ಕನ್ನಡಪ್ರಭ ವಾರ್ತೆ ಭಾಲ್ಕಿ
ನಂತರ ಮಾತನಾಡಿದ ಸಚಿವರು, ದೇಶದ ಪ್ರಗತಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ದೊಡ್ಡದಿದೆ. ಆದರೆ, ಕಳೆದ ಎರಡು ಅವಧಿಯಿಂದ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ ಸರ್ಕಾರದಿಂದ ದೇಶದ ಅಭಿವೃದ್ಧಿಗೆ ಪೆಟ್ಟು ಬಿದ್ದಿದೆ. ಜನತೆಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಜೀವನಾವಶ್ಯಕ ಬೆಲೆಗಳ ಏರಿಕೆಯಿಂದ ಜನರು ರೋಸಿ ಹೋಗಿದ್ದಾರೆ. ಜಿಲ್ಲೆಯ ಹಾಲಿ ಸಂಸದರು ಜಿಲ್ಲೆ ಕಡೆಗಣಿಸಿದ್ದಾರೆ. ಹೀಗಾಗಿ ಜನ ಬದಲಾವಣೆ ಬಯಸಿದ್ದಾರೆ ಎಂದರು.
ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಪ್ರತಿ ಮನೆ ಮನೆಗೂ ಭೇಟಿ ನೀಡಿ ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಹಾಲಿ ಸಂಸದರ ವೈಫಲ್ಯ ಜನರಿಗೆ ತಿಳಿಸಿ ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಿಸಲು ಪ್ರಯತ್ನಿಸಬೇಕೆಂದರು.ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡ ಶಿವಶಂಕರ ಪಾಟೀಲ್, ಗುತ್ತಿಗೆದಾರ ರಾಜಕುಮಾರ ಬಿರಾದಾರ ಸೇರಿದಂತೆ ಹಲವರು ಇದ್ದರು.
ಇದೇ ಸಂದರ್ಭದಲ್ಲಿ ಪ್ರವೀಣ, ವರುಣ, ರಾಜು, ಸಿದ್ದು, ಮಹಾದೇವ, ಸಚಿನ, ರೇವಣಸಿದ್ದ, ಗಣೇಶ, ಸಂಗಮೇಶ, ಆಕಾಶ, ಶಿವು, ಆನಂದ, ಸಿದ್ರಾಮ, ಮೋಹನ, ವಿನೋದ ಸೇರಿದಂತೆ ಹಲವು ಯುವಕರು ಬಿಜೆಪಿ ತೊರೆದು ಸಚಿವ ಖಂಡ್ರೆ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿದರು.