ನ.22ಕ್ಕೆ ಕನ್ನಡ ರಾಜ್ಯೋತ್ಸವ: ಸತೀಶ್‌ ಜವರೇಗೌಡಗೆ ಅಭಿನಂದನೆ

KannadaprabhaNewsNetwork |  
Published : Nov 17, 2026, 01:30 AM IST
ಚಂದ್ರಶೇಖರ್‌ ದ.ಕೋ.ಹಳ್ಳಿ | Kannada Prabha

ಸಾರಾಂಶ

ಕನ್ನಿಕಾ ಶಿಲ್ಪ ನವೋದಯ ಎಜುಕೇಶನ್ ಟ್ರಸ್ಟ್ ಹಾಗೂ ಮಂಗಲ ಟಿ.ತಿಮ್ಮೇಗೌಡ ಪ್ರತಿಷ್ಠಾನದ ಆಶ್ರಯದಲ್ಲಿ ನ.22ರಂದು ಸಂಜೆ 4 ಗಂಟೆಗೆ ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರೇಗೌಡ ಶತಮಾನೋತ್ಸವ ಭವನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕವಿ ಸಜಗೌ ಅಭಿನಂದನೆ, ಪ್ರಶಸ್ತಿ ಪ್ರದಾನ ಹಾಗೂ ಕವಿಗೋಷ್ಠಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಕನ್ನಿಕಾ ಶಿಲ್ಪ ನವೋದಯ ಎಜುಕೇಶನ್ ಟ್ರಸ್ಟ್ ಹಾಗೂ ಮಂಗಲ ಟಿ.ತಿಮ್ಮೇಗೌಡ ಪ್ರತಿಷ್ಠಾನದ ಆಶ್ರಯದಲ್ಲಿ ನ.22ರಂದು ಸಂಜೆ 4 ಗಂಟೆಗೆ ನಗರದ ಕರ್ನಾಟಕ ಸಂಘದ ಕೆ.ವಿ.ಶಂಕರೇಗೌಡ ಶತಮಾನೋತ್ಸವ ಭವನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕವಿ ಸಜಗೌ ಅಭಿನಂದನೆ, ಪ್ರಶಸ್ತಿ ಪ್ರದಾನ ಹಾಗೂ ಕವಿಗೋಷ್ಠಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಸಮಾರಂಭದ ಉದ್ಘಾಟನೆಯನ್ನು ‘ಕನ್ನಡಪ್ರಭ’ ದಿನಪತ್ರಿಕೆಯ ಸಂಪಾದಕ ಹಾಗೂ ಖ್ಯಾತ ಸಾಹಿತಿ ಜೋಗಿ (ಗಿರೀಶ್ ರಾವ್ ಹತ್ವಾರ್) ನೆರವೇರಿಸಲಿದ್ದಾರೆ.

​ಖ್ಯಾತ ಸಾಹಿತಿ ಡಾ.ಸತ್ಯಮಂಗಲ ಮಹಾದೇವ ಅವರು ಅಧ್ಯಕ್ಷತೆ ವಹಿಸುವರು. ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕಿ ಡಾ. ಎನ್.ಕೆ ಲೋಲಾಕ್ಷಿ ಅವರು ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡುವರು.

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಮಟ್ಟದ ಪ್ರತಿಷ್ಠಿತ ‘ಶ್ರೀವಿಜಯ ಸಾಹಿತ್ಯ ದತ್ತಿ ಪ್ರಶಸ್ತಿ’ ಪುರಸ್ಕೃತರಾದ ಸಾಹಿತಿ ಟಿ. ಸತೀಶ್ ಜವರೇಗೌಡ ಅವರನ್ನು ಸನ್ಮಾನಿಸಲಾಗುವುದು.

ಮುಖ್ಯ ಅತಿಥಿಗಳಾಗಿ ಮಂಗಲ ಟಿ. ತಿಮ್ಮೇಗೌಡ ಪ್ರತಿಷ್ಠಾನದ ಅಧ್ಯಕ್ಷ ಎ.ಸಿ. ರಮೇಶ್ ಹಾಗೂ ಕನ್ನಿಕಾ ಶಿಲ್ಪ ನವೋದಯ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಹೆಚ್.ಬಿ. ರಾಮಕೃಷ್ಣ ಉಪಸ್ಥಿತರಿರುವರು.

ಕುವೆಂಪು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು:

​ಉದಯವಾಣಿ ದಿನಪತ್ರಿಕೆಯ ಜಿಲ್ಲಾ ವರದಿಗಾರ ಎಚ್. ಶಿವರಾಜು (ಮಾಧ್ಯಮ ಕ್ಷೇತ್ರ), ಮಳವಳ್ಳಿ ತಾಲೂಕಿನ ಹಂಚೀಪುರ ಗ್ರಾಮದ ಸಾವಯವ ಕೃಷಿಕ​ ಎಚ್.ವಿ.ನಾಗರಾಜು (ಕೃಷಿ ಕ್ಷೇತ್ರ), ಮಂಡ್ಯ ತಾಲೂಕಿನ ಸಂತೆಕಸಲಗೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಶಿಕ್ಷಣ ಕ್ಷೇತ್ರ)ಗೆ ಕುವೆಂಪು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು.

ಸಾಹಿತ್ಯ ಮತ್ತು ಪುಸ್ತಕ ಪ್ರಶಸ್ತಿ:

ಕವಯತ್ರಿ ​ಡಾ.ಪಿ.ಸುಮಾರಾಣಿ ಶಂಭು ಅವರಿಗೆ ‘ಕನ್ನಿಕಾಶಿಲ್ಪ ಸಾಹಿತ್ಯ ಪ್ರಶಸ್ತಿ’ ಹಾಗೂ ಲೇಖಕ ​ಚಂದ್ರಶೇಖರ ದ.ಕೋ.ಹಳ್ಳಿ ಅವರಿಗೆ ‘ಕನ್ನಿಕಾಶಿಲ್ಪ ಪುಸ್ತಕ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಈ ಎಲ್ಲಾ ಪ್ರಶಸ್ತಿಗಳು ತಲಾ ಐದು ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕವನ್ನು ಹೊಂದಿದೆ ಎಂದು ಟ್ರಸ್ಟಿನ ತರಬೇತಿ ಕೇಂದ್ರದ ಕಾರ್ಯದರ್ಶಿ ಎಚ್‌.ಆರ್.ಕನ್ನಿಕಾ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಸಿ, ಎಸ್‌ಟಿ ಅನುದಾನ ದುರ್ಬಳಕೆ ವಿರೋಧಿಸಿ ಪ್ರತಿಭಟನೆ
ಖಾಸಗಿಯವರಿಗೆ ಬಿಸಿಯೂಟ ಜವಾಬ್ದಾರಿ ವಿರೋಧಿಸಿ ಪ್ರತಿಭಟನೆ