ಮೇ 24ರಂದು ಶಾಲಾ ಬ್ಯಾಗ್, ಅಗತ್ಯ ಶಿಕ್ಷಣ ಪರಿಕರ ವಿತರಣೆ

KannadaprabhaNewsNetwork |  
Published : May 01, 2026, 02:15 AM IST
ಆಹ್ವಾನ ಪತ್ರಿಕೆ ಬಿಡುಗಡೆ | Kannada Prabha

ಸಾರಾಂಶ

ರ್ನಾಟಕ ಜಯ ಭೀಂ ಯುವ ಸೇನಾ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ಜೈ ಭೀಂ ಯುವ ಸೇನೆ ವತಿಯಿಂದ ದ್ವಿತೀಯ ವರ್ಷದ ಸಂಭ್ರಮದ ಅಂಗವಾಗಿ ಮೇ 24ರಂದು ಕಾರ್ಕಳದ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ಪ.ಜಾತಿ ಪಂಗಡದ 1ರಿಂದ 10ನೇ ತರಗತಿ ವರೆಗೆ ಅಭ್ಯಾಸ ಮಾಡುತ್ತಿರುವ ಸುಮಾರು 2000 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶಾಲಾ ಬ್ಯಾಗ್ ಸೇರಿದಂತೆ ಅಗತ್ಯ ಶಿಕ್ಷಣ ಪರಿಕರಗಳನ್ನು ವಿತರಿಸಲಾಗುತ್ತದೆ ಎಂದು ರಾಜ್ಯಾಧ್ಯಕ್ಷ ಅಶೋಕ್ ಕುಮಾರ್ ಕುಂಟಲ್ಪಾಡಿ

ಕಾರ್ಕಳ: ಕರ್ನಾಟಕ ಜಯ ಭೀಂ ಯುವ ಸೇನಾ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ಜೈ ಭೀಂ ಯುವ ಸೇನೆ ವತಿಯಿಂದ ದ್ವಿತೀಯ ವರ್ಷದ ಸಂಭ್ರಮದ ಅಂಗವಾಗಿ ಮೇ 24ರಂದು ಕಾರ್ಕಳದ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ಪ.ಜಾತಿ ಪಂಗಡದ 1ರಿಂದ 10ನೇ ತರಗತಿ ವರೆಗೆ ಅಭ್ಯಾಸ ಮಾಡುತ್ತಿರುವ ಸುಮಾರು 2000 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶಾಲಾ ಬ್ಯಾಗ್ ಸೇರಿದಂತೆ ಅಗತ್ಯ ಶಿಕ್ಷಣ ಪರಿಕರಗಳನ್ನು ವಿತರಿಸಲಾಗುತ್ತದೆ ಎಂದು ರಾಜ್ಯಾಧ್ಯಕ್ಷ ಅಶೋಕ್ ಕುಮಾರ್ ಕುಂಟಲ್ಪಾಡಿ ಹೇಳಿದರು.

ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಆಹ್ವಾನ ಪತ್ರಿಕೆ ಅನಾವರಣಗೊಳಿಸಿ ಮಾತನಾಡಿದರು.ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ, ಶಾಸಕ ವಿ. ಸುನಿಲ್ ಕುಮಾರ್, ಲೆಕ್ಕಪರಿಶೋಧಕ ಕಮಲಾಕ್ಷ ಕಾಮತ್, ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್, ಎಂಎಲ್ಸಿ ಮಂಜುನಾಥ ಭಂಡಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಮತ್ತು ಇನಯತ್ ಆಲಿ, ಉದ್ಯಮಿ ರಾಮಕೃಷ್ಣ ಆಚಾರ್ಯ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.ಈ ಕುರಿತು, “ನಮ್ಮ ಸಮುದಾಯ ಮೂಲಭೂತವಾಗಿ ಹಿಂದಿದೆ. ಎಲ್ಲರೂ ಒಗ್ಗಟ್ಟಾಗಿ ಸಮುದಾಯವನ್ನು ಮೇಲಕ್ಕೆತ್ತುವ ಕಾರ್ಯ ಮಾಡಬೇಕು. ಸರ್ಕಾರದ ಅನುದಾನಗಳನ್ನು ಬಳಸಿಕೊಂಡು ಮಕ್ಕಳು ವಿದ್ಯಾಭ್ಯಾಸ ಮುಂದುವರಿಸಬೇಕು” ಎಂದು ಹೇಳಿದರು.ಈ ಸಂದರ್ಭದಲ್ಲಿ ಟ್ರಸ್ಟ್ ಸ್ಥಾಪಕಾಧ್ಯಕ್ಷ ಲೋಕೇಶ್ ಎಂ.ಎಸ್ ಮೂಡುಬಿದ್ರೆ, ಉಡುಪಿ ಜಿಲ್ಲಾಧ್ಯಕ್ಷ ರಮೇಶ್ ಕಾರ್ಕಳ, ಮಹಿಳಾ ಅಧ್ಯಕ್ಷೆ ಶಾಂತಿ, ನಿಟ್ಟೆ ಮಹಿಳಾ ಕಾರ್ಯದರ್ಶಿ ಶಾಲಿನಿ ಅಂಡಾರು ಜೊತೆ ಕಾರ್ಯದರ್ಶಿ ಪ್ರೇಮಾ, ಸಂಘಟನಾ ಕಾರ್ಯದರ್ಶಿ ನವೀನ್ ನಿಟ್ಟೆ ತಾಲೂಕು ಅಧ್ಯಕ್ಷ ಸುನಿಲ್ ನಿಂಜೂರು, ಹೆಬ್ರಿ ತಾಲೂಕು ಅಧ್ಯಕ್ಷ ರಮೇಶ್ ಅಜೆಕಾರು, ರಾಜ್ಯ ಉಪಾಧ್ಯಕ್ಷ ಕೃಷ್ಣ ಅಜೆಕಾರು ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಆರ್ ಮೂಡುಬಿದ್ರೆ ಮೊದಲಾದವರು ಉಪಸ್ಥಿತರಿದ್ದರು.

