ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಸಹಯೋಗದಲ್ಲಿ ಮಂಗಳವಾರ ಕಾರುಗುಂದ ಗೌಡ ಸಮಾಜದಲ್ಲಿ 112ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನ ಆಚರಿಸಲಾಯಿತು.
ಕನ್ನಡಪ್ರಭವಾರ್ತೆ ನಾಪೋಕ್ಲು
ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಗೌಡ ಮಹಿಳಾ ಒಕ್ಕೂಟ ಚೇರಂಬಾಣೆ ಸಹಯೋಗದಲ್ಲಿ ಮಂಗಳವಾರ ಕಾರುಗುಂದ ಗೌಡ ಸಮಾಜದಲ್ಲಿ 112ನೇ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನ ಆಚರಿಸಲಾಯಿತು. ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ ಕಾರ್ಯಕ್ರಮವನ್ನು ಕಾರುಗುಂದ ಗೌಡ ಸಮಾಜದ ಅಧ್ಯಕ್ಷ ಕೊಡಪಾಲು ಗಣಪತಿ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ಆನೇರ ಜಾನಕಿ ಮೋಹನ್ ಸಂಸ್ಥಾಪನ ದಿನದ ಕುರಿತು ಉಪನ್ಯಾಸ ನೀಡಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವದ ಪ್ರಯೋಜನಗಳ ಬಗ್ಗೆ ವಿವರ ನೀಡಿದರು. ಕರ್ನಾಟಕ ಮಾತ್ರವಲ್ಲದೆ ಹೊರರಾಜ್ಯ ಹೊರದೇಶಗಳಲ್ಲೂ ಕೂಡ ಕನ್ನಡ ಸಂಘಗಳನ್ನು ಕಟ್ಟಿಕೊಂಡು ಕನ್ನಡದ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಎಂದರು. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಲವಾರು ಶ್ರೇಷ್ಠ ದತ್ತಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು ಅತ್ಯುನ್ನತ ನೃಪತುಂಗ ಪ್ರಶಸ್ತಿಯನ್ನು ಕೊಡುತ್ತಿರುವುದು ಕನ್ನಡ ಸಾಹಿತ್ಯ ಪರಿಷತ್ತಿನ ಮತ್ತೊಂದು ಹಿರಿಮೆ ಎಂದರು. ಅತಿಥಿಗಳಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಈರಮಂಡ ಹರಿಣಿ ವಿಜಯ್, ಕಾರುಗುಂದ ಗೌಡ ಯುವ ವೇದಿಕೆಯ ಅಧ್ಯಕ್ಷರಾದ ಪ್ರದೀಪ್ ಪಾರೆಮಜಲು ಬೈಮನ ಜ್ಯೋತಿ ತಿಮ್ಮಯ್ಯ, ಸೇರಿದಂತೆ ಪರಿಷತ್ತಿನ ಪದಾಧಿಕಾರಿಗಳು ಒಕ್ಕೂಟದ ಪದಾಧಿಕಾರಿಗಳು, ಕನ್ನಡ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.