ

ಕಳೆದ ೩೫ ವರ್ಷಗಳಿಂದ ನಿರಂತರವಾಗಿ ಗ್ರಾಮದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿರುವುದು ವಿಶೇಷ. ತಾಲೂಕಿನಲ್ಲಿ ಕಾಂತರಾಜಪುರ ಗ್ರಾಮವನ್ನು ಹೊರತುಪಡಿಸಿದರೆ, ಕುಂಭೇನಹಳ್ಳಿ ಗ್ರಾಮದಲ್ಲಿ ಕಳೆದ ೩೫ ವರ್ಷಗಳಿಂದ ಗ್ರಾಮಸ್ಥರೆಲ್ಲ ಸೇರಿ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿರುವುದು ಗ್ರಾಮದ ಕನ್ನಡಾಭಿಮಾನಕ್ಕೆ ಸಾಕ್ಷಿ.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಕನ್ನಡ ನಾಡು ಉದಯವಾಗಿ 71 ವಸಂತಗಳನ್ನು ಪೂರೈಸಿರುವ ಅಂಗವಾಗಿ ಕನ್ನಡ ಭಾಷೆ, ನಾಡು-ನುಡಿ ಮತ್ತು ಸಂಸ್ಕೃತಿಯ ಮೇಲಿನ ಅಭಿಮಾನವನ್ನು ಮುಂದಿನ ಪೀಳಿಗೆಗೆ ಉಳಿಸುವ ಉದ್ದೇಶದಿಂದ ಗ್ರಾಮಸ್ಥರೆಲ್ಲರೂ ಒಗ್ಗಟ್ಟಿನಿಂದ ಈ ಆಚರಣೆಯನ್ನು ಮುಂದುವರಿಸಿಕೊಂಡು ಬರುತ್ತಿರುವುದು ಶ್ಲಾಘನೀಯ ಎಂದು ಕುಂಭೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ರಾಘು ಕದಂಬ ಹೇಳಿದರು.

ತಾಲೂಕಿನ ಶ್ರವಣಬೆಳಗೊಳ ಹೋಬಳಿ ಕುಂಭೇನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಸಂಜೀವಿನಿ ಆಂಜನೇಯ ಸ್ವಾಮಿ ಓಕುಳಿ ಕಾರ್ಯಕ್ರಮದ ಅಂಗವಾಗಿ ಸಂಪ್ರದಾಯದಂತೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಕಳೆದ ೩೫ ವರ್ಷಗಳಿಂದ ನಿರಂತರವಾಗಿ ಗ್ರಾಮದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿರುವುದು ವಿಶೇಷ. ತಾಲೂಕಿನಲ್ಲಿ ಕಾಂತರಾಜಪುರ ಗ್ರಾಮವನ್ನು ಹೊರತುಪಡಿಸಿದರೆ, ಕುಂಭೇನಹಳ್ಳಿ ಗ್ರಾಮದಲ್ಲಿ ಕಳೆದ ೩೫ ವರ್ಷಗಳಿಂದ ಗ್ರಾಮಸ್ಥರೆಲ್ಲ ಸೇರಿ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿರುವುದು ಗ್ರಾಮದ ಕನ್ನಡಾಭಿಮಾನಕ್ಕೆ ಸಾಕ್ಷಿ ಎಂದು ಹೇಳಿದರು.

ಗ್ರಾಮದ ನಿವೃತ್ತ ಶಿಕ್ಷಕ ದೇವರಾಜ್ ಹಾಗೂ ಇತ್ತೀಚೆಗೆ ಸೇವೆಯಿಂದ ನಿವೃತ್ತರಾದ ಮಾಯಣ್ಣ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಇಬ್ಬರಿಗೂ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖಂಡರು, ಗ್ರಾಮಸ್ಥರು, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರಾಜಕತೆ ಅಳಿಸಿ, ಪ್ರಜಾಪ್ರಭುತ್ವ ಉಳಿಸಿ ಬೃಹತ್‌ ಜಾಥಾ
ಜಿಪಂ-ತಾಪಂ ಚುನಾವಣೆಯತ್ತ ರಾಜಕೀಯ ಪಕ್ಷಗಳ ಚಿತ್ತ