ಕನ್ನಡಪ್ರಭ ವಾರ್ತೆ ಕಾರ್ಕಳಕರ್ನಾಟಕ ಜಯ ಭೀಂ ಯುವ ಸೇನಾ ಸೇವಾ ಟ್ರಸ್ಟ್ ಹಾಗೂ ಕರ್ನಾಟಕ ಜೈ ಭೀಂ ಯುವ ಸೇನೆ ವತಿಯಿಂದ ದ್ವಿತೀಯ ವರ್ಷದ ಸಂಭ್ರಮದ ಅಂಗವಾಗಿ ಮೇ 24ರಂದು ಕಾರ್ಕಳದ ಬಂಡಿಮಠ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕಾರ್ಯಕ್ರಮದಲ್ಲಿ ಪ.ಜಾತಿ ಪಂಗಡದ 1ರಿಂದ 10ನೇ ತರಗತಿ ವರೆಗೆ ಅಭ್ಯಾಸ ಮಾಡುತ್ತಿರುವ ಸುಮಾರು 2000 ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಶಾಲಾ ಬ್ಯಾಗ್ ಸೇರಿದಂತೆ ಅಗತ್ಯ ಶಿಕ್ಷಣ ಪರಿಕರಗಳನ್ನು ವಿತರಿಸಲಾಗುತ್ತದೆ ಎಂದು ರಾಜ್ಯಾಧ್ಯಕ್ಷ ಅಶೋಕ್ ಕುಮಾರ್ ಕುಂಟಲ್ಪಾಡಿ ಹೇಳಿದರು.ಅವರು ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಆಹ್ವಾನ ಪತ್ರಿಕೆ ಅನಾವರಣಗೊಳಿಸಿ ಮಾತನಾಡಿದರು.ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಕಾಂಗ್ರೆಸ್ ಮುಖಂಡ ಉದಯಕುಮಾರ್ ಶೆಟ್ಟಿ, ಶಾಸಕ ವಿ. ಸುನಿಲ್ ಕುಮಾರ್, ಲೆಕ್ಕಪರಿಶೋಧಕ ಕಮಲಾಕ್ಷ ಕಾಮತ್, ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರಕುಮಾರ್, ಎಂಎಲ್ಸಿ ಮಂಜುನಾಥ ಭಂಡಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಮತ್ತು ಇನಯತ್ ಆಲಿ, ಉದ್ಯಮಿ ರಾಮಕೃಷ್ಣ ಆಚಾರ್ಯ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.ಈ ಕುರಿತು, “ನಮ್ಮ ಸಮುದಾಯ ಮೂಲಭೂತವಾಗಿ ಹಿಂದಿದೆ. ಎಲ್ಲರೂ ಒಗ್ಗಟ್ಟಾಗಿ ಸಮುದಾಯವನ್ನು ಮೇಲಕ್ಕೆತ್ತುವ ಕಾರ್ಯ ಮಾಡಬೇಕು. ಸರ್ಕಾರದ ಅನುದಾನಗಳನ್ನು ಬಳಸಿಕೊಂಡು ಮಕ್ಕಳು ವಿದ್ಯಾಭ್ಯಾಸ ಮುಂದುವರಿಸಬೇಕು” ಎಂದು ಹೇಳಿದರು.ಈ ಸಂದರ್ಭದಲ್ಲಿ ಟ್ರಸ್ಟ್ ಸ್ಥಾಪಕಾಧ್ಯಕ್ಷ ಲೋಕೇಶ್ ಎಂ.ಎಸ್ ಮೂಡುಬಿದ್ರೆ, ಉಡುಪಿ ಜಿಲ್ಲಾಧ್ಯಕ್ಷ ರಮೇಶ್ ಕಾರ್ಕಳ, ಮಹಿಳಾ ಅಧ್ಯಕ್ಷೆ ಶಾಂತಿ, ನಿಟ್ಟೆ ಮಹಿಳಾ ಕಾರ್ಯದರ್ಶಿ ಶಾಲಿನಿ ಅಂಡಾರು ಜೊತೆ ಕಾರ್ಯದರ್ಶಿ ಪ್ರೇಮಾ, ಸಂಘಟನಾ ಕಾರ್ಯದರ್ಶಿ ನವೀನ್ ನಿಟ್ಟೆ ತಾಲೂಕು ಅಧ್ಯಕ್ಷ ಸುನಿಲ್ ನಿಂಜೂರು, ಹೆಬ್ರಿ ತಾಲೂಕು ಅಧ್ಯಕ್ಷ ರಮೇಶ್ ಅಜೆಕಾರು, ರಾಜ್ಯ ಉಪಾಧ್ಯಕ್ಷ ಕೃಷ್ಣ ಅಜೆಕಾರು ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಆರ್ ಮೂಡುಬಿದ್ರೆ ಮೊದಲಾದವರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುರುಶಿಷ್ಯ ಸಂಬಂಧ ಕೃಷ್ಣಾರ್ಜುನರಂತಿರಲಿ: ಡಾ.ಶ್ರೀಧರ ಪೈ
ಆರೋಗ್ಯ ಇಲಾಖೆಗೆ ಕೆಬಿಎಲ್‌ 3 ವಾಹನ ಹಸ್ತಾಂತರ