ಕನ್ನಡಪ್ರಭ ವಾರ್ತೆ ಕಾಪು
ಕಾರ್ಯಕ್ರಮದಲ್ಲಿ ಕರ್ನಾಟಕ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಸಂವಿಧಾನದ ಉಗಮ, ಅಗತ್ಯ, ಮಹತ್ವಗಳ ಬಗ್ಗೆ ಮಾತನಾಡಿದರು.ಕಾಪು ಶಾಸಕ ಸುರೇಶ್ ಶೆಟ್ಟಿ, ಪಕ್ಷದ ಉಡುಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ರಾಜ್ಯ ಬಿಜೆಪಿ ಎಸ್.ಸಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ದಿನಕರ್ ಬಾಬು, ರಾಜ್ಯ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ ಜಿಲ್ಲಾ ಎಸ್.ಸಿ ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಕಾಪು ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಪಕ್ಷದ ಪ್ರಮುಖರಾದ ಶ್ರೀಕಾಂತ್ ನಾಯಕ್, ಗೀತಾಂಜಲಿ ಸುವರ್ಣ ಮತ್ತು ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.