ಕನ್ಯಾಲು ಬ್ರಹ್ಮಕಲಶೋತ್ಸವ ಆಮಂತ್ರಣ ಬಿಡುಗಡೆ

KannadaprabhaNewsNetwork |  
Published : Mar 14, 2026, 02:45 AM IST
ಕನ್ಯಾಲು ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ | Kannada Prabha

ಸಾರಾಂಶ

ಕಾರ್ಕಳ ತಾಲೂಕು ಈದು ಗ್ರಾಮದ ಶ್ರೀ ಮುಜಿಲ್ನಾಯ ದೈವಸ್ಥಾನ ನಾಡಿಸ್ಥಾನದಲ್ಲಿ ಕನ್ಯಾಲು ನೂರಾಳ್ ಬೆಟ್ಟಿನಲ್ಲಿ ಏ. 1ರಿಂದ 3ರವರೆಗೆ ನಡೆಯಲಿರುವ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.

ಕಾರ್ಕಳ: ಕಾರ್ಕಳ ತಾಲೂಕು ಈದು ಗ್ರಾಮದ ಶ್ರೀ ಮುಜಿಲ್ನಾಯ ದೈವಸ್ಥಾನ ನಾಡಿಸ್ಥಾನದಲ್ಲಿ ಕನ್ಯಾಲು ನೂರಾಳ್ ಬೆಟ್ಟಿನಲ್ಲಿ ಏ. 1ರಿಂದ 3ರವರೆಗೆ ನಡೆಯಲಿರುವ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಡೆಯಿತು.ಈ ಸಂದರ್ಭ ಸಮಾಜದ ಗಣ್ಯರು ಹಾಗೂ ಭಕ್ತರ ಸಮ್ಮುಖದಲ್ಲಿ ಜಯವರ್ಮ ಜೈನ್ ಮಾಪಲು ಅವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಅವರು, ಕನ್ಯಾಲು ಶ್ರೀ ಮುಜಿಲ್ನಾಯ ದೈವಸ್ಥಾನವು ಪ್ರದೇಶದ ಭಕ್ತರ ನಂಬಿಕೆಯ ಪ್ರಮುಖ ಕೇಂದ್ರವಾಗಿದ್ದು, ನಡೆಯಲಿರುವ ಬ್ರಹ್ಮಕಲಶೋತ್ಸವವು ಕ್ಷೇತ್ರದ ಇತಿಹಾಸದಲ್ಲಿ ಮಹತ್ವದ ಘಟ್ಟವಾಗಲಿದೆ ಎಂದು ಹೇಳಿದರು. ಮಹೋತ್ಸವದ ಯಶಸ್ಸಿಗಾಗಿ ಎಲ್ಲ ಭಕ್ತಾದಿಗಳು ಒಗ್ಗಟ್ಟಿನಿಂದ ಸಹಕರಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಮುಜಿಲ್ನಾಯ ದೈವಸ್ಥಾನ ಆಡಳಿತ ಮೊಕ್ತೇಸರ ಅಶೋಕ್ ಕುಮಾರ್ ಜೈನ್ ಈದು,

ನೇಮಿರಾಜ್ ಕಡಂಬ ಕಂಠಾವು ಗುತ್ತು, ಜಯಕರ ಜೈನ್ ಈದು ಗುತ್ತು ಪುರುಷೋತ್ತಮ ಗೌಡ, ಶ್ರೀಧರ್ ಗೌಡ ಈದು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡೀಕಯ್ಯ ಗೌಡ ಕನ್ಯಾಲು ಸೇರಿದಂತೆ ಗುತ್ತಿನವರು, ಬರ್ಕೆಯವರು, ದೈವಸ್ಥಾನ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ವಿವಿಧ ಸಮಿತಿಗಳ ಸದಸ್ಯರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕನ್ಯಾಲು ನೂರಾಳ್ ಬೆಟ್ಟಿನಲ್ಲಿ ನಡೆಯಲಿರುವ ಬ್ರಹ್ಮಕಲಶಾಭಿಷೇಕ ಮಹೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಏಪ್ರಿಲ್ 1ರಿಂದ 3ರವರೆಗೆ ನಡೆಯುವ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕೆಂದು ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಮನವಿ ಮಾಡಿದೆ. ಗಂಗಾಧರ ಗೌಡ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ನೋನಯ್ಯ ಗೌಡ ರೆಂಜಾಳ ಧನ್ಯವಾದವಿತ್ತರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುಕೆಪಿ ಸಂತ್ರಸ್ತರಿಗೆ ಪರಿಹಾರ ಸಮಸ್ಯೆ ಇಲ್ಲ: ಸಚಿವ ತಿಮ್ಮಾಪುರ
ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲೆಗೆ ಉತ್ತಮ ಫಲಿತಾಂಶ ನಿರೀಕ್ಷೆ