- ಜಿಲ್ಲಾ ಕ್ರೀಡಾಂಗಣದಲ್ಲಿ ಕಾರ್ಯಕ್ರಮ: ಸಚಿವ ಎಸ್ಸೆಸ್ಸೆಂ ಭಾಗಿ
- - -ಕನ್ನಡಪ್ರಭ ವಾರ್ತೆ ದಾವಣಗೆರೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 1ರ ಶನಿವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಜ್ಯೋತ್ಸವ ಸಂದೇಶ ನೀಡುವರು.
ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕರಾದ ಕೆ.ಎಸ್. ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ., ಚನ್ನಗಿರಿ ಶಾಸಕ ಬಸವರಾಜು ವಿ. ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್ ಇರುವರು.ಅಲ್ಲದೇ, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಚಿದಾನಂದ ಎಂ. ಗೌಡ, ಡಿ.ಎಸ್. ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಡಾ.ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷರಾದ ಎನ್. ಜಯದೇವ ನಾಯ್ಕ್, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ. ಮಂಜಪ್ಪ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ವಡ್ನಾಳ್ ಜಗದೀಶ್, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಚ್. ಮರಿಯೋಜಿ ರಾವ್, ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಪಂ ಸಿಇಒ ಗಿತ್ತೆ ಮಾದವ್ ವಿಠ್ಠಲರಾವ್ ಉಪಸ್ಥಿತರಿರುವರು.
ಬೆಳಗ್ಗೆ 8 ಗಂಟೆಗೆ ಹೈಸ್ಕೂಲ್ ಮೈದಾನದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಲಾಗುವುದು. ಕಲಾ ತಂಡಗಳೊಂದಿಗೆ ಮೆರವಣಿಗೆಯು ಮಹಾನಗರ ಪಾಲಿಕೆ ಮುಂಭಾಗದಿಂದ ಗಾಂಧಿ ವೃತ್ತ, ಅಶೋಕ ರಸ್ತೆ, ಜಯದೇವ ವೃತ್ತ, ವಿದ್ಯಾರ್ಥಿ ಭವನ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದ ತಲುಪಲಿದೆ. ಸಂಜೆ 5.30ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ವಿವಿಧ ಶಾಲಾ, ಕಾಲೇಜಿನ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.- - -
(ಸಾಂದರ್ಭಿಕ ಚಿತ್ರ)