ಮಾಜಿ ಶಾಸಕ ನಡಹಳ್ಳಿ, ಕೂಡಲಶ್ರೀಗಳ ಕ್ಷಮೆಯಾಚಿಸಲಿ

KannadaprabhaNewsNetwork |  
Published : Jan 04, 2024, 01:45 AM IST
ಸಸಸ | Kannada Prabha

ಸಾರಾಂಶ

ಎ.ಎಸ್.ಪಾಟೀಲ್ ನಡಹಳ್ಳಿ ಕೂಡಲಶ್ರೀಗಳ ಬಹಿರಂಗ ಕ್ಷಮೆಯಾಚಿಸಬೇಕು: ಮಹಾಂತಗೌಡ ಪಾಟೀಲ್‌

ಕನ್ನಡಪ್ರಭ ವಾರ್ತೆ ಇಳಕಲ್ಲ

ಕೂಡಲಸಂಗಮ ಪಂಚಮಸಾಲಿ ಪೀಠದ ಪ್ರಥಮಜಗದ್ಗುರು ಬಸವ ಜಯಂತಿಯ ಮೃತ್ಯುಂಜಯ ಸ್ವಾಮಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮುದ್ದೇಬಿಹಾಳ ಮಾಜಿ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಇಳಕಲ್ಲ ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಮಹಾಂತಗೌಡ ಪಾಟೀಲ್‌ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂಜ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಈ ಕೂಡಲೇ ಬಹಿರಂಗಕ್ಷಮೆಯಾಚಿಸಬೇಕು. ಪೂಜ್ಯರ ವಿರುದ್ಧ ಹೇಳಿಕೆ ನೀಡಿರುವುದು ಪಂಚಮಸಾಲಿ ಸಮಾಜದವರಿಗೆ ನೋವುಂಟು ಮಾಡಿದೆ. ನಡಹಳ್ಳಿ ಅವರ ಈ ಹೇಳಿಕೆ ಖಂಡಿಸಿ ಇಳಕಲ್ ಹಾಗೂ ಹುನುಗುಂದ ಅವಳಿ ತಾಲೂಕಿನ ಪಂಚಮಸಾಲಿ ಸಮಾಜದ ವತಿಯಿಂದ ಬರುವ ಡಿ.5ರಂದು ಹುನುಗುಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ಕ್ಷಮೆಯಾಚಿಸದಿದ್ದರೆ ನಡಹಳ್ಳಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿಎಚ್ಚರಿಕೆ ನೀಡಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜದ ಇಳಕಲ್ಲ ತಾಲೂಕು ಘಟಕದ ಅಧ್ಯಕ್ಷ ಮಹಾಂತಗೌಡ ಪಾಟೀಲ್( ಜಿಎಂಇ ), ಪ್ರಧಾನ ಕಾರ್ಯದರ್ಶಿ ಹುಚ್ಚಪ್ಪ ಐವಳ್ಳಿ, ಯುವ ಘಟಕದ ಅಧ್ಯಕ್ಷ ಬಸು ಪಾಟೀಲ್, ಯುವಘಟಕದ ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬೊಮ್ಮಸಾಗರ, ರೇವನೆಪ್ಪ ದೇಗಿನಾಳ, ಮಾಂತೇಶ ಬೀಳಗಿ, ಮಂಜುನಾಥ ಪಲ್ಲೇದ, ನಿಂಗಪ್ಪ ಲೋಟಗೇರಿ, ಮಹೇಶ ಭಮಸಾಗರ, ವಿಶ್ವನಾಥ ಪಾಟೀಲ, ಚಂದ್ರು ಗೊಂದಿ ಉಪಸ್ಥಿತರಿದ್ದರು.

---

ಬಾಕ್ಸ್‌

ನಡಹಳ್ಳಿ ಹೇಳಿಕೆ ಖಂಡಿಸಿ ಪ್ರತಿಭಟನೆ ನಾಳೆ

ಹುನಗುಂದ: ಮುದ್ದೇಬಿಹಾಳ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮಿಗಳಿಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಡಿ.5 ರಂದು ಪಟ್ಟಣದ ಬಸವ ಮಂಟಪದಿಂದ ತಹಸೀಲ್ದಾರ್‌ ಕಚೇರಿವರೆಗೆ ಪ್ರತಿಭಟನೆ ರ್‍ಯಾಲಿ ನಡೆಸಿ ನಡಹಳ್ಳಿ ಪ್ರತಿಕೃತಿ ದಹನವನ್ನು ವಿ.ಮ.ಸರ್ಕಲ್‌ನಲ್ಲಿ ಮಾಡಲಾಗುವುದು. ಆದ್ದರಿಂದ ತಾಲೂಕಿನ ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಶಂಕ್ರಪ್ಪ ನೇಗಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!