ಕಾಪು ಮಾರಿಯಮ್ಮ ಬ್ರಹ್ಮಕಲಶೋತ್ಸವ: ಗ್ರಾಮ ಸಮಿತಿ, ವಾರ್ಡ್ ಸಮಿತಿ ಸಭೆ

KannadaprabhaNewsNetwork |  
Published : Sep 18, 2024, 01:54 AM IST
ಕಾಪು16 | Kannada Prabha

ಸಾರಾಂಶ

ಕಾಪು ಮಾರಿಯಮ್ಮ ಬ್ರಹ್ಮಕಲಶೋತ್ಸವ ಹಿನ್ನೆಲೆ ಗ್ರಾಮ ಮತ್ತು ಪುರಸಭಾ ವ್ಯಾಪ್ತಿಯ ಪ್ರತಿಯೊಂದು ವಾರ್ಡ್‌ಗಳಲ್ಲಿ ಸಮಿತಿ ರಚಿಸಲಾಗಿದ್ದು, ಈ ಎಲ್ಲ ಸಮಿತಿಯ ಮುಖ್ಯ ಸಂಚಾಲಕರ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಕಾಪು

ಕಾಪು ಮಾರಿಯಮ್ಮನ ಗುಡಿಯ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಉಚ್ಚಂಗಿ ದೇವಿಯ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನವದುರ್ಗಾ ಲೇಖನ ಯಜ್ಞ ಅಭಿನಾಯಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮ ಮತ್ತು ಪುರಸಭಾ ವ್ಯಾಪ್ತಿಯ ಪ್ರತಿಯೊಂದು ವಾರ್ಡ್‌ಗಳಲ್ಲಿ ಸಮಿತಿ ರಚಿಸಲಾಗಿದ್ದು, ಈ ಎಲ್ಲ ಸಮಿತಿಯ ಮುಖ್ಯ ಸಂಚಾಲಕರ ಸಭೆ ನಡೆಯಿತು. ಸುಮಾರು 300ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು.ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ರಘುಪತಿ ಭಟ್, ಲೇಖನ ಯಜ್ಞದ ಬಗ್ಗೆ, ಕಚೇರಿಯಲ್ಲಿ ಮತ್ತು ವೆಬ್ಸೈಟ್‌ನಲ್ಲಿ ನೋಂದಾಯಿಸುವ ಬಗ್ಗೆ ತಿಳಿಸಿದರು.ಕ್ಷೇತ್ರ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಎಲ್ಲರೂ ಒಂದಾಗಿ ಕಾಪುವಿನ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ತಯಾರಾಗೋಣ, ಇದರ ಪೂರ್ವಭಾವಿಯಾಗಿ ನಡೆಯಲಿರುವ ನವದುರ್ಗಾ ಲೇಖನ ಯಜ್ಞದಲ್ಲಿ ಪ್ರತಿಯೊಬ್ಬರು 9ರ ಒಂದು ತಂಡವನ್ನು ರಚಿಸಿಕೊಂಡು, ಲೇಖನವನ್ನು ಬರೆದು ಅಮ್ಮನಿಗೆ ಸಮರ್ಪಿಸೋಣ, ಇದು ಅಮ್ಮ ನಮಗೆ ನೀಡಿರುವ ಅವಕಾಶ ಎಂದರು.ಈ ಸಂದರ್ಭದಲ್ಲಿ ಅಭಿವೃದ್ಧಿ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಉಪಾಧ್ಯಕ್ಷರಾದ ಮಾಧವ ಆರ್. ಪಾಲನ್, ಮನೋಹರ್ ಎಸ್. ಶೆಟ್ಟಿ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾ ಮತ್ತಿತರರು ಉಪಸ್ಥಿತರಿದ್ದರು.ನವದುರ್ಗಾ ಲೇಖನ ಯಜ್ಞ ಸಮಿತಿಯ ಪ್ರಧಾನ ಕಾರ್ಯದರ್ಶಿ, ಯೋಗೀಶ್ ವಿ. ಶೆಟ್ಟಿ ಸ್ವಾಗತಿಸಿದರು. ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನವದುರ್ಗಾ ಲೇಖನ ಯಜ್ಞ ಸಮಿತಿಯ ಸಂಘಟನಾ ಕಾರ್ಯದರ್ಶಿ ಸಂದೀಪ್ ಕುಮಾರ್ ಮಂಜ ಮತ್ತು ಅನಿಲ್ ಕುಮಾರ್ ಕಾಪು ಕಾರ್ಯಕ್ರಮವನ್ನು ನಿರೂಪಿಸಿದರು. ಗ್ರಾಮ ಸಮಿತಿಯ ಪ್ರಧಾನ ಸಂಚಾಲಕ ಅರುಣ್ ಶೆಟ್ಟಿ ಪಾದೂರು ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