ಕನ್ನಡಪ್ರಭ ವಾರ್ತೆ ವಿಜಯಪುರ
ಕನ್ನಡಪ್ರಭ ವರದಿ ಪ್ರಕಟವಾಗುತ್ತಿರುವ ಹಿನ್ನೆಲೆ ಶಾಲಾ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲು ಜಿಲ್ಲಾಡಳಿತ, ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿವೆ. ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಸಹ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಮಳೆಗಾಲ ಆರಂಭವಾಗುವುದರಿಂದ ವಿದ್ಯಾರ್ಥಿಗಳ, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಲ್ಲಿರುವ ವಿವಿಧ ಶಾಲಾ-ಕಾಲೇಜು ಕೊಠಡಿಗಳು, ಅಂಗನವಾಡಿ ಕಟ್ಟಡಗಳ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು. ಕಟ್ಟಡಗಳು ಸುಸ್ಥಿತಿಯಲ್ಲಿರುವುದನ್ನು ಮನದಟ್ಟು ಮಾಡಿಕೊಳ್ಳಬೇಕು. ದುರಸ್ತಿಗೊಳಪಡುವ ಕಟ್ಟಡವನ್ನು ಸೂಕ್ತ ದುರಸ್ತಿಗೆ ಕ್ರಮ ವಹಿಸಬೇಕು. ದುರಸ್ತಿಗೆ ಯೋಗ್ಯವಲ್ಲದ ಕಟ್ಟಡಗಳನ್ನು ಡೆಮಾಲಿಶ್ ಮಾಡಲು ಕ್ರಮ ವಹಿಸಬೇಕು. ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು ಎಂದು ಸಚಿವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ದುರಸ್ತಿ ಶಾಲೆಗಳಿಗೆ ಖುದ್ದಾಗಿ ಭೇಟಿ ನೀಡಿ:ವಿದ್ಯಾರ್ಥಿಗಳ, ಮಕ್ಕಳ ವಿಷಯವಾಗಿರುವುದರಿಂದ ಎಚ್ಚರಿಕೆಯಿಂದ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಅಧೀನದ ಪಿಡಿಒ, ಜಿಪಂ ಅಭಿಯಂತರರೊಂದಿಗೆ ಇಂತಹ ಶಾಲಾ ಕೊಠಡಿಗಳಿಗೆ ಖುದ್ದಾಗಿ ಭೇಟಿ ನೀಡಿ ಸೂಕ್ತ ಪರಿಶೀಲನೆ ನಡೆಸಬೇಕು. ಯಾವುದೇ ಅನಾಹುತಗಳಾಗದಂತೆ ಜಿಲ್ಲಾಧಿಕಾರಿಗಳು ಸಹ ತೀವ್ರ ನಿಗಾ ಇಡುವಂತೆ ಸಚಿವ ಎಂ.ಬಿ.ಪಾಟೀಲ್ ಆಡಳಿತವರ್ಗಕ್ಕೆ ಸೂಚಿಸಿದರು.
ಜಿಲ್ಲೆಯಲ್ಲಿ 121 ಶಾಲೆಗಳು ದುರಸ್ತಿ ಆಗಬೇಕಿದ್ದು, ಅವುಗಳ ಒಟ್ಟು ವೆಚ್ಚ ₹1331 ಕೋಟಿ ಆಗಲಿದೆ. ಅದರ ಎಸ್ಟಿಮೇಟ್ ಕಳುಹಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದರು.
ಕೋಟ್:
-ಎಂ.ಬಿ.ಪಾಟೀಲ್, ಉಸ್ತುವಾರಿ ಸಚಿವ.