ಕರ್ನಾಟಕ ಏಕೀಕರಣದ ಚಳುವಳಿಗೆ ತುಳುವರ ಕೊಡುಗೆ: ತಾರಾನಾಥ ಗಟ್ಟಿ

KannadaprabhaNewsNetwork |  
Published : Mar 29, 2026, 02:45 AM IST
ತಾರಾನಾಥ ಗಟ್ಟಿ ಕಾಪಿಕಾಡ್  ಮಾತನಾಡುತ್ತಿರುವುದು | Kannada Prabha

ಸಾರಾಂಶ

ಬಿಸಿ ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯುತ್ತಿರುವ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಭಾಷಾ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಿವಿಧ ಅಕಾಡೆಮಿಗಳ ಅಧ್ಯಕ್ಷರ ವಿಚಾರಮಂಡನೆ ಕಾರ್ಯಕ್ರಮ ನಡೆಯಿತು.

ಬಂಟ್ವಾಳ: ಬಿಸಿ ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯುತ್ತಿರುವ ದಕ್ಷಿಣ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಭಾಷಾ ಸಾಮರಸ್ಯವನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಿವಿಧ ಅಕಾಡೆಮಿಗಳ ಅಧ್ಯಕ್ಷರ ವಿಚಾರಮಂಡನೆ ಕಾರ್ಯಕ್ರಮ ನಡೆಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಕರಾವಳಿಯಲ್ಲಿ ಕನ್ನಡದ ಜೊತೆಗೆ ಭಾಷಾ ಬಾಂಧವ್ಯವನ್ನು ಬೆಸೆಯುವಲ್ಲಿ ತುಳುವರ ಕೊಡುಗೆ ಅಪಾರ. ಕರ್ನಾಟಕ ಏಕೀಕರಣದ ಚಳುವಳಿಗೂ ತುಳುವರ ಕೊಡುಗೆ ಮಹತ್ತರವಾಗಿದೆ ಎಂದರು. ಸಮ್ಮೇಳನಾಧ್ಯಕ್ಷ ಚಿದಂಬರ ಬೈಕಂಪಾಡಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್ ಮಾತನಾಡಿ, ಕೊಂಕಣಿ ಭಾಷೆಯನ್ನು ಹಿಂದೂ, ಮುಸ್ಲಿಂ ಹಾಗೂ ಕ್ರಿಶ್ಚಿಯನ್ನರು ಬಳಸುತ್ತಿದ್ದು, ಕೊಂಕಣಿ ಭಾಷಿಗರೇ ಸೌಹಾರ್ದತೆಯ ಸಂಕೇತ ಎಂದರು.ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು. ಹೆಚ್ ಮಾತನಾಡಿ, ಬ್ಯಾರಿ ಸಾಹಿತ್ಯ ಅಕಾಡೆಮಿಯ ಸ್ಥಾಪನೆಯಲ್ಲಿಯೂ ಅನೇಕ ಕನ್ನಡಿಗರ, ತುಳುವರ ಶಿಫಾರಸ್ಸುಗಳೂ ಇದೆ. ಅನೇಕ ಬ್ಯಾರಿ ಸಮುದಾಯದವರೂ ಕನ್ನಡದ ಸೇವೆಗೆ ಅಹರ್ನಿಶಿ ದುಡಿದಿದ್ದಾರೆ ಎಂದರುಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸದಸ್ಯ ಚಂದ್ರಶೇಖರ ಪೇರಾಲು ಮಾತನಾಡಿ, ಅರೆಭಾಷೆಯ ಅಕಾಡೆಮಿ ಸ್ಥಾಪನೆಯಾದ ಬಳಿಕ ಅರೆಭಾಷಿಕರಿಗೆ ಹೊಸ ಚೈತನ್ಯ ಬಂದಿದೆ ಎಂದರು. ಸುಳ್ಯ ಭಾಗದಲ್ಲಿ ಎಲ್ಲ ಸಮುದಾಯದವರೂ ಅರೆ ಭಾಷೆಯನ್ನು ನಿರರ್ಗಳವಾಗಿ ಮಾತನಾಡಬಲ್ಲರು ಎಂದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಸಮನ್ವಯಕಾರರಾಗಿ ಭಾಗವಹಿಸಿದ್ದರು, ಸಮ್ಮೇಳನ ಸ್ವಾಗತ ಸಮಿತಿ ಕೋಶಾಧ್ಯಕ್ಷ ಸುಭಾಶ್ಚಂದ್ರ ಜೈನ್, ಪುತ್ತೂರು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಉಪಸ್ಥಿತರಿದ್ದರು.ಬಂಟ್ವಾಳ ತಾ.ಕಸಾಪ ಗೌರವ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂ ಎನ್ನುವುದು ಜೀವನ ಸ್ವಭಾವ, ಆಚರಣೆಯಲ್ಲ
ಬಂಟ್ವಾಳ ಶಾಸಕರು ಮಂಡಿಸಿದ ಹಕ್ಕುಚ್ಯುತಿಯಿಂದ ನೋವಾಗಿದೆ: ರಮಾನಾಥ ರೈ