- ಆವರಗೆರೆ ಬಳಿ ಪಂಚನಾಮೆಗೆ ಹೋದಾಗ ಡಿವೈಎಸ್ಪಿ, ಕಾನ್‌ಸ್ಟೇಬಲ್ ಮೇಲೆ ಹಲ್ಲೆ - ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗಾಳಿಯಲ್ಲಿ ಗುಂಡು ಹಾರಿಸಿ, ಎಚ್ಚರಿಸಿ, ಫೈರಿಂಗ್
- - -
ಕನ್ನಡಪ್ರಭ ವಾರ್ತೆ ದಾವಣಗೆರೆರೌಡಿ ಶೀಟರ್, ಕಾಂಗ್ರೆಸ್ ಮುಖಂಡ ಕಣುಮ ಅಲಿಯಾಸ್ ಕಣುಮ ಸಂತೋಷನ ಕೊಲೆ ಆರೋಪಿ ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸ್ ಅಧಿಕಾರಿ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದಾಗ ನಗರ ಡಿವೈಎಸ್ಪಿ ಶರಣ ಬಸವೇಶ್ವರ ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ ಘಟನೆ ಆವರಗೆರೆ ಸಮೀಪ ಬುಧವಾರ ಸಂಜೆ ನಡೆದಿದೆ.
ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಸಂಜೆ 10 ಆರೋಪಿಗಳು ಶರಣಾಗಿದ್ದರು. ಕಾನೂನು ಪ್ರಕ್ರಿಯೆಯನ್ನು ಮುಗಿಸಿ, ದಾವಣಗೆರೆ ವಿದ್ಯಾನಗರ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದರು.
ಡಿವೈಎಸ್ಪಿ ಶರಣ ಬಸವೇಶ್ವರ ತಮ್ಮ ಹಾಗೂ ಸಿಬ್ಬಂದಿ ಆತ್ಮರಕ್ಷಣೆಗಾಗಿ ಚವಳಿ ಸಂತೋಷ ತಪ್ಪಿಸಿಕೊಳ್ಳದಂತೆ ಎಚ್ಚರಿಕೆ ನೀಡಿ, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆರೋಪಿ ಸೊಪ್ಪು ಹಾಕದಿದ್ದಾಗ ಚವಳಿ ಸಂತು ಕಾಲಿಗೆ ಗುಂಡು ಹಾರಿಸಿದ್ದಾರೆ. ಗುಂಡೇಟಿನಿಂದ ಓಡಲಾಗದೇ ಕುಸಿದು ಬಿದ್ದ ಚವಳಿ ಸಂತುನನ್ನು ಪೊಲೀಸರು ವಶಕ್ಕೆ ಪಡೆದರು.
ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿಜಯಕುಮಾರ ಎಂ.ಸಂತೋಷ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ನಗರ ಡಿವೈಎಸ್ಪಿ ಶರಣ ಬಸವೇಶ್ವರ, ಕಾನ್‌ಸ್ಟೇಬಲ್ ಭೋಜಪ್ಪ ಯೋಗಕ್ಷೇಮ ವಿಚಾರಿಸಿ, ಘಟನೆ ಬಗ್ಗೆ ಮಾಹಿತಿ ಪಡೆದರು.
(ಕೋಟ್)
ರೌಡಿ ಶೀಟಲ್ ಕಣುಮ ಸಂತೋಷನ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಚವಳಿ ಸಂತೋಷ ಎಂಬಾತ ಪಂಚನಾಮೆಗೆ ಕರೆದೊಯ್ದಿದ್ದ ವೇಳೆ ನಗರ ಡಿವೈಎಸ್ಪಿ ಬಿ.ಶರಣ ಬಸವೇಶ್ವರ, ಪೇದೆ ಭೋಜಪ್ಪ ಮೇಲೆ ಹಲ್ಲೆ ಮಾಡಿ, ತಪ್ಪಿಸಿಕೊಳ್ಳಳು ಯತ್ನಿಸಿದ್ದಾನೆ. ತಪ್ಪಿಸಿಕೊಳ್ಳದಂತೆ ಎಚ್ಚರಿಕೆ ನೀಡಿದರೂ ಆತ ಕೇಳಿಲ್ಲ. ಆಗ ಆತ್ಮರಕ್ಷಣೆ ಹಾಗೂ ಆರೋಪಿಯನ್ನು ಹಿಡಿಯಲು ಆತನ ಮೇಲೆ ಫೈಯರಿಂಗ್ ಮಾಡಲಾಗಿದೆ. ಚಿಕಿತ್ಸೆ ಕೊಡಿಸಲಾಗಿದೆ.
- - -
-7ಕೆಡಿವಿಜಿ7, 8, 9, 10:ದಾವಣಗೆರೆಯ ಆವರಗೆರೆ ಬಳಿ ಪೊಲೀಸರ ಮೇಲೆ ಹಲ್ಲೆ ಮಾಡಿ, ತಪ್ಪಿಸಿಕೊಳ್ಳಲು ಯತ್ನಿಸಿದ ಚವಳಿ ಸಂತು ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಯಿತು. -7ಕೆಡಿವಿಜಿ11: ದಾವಣಗೆರೆ ನಗರ ಡಿವೈಎಸ್ಪಿ ಬಿ.ಶರಣ ಬಸವೇಶ್ವರ, ಕಾನ್‌ಸ್ಟೇಟೇಬಲ್ ಭೋಜಪ್ಪ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು.