ಕುಶಾಲನಗರ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ

KannadaprabhaNewsNetwork |  
Published : Nov 24, 2024, 01:47 AM IST
ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ | Kannada Prabha

ಸಾರಾಂಶ

ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರಕುಶಾಲನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಶನಿವಾರ ಚಾಲನೆ ನೀಡಲಾಯಿತು. ಸ್ಥಳೀಯ ಸರ್ಕಾರಿ ಬಸ್ ನಿಲ್ದಾಣ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮವನ್ನು ಕುಶಾಲನಗರ ಪುರಸಭೆ ಅಧ್ಯಕ್ಷ ಜಯಲಕ್ಷ್ಮೀ ಚಂದ್ರು ಉದ್ಘಾಟಿದರು.

ಸಂಘದ ಕಟ್ಟಡ ನಿವೇಶನದ ದಾನಿಗಳಾದ ಜಯಶ್ರೀ ನಾಗೇಶ್, ಕನ್ನಡ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಆಟೋ ಚಾಲಕ ಮತ್ತು ಮಾಲೀಕರ ಸಂಘ ಅಧ್ಯಕ್ಷ ಕೃಷ್ಣ ದರ್ಶನ್ ಅಧ್ಯಕ್ಷತೆ ವಹಿಸಿದ್ದರು.

ಕನ್ನಡ ಸಾಹಿತ್ಯ ಪರಿಷತ್ ಕುಶಾಲನಗರ ತಾಲೂಕು ಅಧ್ಯಕ್ಷ ಕೆ.ಎಸ್. ನಾಗೇಶ್, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪಿ.ಎಂ. ರುಕ್ಮಿಣಿ, ಸಂಘ ಉಪಾಧ್ಯಕ್ಷ ದೇವರಾಜ್, ಗಣೇಶ್, ಮಹಾದೇವ್ ಗೌಡ, ಪ್ರಧಾನ ಕಾರ್ಯದರ್ಶಿ ಎಂ.ಎಸ್. ಸಂತೋಷ್ ಕುಮಾರ್ ಗೌಡ, ಕಾರ್ಯದರ್ಶಿ ಎಲ್.ಎ. ಪ್ರಸನ್ನ, ಖಜಾಂಚಿ ಎಂ.ಬಿ. ಮುನೀರ್, ಮಾಜಿ ಖಜಾಂಚಿ ಜಿ.ರಮೇಶ್, ಮಾಜಿ ಕಾರ್ಯದರ್ಶಿ ಪಿ.ಮಂಜು, ಕಾಯಂ ಆಹ್ವಾನಿತರಾದ ವಿ.ಎನ್. ತೇಜಸ್, ಪತ್ರಕರ್ತರಾದ ಎಂ.ಎನ್. ಚಂದ್ರಮೋಹನ್, ರಘುಕೋಟಿ, ಟಿ.ಆರ್. ಪ್ರಭುದೇವ್, ಶಿವರಾಜ್ ಮತ್ತು ಸಂಘದ ನಿರ್ದೇಶಕರು, ಪದಾಧಿಕಾರಿಗಳು ಇದ್ದರು.ಸಂಘದ ಮಾಜಿ ಕಾರ್ಯದರ್ಶಿ ಕೆ.ಸಿ. ದಿನೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಣೆ ಮಾಡಿದರು.ಸಂಘದ ಆಶ್ರಯದಲ್ಲಿ ಹಿಲ್ ಬ್ಲೂಮ್ ಆಸ್ಪತ್ರೆ ಸಹಯೋಗದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.ಡಾ.ನವೀದ್ ಮತ್ತು ಡಾ.ಮನೋಜ್ ಅವರ ನೇತೃತ್ವದಲ್ಲಿ ವೈದ್ಯಕೀಯ ಸಿಬ್ಬಂದಿ ಸಾರ್ವಜನಿಕರಿಗೆ ರಕ್ತ ಪರೀಕ್ಷೆ, ರಕ್ತದೊತ್ತಡ, ಇಸಿಜಿ ಮತ್ತಿತರ ಪರೀಕ್ಷೆಗಳನ್ನ ನಡೆಸಿಕೊಟ್ಟರು.ಮಧ್ಯಾಹ್ನ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸಮೂಹ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿತ್ತು. ನಂತರ ಡ್ಯಾನ್ಸ್ ಡ್ಯಾನ್ಸ್ ಕಾರ್ಯಕ್ರಮ ನಡೆಯಿತು.ಇಂದಿನ ಕಾರ್ಯಕ್ರಮ

ಭಾನುವಾರ ಕನ್ನಡಾಂಬೆಯ ಮೆರವಣಿಗೆ ಹಾಗೂ ಆಟೋ ಚಾಲಕರಿಗೆ ಆಟೋ ಅಲಂಕಾರ ಸ್ಪರ್ಧೆ ಏರ್ಪಡಿಸಲಾಗಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ ಕಾರ್ಯಕ್ರಮ ಹಾಗೂ ಸಂಜೆ 5 ಗಂಟೆಗೆ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ಅಧ್ಯಕ್ಷ ಕೃಷ್ಣ ದರ್ಶನ್ ತಿಳಿಸಿದ್ದಾರೆ.

PREV

Recommended Stories

ಸಹಕಾರಿ ತತ್ವದಿಂದ ಕಟ್ಟಕಡೆ ವ್ಯಕ್ತಿಗೂ ಸಹಾಯ
ವೀರಶೈವ ಲಿಂಗಾಯತರಲ್ಲಿ ಸಮಾಜ ಒಗ್ಗಟ್ಟು ಮುಖ್ಯ