ನವಲಗುಂದ:
ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಪಟ್ಟಣದ ತಹಸೀಲ್ದಾರ್ ಕಚೇರಿಯ ಆವರಣದಲ್ಲಿ ಶನಿವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕನ್ನಡ ಭಾಷೆ ಕೇವಲ ಒಂದು ಭಾಷೆಯಲ್ಲ ಅದು ನಮ್ಮ ಭಾವನೆ, ಪರಂಪರೆಯ ಮತ್ತು ಇತಿಹಾಸದ ಪ್ರತಿಬಿಂಬವಾಗಿದೆ. ನಾವು ಕನ್ನಡಿಗರು ಎಂದೆಂದಿಗೂ ನಮ್ಮ ಭಾಷೆಯನ್ನು ಗೌರವಿಸಬೇಕು, ಅದನ್ನು ಉಳಿಸಬೇಕು ಮತ್ತು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದರು.ಇದೇ ವೇಳೆ ಪುರಸಭೆಯಿಂದ ನಿರ್ಮಿಸಿದ ಡಾ. ಬಾಬು ಜಗಜೀವನರಾಂ ಸಮುದಾಯ ಭವನ ಲೋಕಾರ್ಪಣೆಗೊಳಿಸಲಾಯಿತು.
ಈ ವೇಳೆ ತಹಸೀಲ್ದಾರ್ ಸುಧೀರ ಸಾಹುಕಾರ, ತಾಪಂ ಇಒ ಭಾಗ್ಯಶ್ರೀ ಜಹಗೀರದಾರ, ಸಿಪಿಐ ರವಿಕುಮಾರ ಕಪ್ಪತ್ತನವರ, ಪಶು ವೈದ್ಯಾಧಿಕಾರಿ ಡಾ. ಮನೋಹರ ದ್ಯಾಬೇರಿ, ಪುರಸಭೆ ಮುಖ್ಯಾಧಿಕಾರಿ ಶರಣು ಪೂಜಾರ, ಶಿವಾನಂದ ತಡಸಿ, ಫರೀದಾಬೇಗಂ ಬಬರ್ಚಿ, ಜನಾರ್ದನ ಭಟ್ರಳ್ಳಿ, ರವೀಂದ್ರಗೌಡ ಪಾಟೀಲ್ ಸೇರಿದಂತೆ ಕನ್ನಡಪರ ಸಂಘಟನೆ ಪದಾಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.