ಗಾಬರಿಗೊಂಡ ಗ್ರಾಮಸ್ಥರು । ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಅರಣ್ಯ ಇಲಾಖೆಯಿಂದ ಪ್ರಕರಣ ದಾಖಲು
ತಾಲೂಕಿನ ಕಾನೂರು ಗ್ರಾಮದ ರಾಮನಹಡ್ಲು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಮುಖ್ಯ ರಸ್ತೆಯ ಪಕ್ಕದಲ್ಲೇ 30 ಮಂಗಗಳ ಮೃತದೇಹ ಪತ್ತೆಯಾಗಿದ್ದು ಗ್ರಾಮಸ್ಥರಲ್ಲಿ ಗಾಬರಿ ಮೂಡಿಸಿತು.
ಬೆಳಿಗ್ಗೆ ರಾಮನಹಡ್ಲು ಎಂಬಲ್ಲಿ ಚಿಕ್ಕಅಗ್ರಹಾರ ವಲಯ ಅರಣ್ಯ ಇಲಾಖೆ ವ್ಯಾಪ್ತಿಯ ಮೇಗರಮಕ್ಕಿ ಮೀಸಲು ಅರಣ್ಯಕ್ಕೆ ಸೇರಿದ ಜಾಗದಲ್ಲಿ ರಸ್ತೆಯಿಂದ 20 ಮೀಟರ್ ದೂರದಲ್ಲಿ 30 ಮಂಗಗಳ ಮೃತದೇಹ ಗ್ರಾಮಸ್ಥರ ಕಣ್ಣಿಗೆ ಬಿದ್ದಿದೆ. ಆತಂಕಗೊಂಡ ಗ್ರಾಮಸ್ಥರು ತಕ್ಷಣ ಅರಣ್ಯ ಇಲಾಖೆ, ಗ್ರಾಮ ಪಂಚಾಯಿತಿ ಹಾಗೂ ಆರೋಗ್ಯ ಇಲಾಖೆ ಗಮನಕ್ಕೆ ತಂದಿದ್ದಾರೆ. ತಕ್ಷಣ ಚಿಕ್ಕಅಗ್ರಹಾರ ವಲಯ ಅರಣ್ಯಾಧಿಕಾರಿ ಸಚಿನ್, ಎಸಿಎಫ್ ಸುದರ್ಶನ್, ಕಾನೂರು ಉಪ ವಲಯ ಅರಣ್ಯಾಧಿಕಾರಿ ರಂಗನಾಥ್, ಕಾನೂರು ಗ್ರಾಮ ಪಂಚಾಯಿತಿ ಪಿಡಿಒ ಶ್ರೀನಿವಾಸ್, ಗ್ರಾಮ ಆಡಳಿತಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೇಸಿಗೆ ದಿನಗಳಲ್ಲಿ ತಾಲೂಕಿನ ಕೆಲವು ಗ್ರಾಮಗಳಲ್ಲಿ ಮಂಗನ ಕಾಯಿಲೆ ಕಂಡು ಬಂದ ಹಿನ್ನೆಲೆಯಲ್ಲಿ ಎಚ್ಚೆತ್ತ ಕಟ್ಟಿನಮನೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ವಿನಯಕುಮಾರ್ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೊಲೀಸ್ ಠಾಣಾಧಿಕಾರಿ ನಿರಂಜನ ಗೌಡ ಆಗಮಿಸಿ ಪರಿಶೀಲನೆ ನಡೆಸಿದರು.
ಮಂಗಗಳ ಅಸಹಜ ಸಾವು ಹಿನ್ನಲೆಯಲ್ಲಿ ಪಶು ವೈದ್ಯರಿಂದ ಪೋಸ್ಟ್ ಮಾರ್ಟಂ ನಡೆಸಲಾಯಿತು. ಮಂಗಗಳ ಸಾವಿಗೆ ನಿಖರ ಕಾರಣ ತಿಳಿಯಲು ಅವುಗಳ ದೇಹದ ಕೆಲವು ಭಾಗಗಳನ್ನು ತೆಗೆದಿದ್ದು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ತೀರ್ಮಾನಿಸಲಾಗಿದೆ. 1972 ವನ್ಯಜೀವಿ ಸಂರಕ್ಷಣ ಕಾಯ್ದೆಯಡಿ ಅರಣ್ಯ ಇಲಾಖೆಯವರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. -- ಕೋಟ್--
ಸಚಿನ್,
ನರಸಿಂಹರಾಜಪುರ --ಕೋಟ್--
ಡಾ.ವಿಜಯಕುಮಾರ್,
, ನರಸಿಂಹರಾಜಪುರ