ಪರಿಸರ ಪ್ರಜ್ಞೆ ಮೂಡಿಸುತ್ತಿರುವ ಕನ್ನಡಪ್ರಭ

KannadaprabhaNewsNetwork |  
Published : Dec 13, 2025, 02:00 AM IST
ಕನ್ನಡಪ್ರಭ ವಿದ್ಯಾರ್ಥಿಗಳಿಗೆ ಪರಿಸರ ಪ್ರಜ್ಞೆ ಮೂಡಿಸಲು ರಾಜ್ಯಾದ್ಯಂತ ಚಿತ್ರಕಲಾ ಸ್ಪರ್ಧೆ | Kannada Prabha

ಸಾರಾಂಶ

ಕನ್ನಡಪ್ರಭ ವಿದ್ಯಾರ್ಥಿಗಳಿಗೆ ಪರಿಸರ ಪ್ರಜ್ಞೆ ಮೂಡಿಸಲು ರಾಜ್ಯಾದ್ಯಂತ ಚಿತ್ರಕಲಾ ಸ್ಪರ್ಧೆ ಆಯೋಜಿಸುತ್ತಿದೆ ಎಂದು ಶಾಸಕ ಎಂ.ಆರ್‌. ಮಂಜುನಾಥ್ ತಿಳಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಕನ್ನಡಪ್ರಭ ವಿದ್ಯಾರ್ಥಿಗಳಿಗೆ ಪರಿಸರ ಪ್ರಜ್ಞೆ ಮೂಡಿಸಲು ರಾಜ್ಯಾದ್ಯಂತ ಚಿತ್ರಕಲಾ ಸ್ಪರ್ಧೆ ಆಯೋಜಿಸುತ್ತಿದೆ ಎಂದು ಶಾಸಕ ಎಂ.ಆರ್‌. ಮಂಜುನಾಥ್ ತಿಳಿಸಿದರು.

ಪಟ್ಟಣದ ಪಿಎಂ ಶ್ರೀ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಅರಣ್ಯ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಮಕ್ಕಳಲ್ಲಿ ಅವರದೇ ಆದಂತಹ ಪ್ರತಿಭೆಗಳು ಅಡಗಿರುತ್ತದೆ. ಇಂತಹ ಪ್ರತಿಭೆಗಳು ಅನಾವರಣವಾಗಲಿಕ್ಕೆ ಚಿತ್ರಕಲೆಯಂತಹ ಸ್ಪರ್ಧೆ ತುಂಬಾ ಅವಶ್ಯಕತೆಯಾಗಿದೆ. ಇದರಿಂದ ಮಕ್ಕಳಲ್ಲಿ ಏಕಾಗ್ರತೆ ಹೆಚ್ಚುವ ಮೂಲಕ ಆಸಕ್ತಿ ಹೆಚ್ಚುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ನಮ್ಮ ಪಾತ್ರ ಏನು ಎಂಬುದನ್ನು ಸಹ ಅರಿತುಕೊಳ್ಳಬಹುದು. ಹಾಗಾಗಿ ನಮ್ಮ ತಾಲೂಕಿನಲ್ಲಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ಮಕ್ಕಳಿಗೆ ಒಂದು ಸುವರ್ಣ ಅವಕಾಶವಾಗಿದೆ ಎಂದು ಅಭಿಪ್ರಾಯಪಟ್ಟರು.

ಸುದ್ದಿ ಮಾಧ್ಯಮವೊಂದು ಈ ರೀತಿಯ ಸಾಮಾಜಿಕ ಕಳಕಳಿಯನ್ನು ಮೆರೆಯುತ್ತಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಹನೂರು ತಾಲೂಕಿನ ಬಹುಭಾಗ ಅರಣ್ಯ ಪ್ರದೇಶದಿಂದ ಕೂಡಿದೆ. ಪ್ರತಿನಿತ್ಯ ಅರಣ್ಯ ಮತ್ತು ಮಾನವ ಸಂಘರ್ಷ ನಡೆಯುತ್ತಿರುತ್ತದೆ. ಮಾನವ ಮತ್ತು ವನ್ಯಜೀವಿ ಹೊಂದಾಣಿಕೆಯಿಂದ ಬದುಕಬೇಕಾದ ಅನಿವಾರ್ಯತೆ ಇರುವುದರಿಂದ ಅರಣ್ಯ ಮತ್ತು ವನ್ಯಜೀವಿಗಳ ಅರಿವು ಅತ್ಯಗತ್ಯ. ಈ ಹಿನ್ನಲೆಯಲ್ಲಿ ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ ಉತ್ತಮ ವೇದಿಕೆ ನಿರ್ಮಾಣ ಮಾಡಿದೆ. ಈ ಸಂಸ್ಥೆಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಅರಣ್ಯ ಸಚಿವರೊಡನೆ ಚಾಲನೆ ನೀಡಿದ್ದಾರೆ. ರಾಜ್ಯಾದ್ಯಂತ ಈ ಒಂದು ಕಾರ್ಯಕ್ರಮ ನಡೆಯುತ್ತಿದ್ದು, ನಮ್ಮ ಭಾಗದ ಮಕ್ಕಳು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಲಿ, ನಮ್ಮ ಭಾಗದಲ್ಲಿ ಮುಂಗಾರು ಮಳೆ ಸಮರ್ಪಕವಾಗಿ ಬರುವುದಿಲ್ಲ. ನಮ್ಮ ಜಿಲ್ಲೆ ಉತ್ತಮ ಗಾಳಿ ಹೊಂದಿರುವ ಜಿಲ್ಲೆಗಳಲ್ಲಿ 4ನೇ ಸ್ಥಾನ ಪಡೆದಿರುವುದು ಹೆಮ್ಮೆಯ ವಿಷಯ ಎಂದರು.

ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ದತ್ತೇಶ್‌ ಕುಮಾರ್‌ ಮಾತನಾಡಿ, ಮಕ್ಕಳಿಗಾಗಿ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿ ಮಾಡಬೇಕಾಗಿದೆ ಎಂದರು.ಕನ್ನಡಪ್ರಭ ಪ್ರಧಾನ ವರದಿಗಾರ ದೇವರಾಜು ಕಪ್ಪಸೋಗೆ ಮಾತನಾಡಿ, ಕನ್ನಡಪ್ರಭ, ಸುವರ್ಣ ನ್ಯೂಸ್‌ನಿಮದ ಹಮ್ಮಿಕೊಂಡಿರುವ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಗೆ ಗ್ರಾಮೀಣ ಭಾಗದ ಮಕ್ಕಳು ಸಹ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆ ತೋರುತ್ತಿದ್ದಾರೆ. ಗ್ರಾಮೀಣ ಮಕ್ಕಳ ಪ್ರತಿಭೆ ರಾಜ್ಯ ಹಾಗೂ ರಾಷ್ಟ್ರದ ಉದ್ದಗಲಕ್ಕೂ ಈಗಾಗಲೇ ಪಸರಿಸಿರುವಂತಹ ನಾನಾ ನಿದರ್ಶನಗಳು ನಮ್ಮಲ್ಲಿದೆ. ಆ ನಿಟ್ಟಿನಲ್ಲಿ ಹನೂರು ತಾಲೂಕಿನಲ್ಲಿ ಬಹಳ ವಿಶೇಷವಾಗಿ ನಮ್ಮ ಚಿತ್ರಕಲಾ ಸ್ಪರ್ಧೆ ಆಯೋಜನೆಗೊಂಡು ಅತ್ಯಂತ ಯಶಸ್ವಿಯಾಗಿದ್ದು. ಮಕ್ಕಳಲ್ಲಿ ಇರುವಂತಹ ನೈಜವಾದಂತ ಪ್ರತಿಭೆಯನ್ನ ಹೊರತೆಗೆಯಲು ಇದು ಸಹ ಒಂದು ಉತ್ತಮವಾದ ವೇದಿಕೆಯಾಗಿದೆ. ಈ ವೇದಿಕೆಯನ್ನು ಸದುಪಯೋಗ ಮಾಡಿಕೊಂಡು ಮಕ್ಕಳು ಉತ್ತಮ ಚಿತ್ರಕಲಾ ಬರಹಗರಾಗಿ ಹೊರಹೊಮ್ಮಬೇಕು ಎಂದು ಸಲಹೆ ನೀಡಿದರು.

ತಾಲೂಕು ದಂಡಾಧಿಕಾರಿ ಚೈತ್ರಾ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಇಸಒಗಳಾದ ಅಶೋಕ್ , ರವೀಂದ್ರ, ಚಿನ್ನಪ್ಪಯ್ಯ, ಮಹೇಶ್, ವೆಂಕಟರಾಜು, ನಲಿಕಲಿ ಕೃಷ್ಣ, ಶಿವಮಲ್ಲು ಹಾಗೂಮುಖಂಡರಾದ ಅಮೋಘ, ವೃಷಬೇಂದ್ರ ಹಾಗೂ ಕನ್ನಡಪ್ರಭ

ವರದಿಗಾರರಾದ ಜಿ.ದೇವರಾಜನಾಯ್ದು, ಎನ್‌.ನಾಗೇಂದ್ರಸ್ವಾಮಿ, ಜಿ. ವೀರಭದ್ರನಾಯಕ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತದಾರರ ಶುದ್ಧೀಕರಣವೇ ಎಸ್‌ಐಆರ್‌: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಹಣ ಸುಲಿಗೆ ಮಾಡ್ತಿದ್ದ ನಕಲಿ ಪಿಎಸ್ಐ ಬಂಧನ